ಆಕಾಶವಾಣಿಯ ಹಿರಿಯ ಕಲಾವಿದ ಡಾ.ಗಣೇಶ್ ಗಂಗೊಳ್ಳಿ(64) ಮೆದುಳಿನ ಕಾಯಿಲೆಗೆ ತುತ್ತಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಕಳೆದ ರಾತ್ರಿ ಸಮಾರಂಭವೊಂದರಲ್ಲಿ ಗಾಯಕರಾಗಿ ಭಾಗವಹಿಸಿ ಮನೆಗೆ ಹಿಂದಿರುಗಿದ್ದ ಗಣೇಶ ಗಂಗೊಳ್ಳಿ ಅವರು ಕುಸಿದು ಬಿದ್ದಿದ್ದರು. ಬಳಿಕ ಮನೆಯವರು ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಮೆದುಳಿನ ಕಾಯಿಲೆಗೆ ತುತ್ತಾಗಿ ನಿಧನರಾಗಿದ್ದಾರೆಂದು ತಿಳಿಸಿದ್ದಾರೆ.
ಮೃತರು ಪತ್ನಿ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಡಾ.ಗಣೇಶ್ ಗಂಗೊಳ್ಳಿ ಅವರು ಉಡುಪಿಯ ಪ್ರಸಿದ್ಧ ಜಾನಪದ ಕಲಾವಿದ, ಗಾಯಕ ಮತ್ತು ಕನ್ನಡ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷರಾಗಿದ್ದರು. ಸುಮಾರು ಮೂರು ದಶಕಗಳಿಗೂ ಹೆಚ್ಚು ಕಾಲ ಜಾನಪದ ಸಂಗೀತ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಇವರು, ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳಿಗೆ ಪಾತ್ರರಾಗಿದ್ದಾರೆ. ದೂರದರ್ಶನ ಚಂದನದ ‘ಗಾನಗರಡಿ’ ಕಾರ್ಯಕ್ರಮದಲ್ಲೂ ಕಾಣಿಸಿಕೊಂಡಿದ್ದಾರೆ.
ಕಳೆದ 32 ವರ್ಷಗಳಿಂದ ಜಾನಪದ ಸಂಗೀತ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ ಇವರಿಗೆ ‘ಖಿದ್ಮಾ ಸೇವಾರತ್ನ’ ಪ್ರಶಸ್ತಿ ಹಾಗೂ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಜಾನಪದ ಗಾಯನ, ಸಂಶೋಧನೆ ಮತ್ತು ಕಲೆ ಸಾಹಿತ್ಯದ ಉಳಿವಿನಲ್ಲಿ ಸಕ್ರಿಯರಾಗಿದ್ದರು. ದೂರದರ್ಶನ ಚಂದನದ “ಗಾನಗರಡಿ – ಇದು ಜನಪದರ ಚಾವಡಿ” ಕಾರ್ಯಕ್ರಮದಲ್ಲಿ ಜನಪದ ಗೀತೆಗಳನ್ನು ಹಾಡಿ ಜನಪ್ರಿಯರಾಗಿದ್ದರು

0 ಕಾಮೆಂಟ್‌ಗಳು