ಇತ್ತೀಚೆಗೆ ಕೊಡಗು ಜಿಲ್ಲೆಯ ಹೋಂಸ್ಟೇ ಒಂದರಲ್ಲಿ ನಡೆದ ವಿದೇಶಿ ಮಹಿಳೆಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾನ್ಯ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರು ಹಾಗೂ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು, ಕಾನೂನು ಸುವಸ್ಥೆ ಇವರ ನಿರ್ದೇಶನದಂತೆ ಉಡುಪಿ ಜಿಲ್ಲೆಯಲ್ಲಿ ವಿಶೇಷ ಕಾರ್ಯಾಚರಣೆಯನ್ನು ನಡೆಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂಸ್ಟೇ ಇರುವುದು ಕಂಡುಬಂದಿರುತ್ತದೆ.
ಈ 32 ಅಕ್ರಮ ಹೋಂಸ್ಟೇ ವಿರುಧ್ದ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪ್ರವಾಸೋದ್ಯಮ ಇಲಾಖೆಗೆ ವರದಿ ನೀಡಲಾಗಿದೆ.
1) ಹೋಂಸ್ಟೇ/ರೆಸಾರ್ಟ್ಗಳು ಪರವಾನಿಗೆ ನಿಯಮ ಹಾಗೂ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.
2) ನಿಯಮ ಹಾಗೂ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸದೇ ಇರುವ ಹೋಂಸ್ಟೇ/ರೆಸಾರ್ಟ್ಗಳ ಪರವಾನಿಗೆಯನ್ನು ರದ್ದು ಪಡಿಸಲು ಕ್ರಮ ಕೈಗೊಳ್ಳಲಾಗುವುದು.
3) ಹೋಂಸ್ಟೇ/ರೆಸಾರ್ಟ್ಗಳಿಗೆ ಯಾವುದೇ ವಿದೇಶಿಯರು ಆಗಮಿಸಿದಾಗ ನಿಯಾಮಾನುಸಾರ ಅವರ ವಿವರಗಳನ್ನು ಒಳಗೊಂಡ Form C ಯನ್ನು FRRO(Foreigners Regional Registration Office) online ಮೂಲಕ ಕಡ್ಡಾಯವಾಗಿ ಅಪ್ಲೋಡ್ ಮಾಡತಕ್ಕದ್ದು. ಈ ಮಾಹಿತಿಯನ್ನು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡತಕ್ಕದ್ದು.
4) ಹೋಂಸ್ಟೇ/ರೆಸಾರ್ಟ್ಗಳಲ್ಲಿ ವಾಸವಾಗಿರುವ ವಿದೇಶಿಯರ ಭದ್ರತೆಯ ಬಗ್ಗೆ ಹೆಚ್ಚಿನ ನಿಗಾ ವಹಿಸುವುದು.

0 ಕಾಮೆಂಟ್‌ಗಳು