BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಕಲಾಸಂಸ್ಕೃತಿ

ಅಂತಿಮ ಪದವಿ ವಿದ್ಯಾರ್ಥಿಗಳ ಸನಿವಾಸ ಶಿಬಿರ ಉದ್ಘಾಟನೆ

ಯಕ್ಷಗಾನ ಕಲಾರಂಗದ ಐವೈಸಿ ಸಭಾಭವನದಲ್ಲಿ ಇಂದು (೧೯.೦೪.೨೦೨೬) ವಿದ್ಯಾಪೋಷಕ್‌ನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಎರಡು ದಿನಗಳ ಶೈಕ್ಷಣಿಕ ಕಾರ್ಯಗಾರವನ್ನು ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಕುಲಸಚಿವರಾದ ಡಾ. ಚಂದ್ರಶೇಖರ ಶೆಟ್ಟಿಯವರು ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಮಾತುಗಳಲ್ಲಿ ವಿದ್ಯಾರ್ಥಿಗಳು ಪಠ್ಯಕ್ಕೆ ಸೀಮಿತರಾಗದೆ, ತಮ್ಮ ಜ್ಞಾನ ವಿಕಾಸಕ್ಕೆ ಪೂರಕವಾಗುವ ಪುಸ್ತಕಗಳ ಓದನ್ನು ರೂಢಿಸಿಕೊಳ್ಳಬೇಕೆಂದು ಕರೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ಗೌರವ ಕಾರ್ಯದರ್ಶಿ ಡಾ. ಎ. ಪಿ. ಭಟ್ ಅವರು ಮೂಲ ವಿಜ್ಞಾನಕ್ಕೆ ಒತ್ತು ಕೊಡುವ ಅವಶ್ಯಕತೆಯಿದೆ. ಯಾವುದೇ ಪದವಿಯನ್ನು ಮಾಡಿದರೂ ಅದರಲ್ಲಿ ಪಡೆಯುವ ಮೂಲಜ್ಞಾನ ನಾವು ಮಾಡುವ ಉದ್ಯೋಗಕ್ಕೆ ಸಹಕಾರಿಯಾಗುತ್ತದೆ. ಯಾವ ಉದ್ಯೋಗವನ್ನೇ ಮಾಡಿದರೂ ಶ್ರದ್ಧೆಯಿಂದ ಅದರಲ್ಲಿ ಪೂರ್ಣತೆಯನ್ನು ಸಾಧಿಸಬೇಕು ಎಂದು ಅಭಿಪ್ರಾಯ ವ್ಯಕ್ತ ಪಡಿಸಿದರು. ಅತಿಥಿಗಳಾಗಿ ಆಗಮಿಸಿದ ಪ್ರೆöÊಮ್ ಸಂಸ್ಥೆಯ ವರಿಷ್ಠರಾದ ರತ್ನ ಕುಮಾರ್ ತಮ್ಮ ಬದುಕಿನ ಹೋರಾಟದ ಕಥನವನ್ನೇ ಹೇಳಿ, ಕಠಿಣ ಪರಿಶ್ರಮದಿಂದ ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ಹಿತವಚನ ನುಡಿದರು. ವೇದಿಕೆಯಲ್ಲಿ ಸಂಸ್ಥೆಯ ಕೋಶಾಧಿಕಾರಿ ಪ್ರೊ. ಕೆ. ಸದಾಶಿವ ರಾವ್, ಹಿರಿಯರಾದ ಯು. ವಿಶ್ವನಾಥ ಶೆಣೈ, ಶಿಬಿರದ ನಿರ್ದೇಶಕರೂ, ಮೈಲೈಫ್ ಸಂಸ್ಥೆಯ ಸ್ಥಾಪಕರಾದ ಪ್ರವೀಣ್ ಗುಡಿ ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ನಾರಾಯಣ ಎಂ. ಹೆಗಡೆ ವಂದಿಸಿದರು. ಅನಂತರಾಜ ಉಪಾಧ್ಯಾಯ, ಅಶೋಕ್ ಎಂ. ಹಾಗೂ ಡಾ. ಪ್ರತಿಮಾ ಜೆ. ಆಚಾರ್ಯ ಸಹಕರಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವನೆಯೊಂದಿಗೆ ಕಾರ್ಯಕ್ರಮ ನಿರೂಪಿಸಿದರು. ಉದ್ಘಾಟನಾ ಸಮಾರಂಭದ ಬಳಿಕ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸೂರ್ಯನಾರಾಯಣ ಅಡಿಗರು ಸಂವಹನ ಕೌಶಲ, ತಂಡದಲ್ಲಿ ಕೆಲಸ ಮಾಡುವ ಕೌಶಲ, ಸಮಸ್ಯಾ ಪರಿಹಾರ, ಮಾಹಿತಿ ಸಂಗ್ರಹ, ನಾಯಕತ್ವಗುಣ, ಸಮಯ ನಿರ್ವಹಣೆ ಮೊದಲಾದ ವಿಷಯಗಳ ಕುರಿತು ಶಿಬಿರಾರ್ಥಿಗಳಿಗೆ ಉಪಯುಕ್ತ ಮಾಹಿತಿ ನೀಡಿದರು.     


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!