ಉಡುಪಿಯ ಸುಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಬಹುಭಾಷಾ ಚಲನಚಿತ್ರ ನಟ ಹಾಗೂ ನಿರ್ದೇಶಕರಾದ ಸಂಪತ್ ಕುಮಾರ್ ಅವರು ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದರು. ಪರ್ಯಾಯ ಶ್ರೀ ಶೀರೂರು ಮಠದ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿದ ಅವರು, ಶ್ರೀಗಳಿಂದ ಫಲ ಮಂತ್ರಾಕ್ಷತೆ ಹಾಗೂ ಆಶೀರ್ವಾದವನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ ಹಾಗೂ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು ಉಪಸ್ಥಿತರಿದ್ದು, ಗಣ್ಯರನ್ನು ಗೌರವಿಸಿದರು. ದೇವಳದ ಭೇಟಿಯ ವೇಳೆ ಸಂಪತ್ ಕುಮಾರ್ ಅವರು ಮಠದ ಪರ್ಯಾಯೋತ್ಸವದ ಧಾರ್ಮಿಕ ವಿಧಿವಿಧಾನಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

0 ಕಾಮೆಂಟ್‌ಗಳು