ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ; ದ.ಕ. ಪ್ರಥಮ, ಉಡುಪಿ ದ್ವಿತೀಯ!

2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಬುಧವಾರ ಶಿಕ್ಷಣ ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟವಾಗಿದೆ. ಈ ಬಾರಿ SSLC ಪರೀಕ್ಷೆಯಲ್ಲಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ದಾಖಲೆಯ ಫಲಿತಾಂಶ ಬಂದಿದೆ ಎಂದು ಸಚಿವರು ತಿಳಿಸಿದರು.

ದಾವಣಗೆರೆಯ ಭರತ್, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರದ ಧನುಷ್, ಉಡುಪಿಯ ಶಂಕರನಾರಾಯಣ ಶಾಲೆಯ ಪ್ರೀತಂ ಜಿ. ಪೂಜಾರಿ, ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯಾ, ರಾಯಚೂರಿನ ಸುಖದೇವ್ 625ರಲ್ಲಿ 625 ಅಂಕ ಪಡೆದವರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡಾ 98.40ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿದೆ. ಉಡುಪಿ ಜಿಲ್ಲೆ ಶೇ 98.18 ರ ಫಲಿತಾಂಶದೊಂದಿಗೆ 2ನೇ ಸ್ಥಾನದಲ್ಲಿದೆ. ಉತ್ತರ ಕನ್ನಡ 3ನೇ ಸ್ಥಾನ (ಶೇ 98.09), ಹಾಸನ 4ನೇ ಸ್ಥಾನ (ಶೇ 97.51) ಗಳಿಸಿವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು