ತೆಂಕನಿಡಿಯೂರು ಕಾಲೇಜು: ಒಳಾಂಗಣ ಸಭಾಂಗಣದ ವೇದಿಕೆ ಮತ್ತು ಶುದ್ಧ ಜಲ ಘಟಕ ಲೋಕಾರ್ಪಣೆ

ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಹಾಗೂ ಲಯನ್ಸ್ ಕ್ಲಬ್ ಉಡುಪಿ ಒಳಾಂಗಣ ಸಭಾಂಗಣದ ವೇದಿಕೆ ಮತ್ತು ಶುದ್ಧ ಜಲ ಘಟಕದ ಉದ್ಘಾಟನಾ ಕಾರ್ಯಕ್ರಮ ಏಪ್ರಿಲ್ 23 ರಂದು ನಡೆಯಿತು. ಲಯನ್ಸ್ ಕ್ಲಬ್ ಜಿಲ್ಲಾ ಗವರ್ನರ್ ಸಪ್ನ ಸುರೇಶ್ ಪಿಎಂಜೆ.ಎಫ್ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು. ಪ್ರಾಂಶುಪಾಲರಾದ ನಿತ್ಯಾನಂದ ವಿ ಗಾಂವಕರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದ್ವಿತೀಯ ಉಪ ಜಿಲ್ಲಾ ಗವರ್ನರ್ ಹರಿಪ್ರಸಾದ್ ರೈ, ಲಯನ್ಸ್ ಕ್ಲಬ್ ಉಡುಪಿ ಅಧ್ಯಕ್ಷರಾದ ದಿನೇಶ್ ಕಿಣಿ, ವಲಯಾಧ್ಯಕ್ಷ ಲುಯಿಸ್ ಲೋಬೊ, ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಹೆಗ್ಡೆ, ಲಯನ್ಸ್ ಕ್ಲಬ್ ಉಡುಪಿ ಕೋಶಾಧಿಕಾರಿ ರಮಾನಂದ ನಾಯಕ್, ಬೋಧಕ ಬೋಧಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರೋಶನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು