ಎಂ.ಜಿ.ಎಂ. ಸಂಧ್ಯಾ ಕಾಲೇಜಿನ ಪೋಷಕ-ಶಿಕ್ಷಕರ ಸಂಘದ ವತಿಯಿಂದ ಶನಿವಾರ ಕಾಲೇಜಿನ ಟಿ.ಎಂ.ಎ. ಪೈ ಪ್ಲಾಟಿನಂ ಜುಬಿಲಿ ಬ್ಲಾಕ್ ಸಭಾಂಗಣದಲ್ಲಿ ಪೋಷಕರ ಸಭೆ ನಡೆಯಿತು.
ಕಾರ್ಯಕ್ರಮವನ್ನು ಅತಿಥಿಗಳಾದ ಎಂ.ಜಿ.ಎಂ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ವನಿತಾ ಮಯ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ಇದೇ ತಿಂಗಳ 30ರಂದು ನಿವೃತ್ತಿಗೊಳ್ಳಲಿರುವ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್. ನಾಯಕ್ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪೋಷಕ-ಶಿಕ್ಷಕರ ಸಂಘದ ಅಧ್ಯಕ್ಷರಾದ ಎಂ.ಎನ್. ನಾಯಕ್ ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿದರು. ಎಂ.ಜಿ.ಎಂ ಕಾಲೇಜಿನ ಉಪಪ್ರಾಂಶುಪಾಲರಾದ ಹಾಗೂ ಬಿಸಿಎ ಸಂಯೋಜಕರಾದ ಡಾ. ಎಂ. ವಿಶ್ವನಾಥ ಪೈ ಉಪಸ್ಥಿತರಿದ್ದರು. ಪೋಷಕ-ಶಿಕ್ಷಕ ಸಭೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಹಾಜರಾತಿ, ಶಿಸ್ತು, ಪರೀಕ್ಷಾ ಸಿದ್ಧತೆ ಹಾಗೂ ಪೋಷಕರ ಸಹಕಾರದ ಮಹತ್ವ ಕುರಿತು ಚರ್ಚಿಸಲಾಯಿತು. ಕಾಲೇಜಿನ ಅಭಿವೃದ್ಧಿಗೆ ಪೋಷಕರು ತಮ್ಮ ಸಲಹೆ-ಸೂಚನೆಗಳನ್ನು ನೀಡಿದರು.
ಖಜಾಂಚಿ ನರೇಂದ್ರ ರಾವ್, ನಿರ್ದೆಶಕರಾದ ಭಾರತಿ ಜಯಕರ್, ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀಮತಿ ಕೆ. ರೂಪಾ ನಾಯಕ್, ಶ್ರೀಮತಿ ಸುನೀತಾ ಪೂಜಾರಿ, ಶ್ರೀ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀ ಸನತ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು. ಪ್ರಥಮ ಬಿ.ಸಿ.ಎ ವಿದ್ಯಾರ್ಥಿನಿ ನಮೃತ ಪ್ರಾರ್ಥಿಸಿದರು. ಪೋಷಕ-ಶಿಕ್ಷಕರ ಸಂಘದ ಕಾರ್ಯದರ್ಶಿ ಭಾರತಿ ಜಯಕರ್ ವಂದಿಸಿದರು.

0 ಕಾಮೆಂಟ್‌ಗಳು