BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಕಲಾಸಂಸ್ಕೃತಿ

ಯಕ್ಷಶಿಕ್ಷಣ ಸನಿವಾಸ ಶಿಬಿರ ಉದ್ಘಾಟನೆ

ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಯಕ್ಷಶಿಕ್ಷಣ ಟ್ರಸ್ಟ್ ಉಡುಪಿ ವತಿಯಿಂದ, ಭೀಮ ಗೋಲ್ಡ್ ಪ್ರೈ. ಲಿ., ಬೆಂಗಳೂರು ಇದರ ಪ್ರಾಯೋಜಕತ್ವದಲ್ಲಿ ನಡೆಯಲಿರುವ ಒಂದುವಾರದ ಯಕ್ಷಶಿಕ್ಷಣ ಸನಿವಾಸ ಶಿಬಿರ – ೨೦೨೬ನ್ನು ಇಂದು (೦೮.೦೪.೨೦೨೬) ಗೀತಾನಂದ ಫೌಂಡೇಶನ್ ಅಧ್ಯಕ್ಷ ಶ್ರೀ ಆನಂದ ಸಿ. ಕುಂದರ್ ಉದ್ಘಾಟಿಸಿ ಮೇಲಿನ ಮಾತನ್ನು ಉಲ್ಲೇಖಿಸಿದರು. ಯಕ್ಷಗಾನ ಕಲಾರಂಗವು ಸಾಂಕೃತಿಕ-ಸಾಮಾಜಿಕ ಕಾರ್ಯಗಳಿಗೆ ತನ್ನನ್ನೇ ಸಮರ್ಪಿಸಿಕೊಂಡಿದೆ. ಯಕ್ಷಗಾನ ಕಲೆ, ಕಲಾವಿದರ ಕ್ಷೇಮಚಿಂತನೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಯಕ್ಷಗಾನ ಕಲಿಕೆ ಕುರಿತಂತೆ ಅವರು ಮಾಡುತ್ತಿರುವ ಕೆಲಸ ಅಸಾಧಾರಣವಾದುದು. ಪರಿಶ್ರಮದ ದುಡಿಮೆ ಮತ್ತು ಪಾರದರ್ಶಕ ವ್ಯವಹಾರದಿಂದ ಈ ಸಂಸ್ಥೆöಸಮಾಜದ ಮನ್ನಣೆಗೆ ಪಾತ್ರವಾಗಿದೆ ಎಂದು ಹೇಳಿದರು. ಉಡುಪಿಯ ಶಾಸಕರಾದ ಶ್ರೀ ಯಶ್‌ಪಾಲ್ ಎ. ಸುವರ್ಣ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಯಕ್ಷಗಾನ ಕಲಾರಂಗದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಸಹಕಾರದಿಂದ ಯಕ್ಷಶಿಕ್ಷಣ ಯಶಸ್ವಿಯಾಗಿ ಮುನ್ನಡೆಯುತ್ತಿದೆ, ಟ್ರಸ್ಟ್ನ ಅಧ್ಯಕ್ಷನಾಗಿ ಅವರನ್ನು ಅಭಿನಂದಿಸುತ್ತೇನೆ ಎಂದರು. ಅಭ್ಯಾಗತರಾಗಿ ಉದ್ಯಮಿ ಶ್ರೀ ಪಿ. ನಟರಾಜ ಹೆಗ್ಡೆ, ಸಾಮಾಜಿಕ ಕಾರ್ಯಕರ್ತ ಶ್ರೀ ಸುಧೀರ್ ಕುಮಾರ್ ಶೆಟ್ಟಿ, ಪಶುವೈದ್ಯಾಧಿಕಾರಿ ಡಾ. ಪ್ರಶಾಂತ್ ಶೆಟ್ಟಿ ಭಾಗವಹಿಸಿದ್ದರು. ಸಂಸ್ಥೆಯ ಉಪಾಧ್ಯಕ್ಷ ಎಸ್. ವಿ. ಭಟ್, ಟ್ರಸ್ಟಿ ಮೀನಾಲಕ್ಷಣಿ ಅಡ್ಯಂತಾಯ, ನಾರಾಯಣ ಎಂ. ಹೆಗಡೆ, ಕೋಶಾಧಿಕಾರಿ ಗಣೇಶ್ ಬ್ರಹ್ಮಾವರ ಉಪಸ್ಥಿತರಿದ್ದರು. ಯಕ್ಷಗಾನ ಕಲಾರಂಗದ ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಯು. ವಿಶ್ವನಾಥ ಶೆಣೈ, ಕೆ. ಸದಾಶಿವ ರಾವ್, ಅನಂತರಾಜ ಉಪಾಧ್ಯಾಯ, ಕಿಶೋರ್ ಸಿ. ಉದ್ಯಾವರ, ನಟರಾಜ ಉಪಾಧ್ಯಾಯ, ಎ. ಅಜಿತ್ ಕುಮಾರ್, ಅಶೋಕ ಎಂ. ಸಹಕರಿಸಿದರು. ಸಂಸ್ಥೆಯ ಉಪಾಧ್ಯಕ್ಷ ವಿ. ಜಿ. ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾಪ್ರಸಾದ್ ವಂದಿಸಿದರು. ನಿರಂಜನ್ ಭಟ್ ಕಾರ್ಯಕ್ರಮ ನಿರೂಪಿಸಿದರು. ಶಿಬಿರದಲ್ಲಿ ೧೦೪ ವಿದ್ಯಾರ್ಥಿಗಳು ಭಾಗವಹಿಸಿದ್ದು, ಗುರು ಬನ್ನಂಜೆ ಸಂಜೀವ ಸುವರ್ಣರ ನಿರ್ದೇಶನದಲ್ಲಿ, ನರಸಿಂಹ ತುಂಗ ಲಂಬೋದರ ಹೆಗಡೆ, ಸುವರ್ಣರ ಶಿಷ್ಯರಾದ ಶ್ರೀಧರ ಹೆಗಡೆ, ಮನೋಜ್, ಆದ್ಯತಾ ಭಟ್, ಶಿಶಿರ, ಪ್ರಶಾಂತ, ಶ್ರುತಿ, ಕಾರ್ತಿಕ್ ಭಟ್ ಸಹಕರಿಸಲಿದ್ದಾರೆ. ಉದ್ಘಾಟನಾ ಸಂದರ್ಭದಲ್ಲಿ ಯಕ್ಷಶಿಕ್ಷಣದ ಗುರುಗಳಾದ ಮಹೇಶ ಮಂದಾರ್ತಿ, ನಿತ್ಯಾನಂದ ಶೆಟ್ಟಿಗಾರ್ ಉಪಸ್ಥಿತರಿದ್ದರು. ಶಿಬಿರಾರ್ಥಿಗಳಿಗೆ ನೃತ್ಯ, ಅಭಿನಯ, ಮುಖವರ್ಣಿಕೆ, ವೇಷಭೂಷಣದ ತರಬೇತಿಯೊಂದಿಗೆ ಯಕ್ಷಗಾನದ ಕುರಿತ ಹಲವು ಮಾಹಿತಿಗಳನ್ನು ನೀಡಲಾಗುವುದು. 


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!