ಮಲ್ಪೆ : ಸಮುದ್ರದಲ್ಲಿ ಬಿದ್ದು ವ್ಯಕ್ತಿ ನಾಪತ್ತೆ!

ಮಲ್ಪೆ ಬಂದರಿನಲ್ಲಿ ಮೀನುಗಾರಿಕೆಯಲ್ಲಿ ತೊಡಗಿಕೊಂಡಿದ್ದ ಶಂಕರಗೌಡ ಶಿವಪ್ಪ ಆಡೂರ (26) ಎಂಬ ವ್ಯಕ್ತಿಯು ಮೇ.17ರಂದು ಸಮುದ್ರದಲ್ಲಿ ಮೀನುಗಾರಿಕಾ ಬಲೆಯನ್ನು ಎಳೆಯುತ್ತಿದ್ದ ಸಂದರ್ಭದಲ್ಲಿ ಬೋಟು ಅಲುಗಾಡಿದ ಪರಿಣಾಮ ಕಾಲು ಜಾರಿ ಸಮುದ್ರದ ನೀರಿಗೆ ಬಿದ್ದು ಕಾಣೆಯಾಗಿರುತ್ತಾರೆ.

5 ಅಡಿ 3 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಪೊಲೀಸ್ ಠಾಣೆ ದೂ.ಸಂ: 0820-2537999, ಮಲ್ಪೆ ಪಿ.ಎಸ್.ಐ ಸಂಖ್ಯೆ: 9480805447, ಮಲ್ಪೆ ವೃತ್ತ ನಿರೀಕ್ಷಕರ ಸಂಖ್ಯೆ: 9480805430 ಅನ್ನು ಸಂಪರ್ಕಿಸುವoತೆ ಮಲ್ಪೆ ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು