ಮೇ 3 ರಂದು ನಡೆದಿದ್ದ NEET ಪರೀಕ್ಷೆ ರದ್ದು!

ಭಾರತದ ಅತ್ಯಂತ ಪ್ರತಿಷ್ಠಿತ ಮತ್ತು ದೊಡ್ಡ ಮಟ್ಟದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್ ಯುಜಿ 2026’ ಮೇ 3 ರಂದು ನಡೆದಿತ್ತು. ಇದೀಗ ಶಾಕಿಂಗ್ ವಿಚಾರ ಬಂದು ಹೊರ ಬಿದ್ದಿದ್ದು ದೇಶಾದ್ಯಂತ ನಡೆದಿದ್ದ ಈ ಪರೀಕ್ಷೆಯನ್ನು ಕೇಂದ್ರ ಸರ್ಕಾರವು ಅಧಿಕೃತವಾಗಿ ರದ್ದುಗೊಳಿಸಿದೆ.

ಹೌದು, ಮೇ 3ನೇ ತಾರೀಕಿನಂದು ದೇಶಾದ್ಯಂತ ನಡೆದಿದ್ದ ನೀಟ್ ಯುಜಿ ಪರೀಕ್ಷೆಯನ್ನು ಕೇಂದ್ರ ಸರ್ಕಾರವು ಇದೀಗ ರದ್ದು ಪಡಿಸಿದೆ. ರಾಜಸ್ಥಾನದ ಕೆಲವು ಭಾಗಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಕಠಿಣ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಅಲ್ಲದೆ ಈ ಹಗರಣದ ಆಳ ಮತ್ತು ವಿಸ್ತಾರವನ್ನು ಪತ್ತೆಹಚ್ಚಲು ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (CBI) ವಹಿಸಲಾಗಿದೆ.

ರದ್ದಾದ ಪರೀಕ್ಷೆಯನ್ನು ಮರು ನಿಗದಿಪಡಿಸಲಾಗುವುದು. ಹೊಸ ಪರೀಕ್ಷಾ ದಿನಾಂಕ ಮತ್ತು ಹೊಸ ಪ್ರವೇಶ ಪತ್ರಗಳ ಮಾಹಿತಿಯನ್ನು ಶೀಘ್ರದಲ್ಲೇ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. ಮರು ಪರೀಕ್ಷೆಗೆ ವಿದ್ಯಾರ್ಥಿಗಳು ಯಾವುದೇ ಹೆಚ್ಚುವರಿ ಶುಲ್ಕ ಪಾವತಿಸುವ ಅಗತ್ಯವಿಲ್ಲ. ಈ ಹಿಂದೆ ಮಾಡಿದ ಶುಲ್ಕ ಪಾವತಿಗಳನ್ನು ಮರುಪಾವತಿಸಲಾಗುತ್ತದೆ. ವಿದ್ಯಾರ್ಥಿಗಳು ಮತ್ತೆ ಅರ್ಜಿ ಸಲ್ಲಿಸುವ ಅಗತ್ಯವೂ ಇಲ್ಲ. ಹಳೆಯ ದಾಖಲಾತಿಗಳು ಮತ್ತು ಆಯ್ದ ಪರೀಕ್ಷಾ ಕೇಂದ್ರಗಳು ಮಾನ್ಯವಾಗಿರುತ್ತವೆ.

NEET-UG 2026 ಪರೀಕ್ಷೆಯ ಸಮಯದಲ್ಲಿ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆಯ ದೂರುಗಳು ವರದಿಯಾಗಿವೆ. NTA ಮೇ 8 ರಂದು ತನಿಖೆಗಾಗಿ ಕೇಂದ್ರ ಸಂಸ್ಥೆಗಳಿಗೆ ವಿಷಯವನ್ನು ಉಲ್ಲೇಖಿಸಿದೆ. ತನಿಖಾ ಸಂಸ್ಥೆಗಳಿಂದ ಮಾಹಿತಿ ಪಡೆದ ನಂತರ, ಸರ್ಕಾರ ಮತ್ತು NTA ಪರೀಕ್ಷೆಯನ್ನು ಮುಂದುವರಿಸಲು ಸಾಧ್ಯವಿಲ್ಲ ಎಂದು ನಿರ್ಧರಿಸಿದೆ. ಆದ್ದರಿಂದ, ಮೇ 3 ರಂದು ನಡೆದ ಸಂಪೂರ್ಣ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. NEET-UG ಅನ್ನು ಈಗ ಮರು ನಿಗದಿಪಡಿಸಲಾಗುವುದು. ಹೊಸ ಪರೀಕ್ಷಾ ದಿನಾಂಕ ಮತ್ತು ಹೊಸ ಪ್ರವೇಶ ಪತ್ರಗಳ ಬಗ್ಗೆ ಮಾಹಿತಿಯನ್ನು ಶೀಘ್ರದಲ್ಲೇ ಅಧಿಕೃತ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಲಾಗುತ್ತದೆ.

ಪರೀಕ್ಷೆ ಬರೆದಿದ್ದ ಸುಮಾರು 22.79 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳಿಗೆ ಈ ನಿರ್ಧಾರದಿಂದ ಅನಾನುಕೂಲವಾಗುವುದನ್ನು ಒಪ್ಪಿಕೊಂಡಿರುವ NTA, ಯಾವುದೇ ಗೊಂದಲಗಳಿದ್ದಲ್ಲಿ ಸಂಪರ್ಕಿಸಲು ಸಹಾಯವಾಣಿ ಸಂಖ್ಯೆಗಳನ್ನು ನೀಡಿದೆ

ಇಮೇಲ್: neet-ug@nta.ac.in ದೂರವಾಣಿ: 011-40759000 / 011-69227700

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು