ಪತ್ರಕರ್ತ ಹಾಗೂ ಚಿತ್ರನಿರ್ದೇಶಕ ಪ್ರಕಾಶ ಸುವರ್ಣ ಕಟಪಾಡಿ ಅವರಿಗೆ ಮಹಾದಾನಿ ಡಾ.ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ದತ್ತಿನಿಧಿ ಪ್ರಶಸ್ತಿ

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರಕಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಬೆಂಗಳೂರು ಇದರ ವತಿಯಿಂದ ದಿನಾಂಕ: ೧೬-೦೫-೨೦೨೬ ರಂದು ಕಾಸರಗೋಡಿನ ಸುಬ್ಬಯ್ಯಕಟ್ಟೆ ಅನುದಾನಿತ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆದ “ದತ್ತಿನಿಧಿ ಪ್ರಶಸ್ತಿ ಪ್ರದಾನ ಮತ್ತು ಕನ್ನಡ ಉತ್ಸವದಲ್ಲಿ” ಪತ್ರಕರ್ತ ಹಾಗೂ ಚಿತ್ರನಿರ್ದೇಶಕ ಪ್ರಕಾಶ ಸುವರ್ಣ ಕಟಪಾಡಿ ಅವರಿಗೆ ಮಹಾದಾನಿ ಡಾ.ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ದತ್ತಿನಿಧಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನ ಮರದ ಮತ್ತು ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ಅವರು ಸನ್ಮಾನಪತ್ರ, ಟ್ರೋಫಿ ಸಹಿತ ದತ್ತಿನಿಧಿ ಪ್ರಶಸ್ತಿಯನ್ನು ನೀಡಿ ಅದ್ದೂರಿಯಾಗಿ ಸನ್ಮಾನಿಸಿದರು. ಇದೇ ವೇಳೆ ರಾಜ್ಯದ ವಿವಿಧೆಡೆಯ ಒಟ್ಟು ೧೮ಮಂದಿ ಪತ್ರಕರ್ತರಿಗೆ ದತ್ತಿನಿಧಿ ಪ್ರಶಸ್ತಿ ಹಾಗೂ ಸೇರಿದಂತೆ ೬ಮಂದಿ ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಗಡಿನಾಡ ಉತ್ಸವ ಸಮಿತಿಯ ಪ್ರಧಾನ ಸಂಚಾಲಕ ಶಿವಾನಂದ ಕೋಟ್ಯಾನ್ ಮಸ್ಕತ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಸಮಿತಿ ಸದಸ್ಯರಾದ ಶ್ರೀನಿವಾಸ ನಾಯಕ್ ಇಂದಾಜೆ, ರಾಧಾಕೃಷ್ಣ ಕೆ. ಉಳಿಯತ್ತಡ್ಕ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್, ಕಾಸರಗೋಡು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ, ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು, ಪ್ರದೀಪ್ ಕುಮಾರ್ ಕಲ್ಕೂರ ಮತ್ತಿತರರು ಉಪಸ್ಥಿತರಿದ್ದರು. ಸೋಮಶೇಖರ್ ಜೆ.ಎಸ್.ಸ್ವಾಗತಿಸಿದರು. ಸೌಮ್ಯ ಗೌಡ ಬೆಂಗಳೂರು ನಿರೂಪಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು