ಜಿಲ್ಲಾ ರೆಡ್ ಕ್ರಾಸ್ ಘಟಕದಲ್ಲಿ ರೆಡ್ ಕ್ರಾಸ್ ದಿನಾಚರಣೆ

 

ಉಡುಪಿ: ಅಂತರಾಷ್ಟ್ರೀಯ ರೆಡ್‌ಕ್ರಾಸ್ ಕಳೆದ ಒಂದೂವರೆ ಶತಮಾನಗಳಿಂದ ಜಗತ್ತಿನ ವಿವಿಧೆಡೆ ಮಾನವೀಯ ಸೇವೆ ಸಲ್ಲಿಸಿದೆ. ಪ್ರಕೃತಿ ವಿಕೋಪ ಮತ್ತು ಯುದ್ಧ ಸಂದರ್ಭದಲ್ಲಿ ಅದು ಸಲ್ಲಿಸಿದ ಸೇವೆ ಅನನ್ಯವಾದುದು. ಈ ದೃಷ್ಟಿಯಿಂದಲೇ ಅರ್ಹವಾಗಿಯೇ ನಾಲ್ಕು ಬಾರಿ ನೊಬೆಲ್ ಪ್ರಶಸ್ತಿ ಪಡೆದಿದೆ. ಉಡುಪಿ ಜಿಲ್ಲಾ ರೆಡ್ ಕ್ರಾಸ್ ರಾಜ್ಯದಲ್ಲೆ ಪ್ರತಿಷ್ಠಿತವಾಗಿದೆ ಎಂದು ಜಿಲ್ಲಾ ರೆಡ್ ಕ್ರಾಸ್ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ. ಹೇಳಿದರು. 

ಅವರು ಜಿಲ್ಲಾ ರೆಡ್ ಕ್ರಾಸ್ ಘಟಕದಲ್ಲಿ ರೆಡ್ ಕ್ರಾಸ್ ದಿನಾಚರಣೆಯ ಅಂಗವಾಗಿ ರೆಡ್ ಕ್ರಾಸ್ ಸ್ಥಾಪಕ ಹೆನ್ರಿ ಡ್ಯುನಾಂಟ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತಾನಾಡುತ್ತಿದ್ದರು. ಜಿಲ್ಲಾ ರೆಡ್ ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಸ್ವಾಗತಿಸಿ ರೆಡ್ ಕ್ರಾಸ್ ಇತಿಹಾಸವನ್ನು ವಿವರಿಸಿದರು. ಹೈಕೋರ್ಟ್ ವಕೀಲ ಶ್ರೀಕಾಂತ್ ಶಂಕರನಾರಾಯಣ ಮತ್ತು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಜಯಶ್ರೀ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಜಿಲ್ಲಾ ರೆಡ್ ಕ್ರಾಸ್ ಖಜಾಂಚಿ ರಮಾದೇವಿ ವಂದಿಸಿದರು. ರೆಡ್ ಕ್ರಾಸ್, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಮತ್ತು ವಾರ್ತಾ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಫಲಾನುಭವಿಗಳಿಗೆ ಶ್ರವಣ ಸಾಧನ ಮತ್ತು ಗೃಹಪಯೋಗಿ ಸಾಮಾಗ್ರಿಗಳನ್ನು ವಿತರಿಸಲಾಯಿತು. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು