BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ರಾಜ್ಯ

ಕರ್ನಾಟಕ : ಕಾಲೇಜುಗಳಲ್ಲಿ ಕೇಸರಿ ಶಾಲು ಧರಿಸುವಂತಿಲ್ಲ, ಹಿಜಾಬ್‌ ಧರಿಸಲು ಮಾತ್ರ ಅವಕಾಶ ~ರಾಜ್ಯ ಸರ್ಕಾರ ಆದೇಶ!

ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿ ಹಲವು ದಿನಗಳಿಂದ ಚರ್ಚೆಯಲ್ಲಿದ್ದ ಧಾರ್ಮಿಕ ಪದ್ಧತಿಗಳ ಪಾಲನೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ಅದರಲ್ಲಿ ರಾಜ್ಯದ ಸರ್ಕಾರಿ ಶಾಲಾ – ಕಾಲೇಜುಗಳಲ್ಲಿ ಕೇಸರಿ ಶಾಲು ಧರಿಸುವುದನ್ನ ನಿರ್ಬಂಧಿಸಿ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ ಹಿಜಬ್‌ ನಿರ್ಬಂಧಿಸಿ 2022 ರಲ್ಲಿ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶವನ್ನ ಹಿಂಪಡೆದು ಹಿಜಬ್‌ ಧರಿಸಲು ಅವಕಾಶ ಕಲ್ಪಿಸಿದೆ.

ಕಾಲೇಜುಗಳಲ್ಲಿ ಹಿಜಾಬ್‌ ನಿಷೇಧ ಆದೇಶವನ್ನು ಮುಂದಿನ ಶೈಕ್ಷಣಿಕ ವರ್ಷದಿಂದಲೇ ತೆರವು ಮಾಡಲಾಗವುದು. ಮುಸ್ಲಿಂ ಸಮುದಾಯದ ಬೇಡಿಕೆಯಂತೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ನಿಗದಿಪಡಿಸಿದ ಸಮವಸ್ತ್ರ ಕಡ್ಡಾಯವಾಗಿರುತ್ತದೆ. ಆದರೆ, ಅದರ ಜೊತೆಗೆ ಧಾರ್ಮಿಕ ಚಿಹ್ನೆಗಳನ್ನು ಧರಿಸಲು ಅಭ್ಯಂತರವಿಲ್ಲ. ಹಿಜಾಬ್ (ತಲೆವಸ್ತ್ರ), ಜನಿವಾರ, ಶಿವಧಾರ,ರುದ್ರಾಕ್ಷಿ, ಪೇಟ ಧರಿಸಲು ಅವಕಾಶವಿದೆ ಎಂದಿದ್ದಾರೆ.

ಇದು ಶಾಲೆಯ ಶಿಸ್ತು ಅಥವಾ ಬೋಧನಾ ಪ್ರಕ್ರಿಯೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕೆಂದು ಸೂಚಿಸಲಾಗಿದೆ.

ಕೇಸರಿ ಶಾಲು ಧಾರ್ಮಿಕ ಅಥವಾ ಸಾಂಪ್ರದಾಯಿಕ ಆಚರಣೆಯ ಭಾಗವಲ್ಲ ಎಂದು ಪರಿಗಣಿಸಿರುವ ಸರ್ಕಾರ, ಅದಕ್ಕೆ ಅನುಮತಿ ನಿರಾಕರಿಸಿದೆ.

ಸರ್ಕಾರದ ಆದೇಶದ ಪ್ರಕಾರ, ಯಾವುದೇ ವಿದ್ಯಾರ್ಥಿಯು ಇಂತಹ ಸಾಂಪ್ರದಾಯಿಕ ಸಂಕೇತಗಳನ್ನು ಧರಿಸುವಂತೆ ಅಥವಾ ಧರಿಸಬಾರದು ಎಂದು ಒತ್ತಾಯಿಸುವಂತಿಲ್ಲ. ಶಿಸ್ತು, ಸುರಕ್ಷತೆ ಮತ್ತು ವಿದ್ಯಾರ್ಥಿಗಳ ಗುರುತಿಸುವಿಕೆಗೆ ಅಡ್ಡಿಯಾಗದಂತೆ ಇವುಗಳನ್ನು ಧರಿಸಬಹುದಾಗಿದೆ. ಪರೀಕ್ಷಾ ಸಮಯದಲ್ಲಿ ಮಾತ್ರ ರಾಷ್ಟ್ರೀಯ ಅಥವಾ ರಾಜ್ಯ ಮಟ್ಟದ ಪರೀಕ್ಷಾ ನಿಯಮಾವಳಿಗಳಿಗೆ ಅನುಗುಣವಾಗಿ ವಸ್ತ್ರಸಂಹಿತೆಯನ್ನು ಪಾಲಿಸಬೇಕಾಗುತ್ತದೆ.

"ಯಾವುದೇ ವಿದ್ಯಾರ್ಥಿಗೆ ಅವರು ಸಾಂಪ್ರದಾಯಿಕ ಸಂಕೇತ ಧರಿಸಿದ್ದಾರೆ ಎಂಬ ಕಾರಣಕ್ಕೆ ಶಾಲಾ ಪ್ರವೇಶ ಅಥವಾ ಪರೀಕ್ಷಾ ಕೊಠಡಿಯ ಪ್ರವೇಶವನ್ನು ನಿರಾಕರಿಸುವಂತಿಲ್ಲʼವೆಂದು ಸರ್ಕಾರ ಹೇಳಿದೆ.

ಹನ್ನೆರಡನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ "ಇವ ನಮ್ಮವ" ಎಂಬ ತತ್ವವನ್ನು ಉಲ್ಲೇಖಿಸಿರುವ ಸರ್ಕಾರ, ಶಿಕ್ಷಣ ಸಂಸ್ಥೆಗಳು ಯಾವುದೇ ತಾರತಮ್ಯವಿಲ್ಲದೆ ಎಲ್ಲರನ್ನೂ ಒಳಗೊಳ್ಳುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದೆ. ಶಾಲಾ ಅಭಿವೃದ್ಧಿ ಮತ್ತು ಉಸ್ತುವಾರಿ ಸಮಿತಿಗಳು (SDMC) ಯಾವುದೇ ವಿದ್ಯಾರ್ಥಿಗೆ ಅವಮಾನವಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ.



Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!