BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ರಾಜಕೀಯ

ಮ್ಯಾಜಿಕ್ ನಂಬರ್ ಗಳಿಕೆಯಲ್ಲೂ "ವಿಜಯ" ಪಾತಾಕೆ

ತಮಿಳುನಾಡಿನಲ್ಲಿ ಬಹುಮತದ ಕೊರತೆ ಎದುರಿಸುತ್ತಿರುವ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರಿಗೆ ಕೊನೆಗೂ ಮ್ಯಾಜಿಕ್ ನಂಬರ್ ಸಿಕ್ಕಿದ್ದು, ಕಾಂಗ್ರೆಸ್ ನಂತರ ಸಿಪಿಐ ಮತ್ತು ವಿಸಿಕೆ ಕೂಡಾ ಬೆಂಬಲ ಘೋಷಿಸಿವೆ. ಹೀಗಾಗಿ ದಳಪತಿ ವಿಜಯ್ ಅವರು ಶೀಘ್ರದಲ್ಲೇ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸರ್ಕಾರ ರಚನೆಗೆ ನಟ, ರಾಜಕಾರಣಿ ವಿಜಯ್ ನೇತೃತ್ವದ ಟಿವಿಕೆಗೆ ಸಿಪಿಐ ಶುಕ್ರವಾರ ಬೇಷರತ್ ಬೆಂಬಲ ಘೋಷಿಸಿದೆ. ಅದರ ಬೆನ್ನಲ್ಲೇ ವಿಸಿಕೆ ಕೂಡಾ ಟಿವಿಕೆಗೆ ಬೆಂಬಲ ಘೋಷಿಸಿ ರಾಜ್ಯಪಾಲರಿಗೆ ಪತ್ರ ಬರೆದಿದೆ.

ಸುದೀರ್ಘ ಚರ್ಚೆಯ ನಂತರ ಎಡಪಕ್ಷ (ಸಿಪಿಐ) ಟಿವಿಕೆ ಬೆಂಬಲ ನೀಡಲು ನಿರ್ಧರಿಸಿತು ಮತ್ತು ಸರ್ಕಾರ ರಚನೆಗೆ ಬೇಷರತ್ ಬೆಂಬಲ ಪತ್ರವನ್ನು ನೀಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ಪತ್ರವನ್ನು ತಮಿಳುನಾಡು ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರಿಗೆ ಕಳುಹಿಸಲಾಗಿದೆ.

234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಸಿಪಿಐ ಇಬ್ಬರು ಶಾಸಕರನ್ನು ಹೊಂದಿದೆ. ಏ. 23ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳೊಂದಿಗೆ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ, ಸರ್ಕಾರ ರಚಿಸಲು ಡಿಎಂಕೆ ಮಿತ್ರಪಕ್ಷಗಳಾದ ಸಿಪಿಐ, ಸಿಪಿಐ (ಎಂ) ಮತ್ತು ವಿಸಿಕೆ ಬೆಂಬಲ ಕೋರಿತ್ತು.

ದಳಪತಿ ವಿಜಯ್ ನೇತೃತ್ವದ ಟಿವಿಕೆಗೆ ಈಗಾಗಲೇ ಕಾಂಗ್ರೆಸ್ 'ಕಂಡೀಷನಲ್' ಬೆಂಬಲ ನೀಡಿದೆ. ಇದೀಗ ಸಿಪಿಐ, ಸಿಪಿಎಂ ಹಾಗೂ ವಿಸಿಕೆ ಕೂಡಾ ಬೆಂಬಲ ಘೋಷಿಸಿದ್ದು ವಿಜಯ್ ಸುಲಭವಾಗಿ ಮ್ಯಾಜಿಕ್ ನಂಬರ್ ದಾಟಿದಂತಾಗಿದೆ.

ಟಿವಿಕೆ 107, ಸಿಪಿಐ, 2 ಸಿಪಿಎಂ, 2 ವಿಸಿಕೆ, 2 ಕಾಂಗ್ರೆಸ್ 5 ಐದು ಸೇರಿ 118 ಆಗಲಿದೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!