ರೆಡ್ ಕ್ರಾಸ್ ಸಭಾಪತಿ ರಾಜ್ಯಪಾಲರ ಭೇಟಿ ವಾರ್ಷಿಕ ಮಹಾಸಭೆ

ಉಡುಪಿ: ಕರ್ನಾಟಕ ರಾಜ್ಯ ರೆಡ್ ಕ್ರಾಸ್ ಸಭಾಪತಿ ಮತ್ತು ಉಡುಪಿ ಜಿಲ್ಲಾ ಸಭಾಪತಿಗಳಾದ ಶ್ರೀ ಬಸ್ರೂರು ರಾಜೀವ ಶೆಟ್ಟಿಯವರು ಘನತೆವೆತ್ತ ರಾಜ್ಯಪಾಲ ಶ್ರೀ ತಾವರ್‌ಚಂದ್ ಗೆಹ್ಲಾಟ್ ಅವರನ್ನು ಭೇಟಿಯಾಗಿ ರೆಡ್ ಕ್ರಾಸ್ ಚಟುವಟಿಕೆಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ರಾಜ್ಯದ ರೆಡ್ ಕ್ರಾಸ್ ಚಟುವಟಿಕೆಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ ರಾಜ್ಯಪಾಲರು ರೆಡ್ ಕ್ರಾಸ್‌ನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಲವು ಸಲಹೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಆಡಳಿತ ಮಂಡಳಿಯ ಕೆಲವು ಸದಸ್ಯರು ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ರೆಡ್ ಕ್ರಾಸ್ ಘಟಕದ ವಾರ್ಷಿಕ ಮಹಾಸಭೆಯನ್ನು ರೆಡ್ ಕ್ರಾಸ್ ಅಧ್ಯಕ್ಷರು ಮತ್ತು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರ ಅಧ್ಯಕ್ಷತೆಯಲ್ಲಿ ಮೇ ೧೩ ರಂದು ಬೆಳಿಗ್ಗೆ ೧೦.೩೦ ಕ್ಕೆ ಉಡುಪಿ ಟೌನ್ ಹಾಲಿನ ಮಿನಿಹಾಲ್‌ನಲ್ಲಿ ಕರೆಯಲಾಗಿದೆ. ರೆಡ್ ಕ್ರಾಸ್ಸಿನ ಎಲ್ಲಾ ಸದಸ್ಯರು ಭಾಗವಹಿಸಬೇಕೆಂದು ರೆಡ್ ಕ್ರಾಸ್ ಪ್ರಕಟನೆಯಲ್ಲಿ ವಿನಂತಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು