BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಅಪರಾಧ

ಉಡುಪಿ ಜಿಲ್ಲೆಯ ಮೂವರಿಗೆ ಗಡಿಪಾರು ಆದೇಶ

ಉಡುಪಿ ಜಿಲ್ಲೆಯ ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಮೊಹಮ್ಮದ್ ದಾನೀಶ್ ಮದನಿ ಮತ್ತು ಕರಾಣಿ ಮುಸೀನ್‌ ಹಾಗೂ ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯ ಇಲಿಯಾಸ್‌ ಎಂಬುವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ ಪೊಲೀಸ್ ಅಧೀಕ್ಷಕರು ಉಡುಪಿ ಜಿಲ್ಲೆ ಉಡುಪಿರವರು ದಿನಾಂಕ 24/06/2026 ರಂದು ಗಡಿಪಾರು ಆದೇಶ ಹೊರಡಿಸಿರುತ್ತಾರೆ.

ಈ ಪೈಕಿ ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಮೊಹಮ್ಮದ್ ದಾನೀಶ್ ಮದನಿ, ಪ್ರಾಯ: 23 ವರ್ಷ, ತಂದೆ: ಮೊಹಮ್ಮದ್ ಇಕ್ಬಾಲ್, ವಾಸ: ಹಾಜುಮಾ ಮಂಜಿಲ್, ಮಾವಿನಕಟ್ಟೆ, ಗುಲ್ವಾಡಿ ಗ್ರಾಮ, ಕುಂದಾಪುರ ತಾಲೂಕು, ಉಡುಪಿ ಜಿಲ್ಲೆ ಈತನ ವಿರುದ್ಧ 8 ಪ್ರಕರಣಗಳು ದಾಖಲಾಗಿದ್ದು, ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ರೌಡಿ ಹಾಳೆ ತೆರೆಯಲಾಗಿರುತ್ತದೆ.

ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಕರಾಣಿ ಮುಸೀನ್‌, ಪ್ರಾಯ: 44 ವರ್ಷ, ತಂದೆ: ಕರಾಣಿ ಅಮೀರ್‌, ವಾಸ: ಜೆ. ಎಮ್‌ ರಸ್ತೆ, ಕಂಡ್ಲೂರು, ಕಾವ್ರಾಡಿ ಗ್ರಾಮ, ಕುಂದಾಪುರ ತಾಲೂಕು, ಉಡುಪಿ ಜಿಲ್ಲೆ ಈತನ ವಿರುದ್ಧ 7 ಪ್ರಕರಣಗಳು ದಾಖಲಾಗಿದ್ದು ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ರೌಡಿ ಹಾಳೆ ತೆರೆಯಲಾಗಿರುತ್ತದೆ.

ಅಂತೆಯೇ ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯ ಇಲಿಯಾಸ್‌, ಪ್ರಾಯ: 36 ವರ್ಷ, ತಂದೆ: ಅಬೂಬಕ್ಕರ್‌, ವಾಸ: ಮಾಷಾ ಅಲ್ಲಾ, ಜನತಾ ಕಾಲೋನಿ, ಚಂದ್ರನಗರ, ಪಾದೂರು ಗ್ರಾಮ ಮತ್ತು ಅಂಚೆ, ಕಾಪು ತಾಲೂಕು, ಉಡುಪಿ ಜಿಲ್ಲೆ ಈತನ ವಿರುದ್ಧ 15 ಪ್ರಕರಣಗಳು ದಾಖಲಾಗಿದ್ದು ಶಿರ್ವ ಠಾಣೆಯಲ್ಲಿ ರೌಡಿ ಹಾಳೆ ತೆರೆಯಲಾಗಿರುತ್ತದೆ.

ಗಡಿಪಾರು ಕ್ರಮಕ್ಕೆ ಒಳಗಾದ ಮೇಲೆ ನಮೂದಿಸಿದ ಆಸಾಮಿಗಳು ಕೊಲೆ, ಕೊಲೆಯತ್ನ, ಪೊಲೀಸ್‌ ಠಾಣೆಗೆ ಕಲ್ಲೆಸೆತ, ಕನ್ನಕಳವು, ಜಾನುವಾರು ಕಳವು, ಜಾನುವಾರು ಹತ್ಯೆ, ರೌಡಿಸಂ ಪ್ರವೃತ್ತಿಯ ಹಲ್ಲೆ ಮುಂತಾದ ಪ್ರಕರಣಗಳ ಸಹಿತ ಒಟ್ಟು 30 ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾರೆ.

ಮೊಹಮ್ಮದ್ ದಾನೀಶ್ ಮದನಿ ಎಂಬಾತನನ್ನು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ, ಕರಾಣಿ ಮುಸೀನ್‌ ಎಂಬಾತನನ್ನು ಬೀದರ್ ಜಿಲ್ಲೆಯ ಗಾಂಧಿ ಗಂಜ ಪೊಲೀಸ್ ಠಾಣಾ ವ್ಯಾಪ್ತಿಗೆ ಮತ್ತು ಇಲಿಯಾಸ್‌ ಎಂಬಾತನನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

ಕಳೆದ 01 ವರ್ಷದ ಅವಧಿಯಲ್ಲಿ ಅಕ್ರಮ ಚಟುವಟಿಕೆ ಹಾಗೂ ರೌಡಿಸಂನ್ನು ಮಟ್ಟಹಾಕುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ 03 ಆಸಾಮಿಗಳ ವಿರುದ್ಧ ಪಿ.ಐ.ಟಿ. ಎನ್.ಡಿ.ಪಿ.ಎಸ್.‌ ಕಾಯ್ದೆ ಹಾಗೂ 04 ಜನರನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಕಾರಾಗೃಹದಲ್ಲಿ ಇರಿಸಲಾಗಿದೆ. ಅಲ್ಲದೇ 14 ಜನರ ವಿರುದ್ಧ ಗಡಿಪಾರು ಕ್ರಮ ಕೈಗೊಳ್ಳಲಾಗಿದೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!