ಮಹಾತ್ಮ ಗಾಂಧಿ ಪ್ರೌಢಶಾಲೆ ಸಾಹೇಬರಕಟ್ಟೆ ಇದರ ವತಿಯಿಂದ ಸಂಸ್ಥೆಯ 2026-27ನೇ ಸಾಲಿನ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ಹಾಗೂ ಸ್ಕೂಲ್ ಬ್ಯಾಗ್ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಶ್ರೀ ನಂದಿ ಗ್ರಾಮೀಣ ಮಹಿಳಾ ಸಹಕಾರಿ ಸಂಘ ಎತ್ತಿನಟ್ಟಿ ಶಿರಿಯಾರ ಇದರ ವತಿಯಿಂದ ಶಾಲೆಯ ಎಂಟನೇ ತರಗತಿಯ 45 ವಿದ್ಯಾರ್ಥಿಗಳಿಗೆ ಉಚಿತ ಸ್ಕೂಲ್ ಬ್ಯಾಗ್ ಅನ್ನು ಸಂಘದ ಅಧ್ಯಕ್ಷರು ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳ ಪರವಾಗಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಅಶ್ವಿನಿ ವಿಶ್ವನಾಥ ಶಾನುಭಾಗ್ ವಿತರಿಸಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಹಾರೈಸಿದರು.
ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅನುದಾನಿತ ಶಾಲೆಗಳಿಗೆ ನೀಡಲ್ಪಟ್ಟ ಉಚಿತ ಸಮವಸ್ತ್ರವನ್ನು ಸಂಸ್ಥೆಯ 150 ವಿದ್ಯಾರ್ಥಿಗಳಿಗೆ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರಾದ ಶ್ರೀ ಶಿವರಾಮ ಕೊಠಾರಿ ಯವರು ಸಂಸ್ಥೆಯ ವಿದ್ಯಾರ್ಥಿಗಳಿಗೆ ವಿತರಿಸಿದರು. ಸಭಾಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಕೆ ರವೀಂದ್ರನಾಥ ಶೆಟ್ಟಿ ಕೊಳ್ಕೆಬೈಲು ಇವರು ದಾನಿಗಳಿಗೆ ಕೃತಜ್ಞತೆಗಳನ್ನು ಅರ್ಪಿಸಿದರು. ಸಮಾರಂಭದ ವೇದಿಕೆಯಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯ ಶಿವರಾಮ ಕೊಠಾರಿ, ಸಂಸ್ಥೆಯ ಹಳೆ ವಿದ್ಯಾರ್ಥಿ ಶ್ರೀ ವಿಶ್ವನಾಥ ಶಾನುಭಾಗ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಸತೀಶ್ ನಾಯಕ್ ಸ್ವಾಗತಿಸಿ ದೈಹಿಕ ಶಿಕ್ಷಣ ಶಿಕ್ಷಕ ವಿಜಯ್ ಕುಮಾರ್ ಶೆಟ್ಟಿ ವಂದಿಸಿದರು. ಕನ್ನಡ ಭಾಷಾ ಶಿಕ್ಷಕ ಗಣೇಶ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು.

0 ಕಾಮೆಂಟ್‌ಗಳು