ಮಹಾತ್ಮ ಗಾಂಧಿ ಪ್ರೌಢಶಾಲೆ : ಶಾಲಾ ಪ್ರಾರಂಭೋತ್ಸವ

ಮಹಾತ್ಮ ಗಾಂಧಿ ಪ್ರೌಢಶಾಲೆ ಸಾಹೇಬರಕಟ್ಟೆ ಇದರ 2026-27 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ ಸಮಾರಂಭವು ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ಸಹಯೋಗದೊಂದಿಗೆ ಸಂಸ್ಥೆಯಲ್ಲಿ ಜರಗಿತು.

ಜಯಂಟ್ಸ್ ಗ್ರೂಪ್ ಬ್ರಹ್ಮಾವರ ಇದರ ಅಧ್ಯಕ್ಷ ಅಣ್ಣಯ್ಯ ದಾಸ್ ನೋಟ್ ಪುಸ್ತಕಗಳನ್ನು ಹಸ್ತಾಂತರಿಸಿದರು. 

ಪದಾಧಿಕಾರಿಗಳಾದ ಮಿಲ್ಟನ್ ಒಲಿವೇರ, ರಾಘವೇಂದ್ರ ಪ್ರಭು ಕರ್ವಾಲ್, ಶ್ರೀನಾಥ್ ಕೋಟ ಹಾಗೂ ವಿವೇಕಾನಂದ ಕಾಮತ್ ಉಪಸ್ಥಿತರಿದ್ದರು. ಸಂಸ್ಥೆಯ ಮುಖ್ಯ ಶಿಕ್ಷಕ ಸತೀಶ್ ನಾಯಕ್ ಸ್ವಾಗತಿಸಿ ವಂದಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು