BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ
[ಹೋಮ್] ತಿಂಗಳ ಪಾಪ್ಯುಲರ್ ಸುದ್ದಿಗಳು

Krishna Mata Astami 2026

Krishna Mata Astami 2026
ಕರಾವಳಿ

ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಸ್ಥಳೀಯ ವ್ಯಕ್ತಿ ಹಾಗೂ ಪ್ರವಾಸಿಗರ ಮಧ್ಯೆ ಮಾರಾಮಾರಿ!

ಉಡುಪಿ ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ವಾಹನಕ್ಕೆ ಸೈಡ್ ನೀಡುವ ವಿಚಾರವಾಗಿ ಮಂಗಳವಾರ ರಾತ್ರಿ ಹೊರರಾಜ್ಯದ ಪ್ರವಾಸಿಗರು ಹಾಗೂ ಸ್ಥಳೀಯ ವ್ಯಕ್ತಿಯ ನಡುವೆ ಗಲಾಟೆ ನಡೆದು, ದೂರು ಪ್ರತಿದೂರು ದಾಖಲಾಗಿದೆ.

ಕೊರಂಗ್ರಪಾಡಿ ನಿವಾಸಿ ಸುಪ್ರೀತ್ ಅವರು ಕಾರು ಚಲಾಯಿಸುತ್ತಿದ್ದ ವೇಳೆ ಹೈದರಾಬಾದ್ ಮೂಲದ ಪ್ರವಾಸಿಗರೊಂದಿಗೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಈ ವೇಳೆ ಕಾರು ಹತ್ತಿಸಲು ಯತ್ನಿಸಿದ್ದಾರೆ ಎಂದು ಪ್ರವಾಸಿಗರು ದೂರಿದ್ದಾರೆ. ಬಳಿಕ ವಾಗ್ವಾದ ತೀವ್ರಗೊಂಡು ಹೊಡೆದಾಟಕ್ಕೆ ತಿರುಗಿದೆ.

ಕಾರಿನಲ್ಲಿದ್ದ ಕೋಲಿನಿಂದ ಸುಪ್ರೀತ್ ಅವರು ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡಿರುವ ಹೈದರಾಬಾದ್ ಮೂಲದ ಪವನ್ ಅವರು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದಕ್ಕೆ ಪ್ರತಿಯಾಗಿ, ವಾಹನವನ್ನು ನಿಧಾನವಾಗಿ ಚಲಾಯಿಸುವಂತೆ ಹೇಳಿದ್ದಕ್ಕೆ ಪ್ರವಾಸಿಗರೇ ಗಲಾಟೆ ಆರಂಭಿಸಿದ್ದು, ತನ್ನ ಕಾರಿನ ಗಾಜು ಜಖಂಗೊಳಿಸಿದ್ದಾರೆ ಎಂದು ಸುಪ್ರೀತ್ ಪ್ರತಿದೂರು ನೀಡಿದ್ದಾರೆ. ಅಲ್ಲದೆ, ಪತ್ನಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಪ್ರವಾಸಿಗರು ಕುರ್ಚಿ ಹಾಗೂ ಫೋಟೋ ಸ್ಟ್ಯಾಂಡ್‌ನಿಂದ ಹಲ್ಲೆ ನಡೆಸಿದ್ದು, ಇದರಿಂದ ಬಾಯಿಗೆ ಗಾಯವಾಗಿ ರಕ್ತಸ್ರಾವ ಉಂಟಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಆಂಧ್ರಪ್ರದೇಶ ಮೂಲದ ಪ್ರವಾಸಿಗರು ಮಹಿಳೆಯರು ಮತ್ತು ಮಕ್ಕಳೊಂದಿಗೆ ಉಡುಪಿಗೆ ಆಗಮಿಸಿದ್ದರು. ಗಲಾಟೆ ತೀವ್ರಗೊಂಡಿದ್ದನ್ನು ಗಮನಿಸಿದ ಸ್ಥಳೀಯರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ಘಟನೆಯ ದೃಶ್ಯಾವಳಿಗಳು ಮೊಬೈಲ್ ಫೋನ್‌ನಲ್ಲಿ ಸೆರೆಯಾಗಿದ್ದು, ಅವುಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎರಡೂ ಕಡೆಯಿಂದ ದೂರು ದಾಖಲಾಗಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!