BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸುದ್ದಿ

ಕಾಂಗ್ರೆಸ್ ಸೇರ್ಪಡೆ ವದಂತಿ ಸುಳ್ಳು - ಪ್ರಮೋದ್ ಮಧ್ವರಾಜ್ ಸ್ಪಷ್ಟನೆ

ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಬಗ್ಗೆ ಹರಿದಾಡುತ್ತಿರುವ ಕೆಲವು ಸುದ್ದಿಗಳು ಮತ್ತು ಊಹಾಪೋಹಗಳು ನನ್ನ ಗಮನಕ್ಕೆ ಬಂದಿವೆ. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದೇನೆ ಎಂಬ ಸುದ್ದಿ ಸಂಪೂರ್ಣವಾಗಿ ಆಧಾರರಹಿತವಾಗಿದ್ದು, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ.

ನಾನು ಈ ಹಿಂದೆ ಕೂಡ ಸ್ಪಷ್ಟವಾಗಿ ಹೇಳಿದ್ದೇನೆ. ನಾನು ಭಾರತೀಯ ಜನತಾ ಪಕ್ಷವನ್ನು ಅಧಿಕಾರಕ್ಕಾಗಿ ಸೇರಿಲ್ಲ, ಜನಸೇವೆಯ ಉದ್ದೇಶದಿಂದ ಸೇರಿದ್ದೇನೆ. ಅಧಿಕಾರ ಅಥವಾ ಹುದ್ದೆಗಳು ಬಂದರೆ ಅದು ಹೆಚ್ಚುವರಿ ಜವಾಬ್ದಾರಿಯಷ್ಟೇ. ಆದರೆ ನನ್ನ ರಾಜಕೀಯ ಜೀವನದ ಮೂಲ ಉದ್ದೇಶ ಜನರ ಸೇವೆ ಮತ್ತು ಕರ್ನಾಟಕದ ಸಮಗ್ರ ಅಭಿವೃದ್ಧಿಯಾಗಿದೆ.

ನಾನು ಯಾವುದೇ ಅಧಿಕಾರ ಅಥವಾ ಹುದ್ದೆಗಾಗಿ ಪರಿತಪಿಸುತ್ತಿಲ್ಲ. ಹುದ್ದೆಗಳು ವ್ಯಕ್ತಿಯನ್ನು ದೊಡ್ಡವನನ್ನಾಗಿಸುವುದಿಲ್ಲ; ಜನರ ವಿಶ್ವಾಸ ಮತ್ತು ಸೇವೆಯೇ ವ್ಯಕ್ತಿಯ ನಿಜವಾದ ಶಕ್ತಿಯಾಗಿದೆ ಎಂಬ ನಂಬಿಕೆ ನನ್ನದು. ನನಗೆ ಅಧಿಕಾರ ಸಿಕ್ಕರೆ ಅದು ಕೇವಲ ಜನರ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಲು ಮಾತ್ರ. ಅಧಿಕಾರ ಎನ್ನುವುದು ನನ್ನ ಪಾಲಿಗೆ ಗೌರವ ಅಥವಾ ಸ್ಥಾನಮಾನವಲ್ಲ, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಜವಾಬ್ದಾರಿಯಾಗಿದೆ.

ಪಕ್ಷ ನನಗೆ ಯಾವುದೇ ಜವಾಬ್ದಾರಿ ನೀಡಿದರೆ ಅದನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ. ಜವಾಬ್ದಾರಿ ಸಿಗದಿದ್ದರೂ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಜನರ ಮಧ್ಯೆ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ. ಮುಂದಿನ ದಿನಗಳಲ್ಲಿ ಪಕ್ಷದ ನಾಯಕರುಗಳು ನನ್ನ ಕಾರ್ಯ, ಪಕ್ಷದ ಮೇಲಿನ ನಿಷ್ಠೆ ಹಾಗೂ ಜನಸೇವೆಯ ಬದ್ಧತೆಯನ್ನು ಖಂಡಿತವಾಗಿಯೂ ಗುರುತಿಸಿ ಸೂಕ್ತ ಹಾಗೂ ಉತ್ತಮ ನಿರ್ಧಾರವನ್ನು ಕೈಗೊಳ್ಳುತ್ತಾರೆ ಎಂಬ ಸಂಪೂರ್ಣ ವಿಶ್ವಾಸ ನನಗಿದೆ.

ನನ್ನ ರಾಜಕೀಯ ಪಯಣದಲ್ಲಿ ನನ್ನ ಮೇಲೆ ವಿಶ್ವಾಸವಿಟ್ಟು ಬೆಂಬಲ ನೀಡುತ್ತಿರುವ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಜನತೆಗೆ ನಾನು ಸದಾ ಚಿರಋಣಿಯಾಗಿದ್ದೇನೆ. ಅವರ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದವೇ ನನಗೆ ಮತ್ತಷ್ಟು ಶಕ್ತಿಯನ್ನು ನೀಡುತ್ತಿದೆ.

ಆದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿ ಮತ್ತು ವದಂತಿಗಳಿಗೆ ಕಿವಿಗೊಡದೆ, ಅಧಿಕೃತ ಮಾಹಿತಿಯನ್ನಷ್ಟೇ ನಂಬುವಂತೆ ಎಲ್ಲರಿಗೂ ಮನವಿ ಮಾಡುತ್ತೇನೆ.

"ಅಧಿಕಾರ ನನ್ನ ಗುರಿಯಲ್ಲ ಜನಸೇವೆಯೇ ನನ್ನ ಧ್ಯೇಯ. ಅಧಿಕಾರ ಸಿಕ್ಕರೆ ಜನರ ಸೇವೆಗೆ ಬಳಸುತ್ತೇನೆ, ಸಿಗದಿದ್ದರೂ ಜನರ ಸೇವೆಯನ್ನು ನಿಲ್ಲಿಸುವುದಿಲ್ಲ."

– ಪ್ರಮೋದ್ ಮಧ್ವರಾಜ್


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!