BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸಾಧನೆ

IPL 2026: ಕೊಹ್ಲಿಯ 'ವಿರಾಟ' ದರ್ಶನ... ಸತತ ಎರಡನೇ ಬಾರಿ ಆರ್‌ಸಿಬಿ ಚಾಂಪಿಯನ್ಸ್!

ಬೌಲರ್‌ಗಳ ಶಿಸ್ತುಬದ್ಧ ಮಾರಕ ದಾಳಿ ಹಾಗೂ ರನ್‌ ಮಷಿನ್ ವಿರಾಟ್ ಕೊಹ್ಲಿ ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇತಿಹಾಸ ನಿರ್ಮಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ತಂಡವನ್ನು ಧೂಳೀಪಟ ಮಾಡಿದ ಆರ್‌ಸಿಬಿ ಸತತ ಎರಡನೇ ಬಾರಿಗೆ ಚಾಂಪಿಯನ್‌ ಪಟ್ಟ ಅಲಂಕರಿಸಿದೆ.

ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಮುಂಬೈ ಇಂಡಿಯನ್ಸ್ (MI) ನಂತರ ಸತತ ಎರಡು ಬಾರಿ ಟ್ರೋಫಿ ಗೆದ್ದ ಮೂರನೇ ತಂಡ ಎಂಬ ಅಪ್ರತಿಮ ಕೀರ್ತಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭಾಜನವಾಗಿದೆ. 5 ವಿಕೆಟ್‌ಗಳ ಐತಿಹಾಸಿಕ ಗೆಲುವಿನ ಬೆನ್ನಲ್ಲೇ ವಿಶ್ವದಾದ್ಯಂತ ಇರುವ ಕೋಟ್ಯಂತರ ಆರ್‌ಸಿಬಿ ಅಭಿಮಾನಿಗಳಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದ್ದು, “ಈ ಸಲವೂ ಕಪ್ ನಮ್ದೇ” ಎಂಬ ಘೋಷಣೆ ಎಲ್ಲೆಡೆ ಮೊಳಗುತ್ತಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ (GT), ಆರ್‌ಸಿಬಿ ಬೌಲರ್‌ಗಳ ಶಿಸ್ತುಬದ್ಧ ದಾಳಿಗೆ ನಲುಗಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 155 ರನ್‌ಗಳ ಸಾಧಾರಣ ಮೊತ್ತ ಕಲೆ ಹಾಕಿತು. ಈ ಮೊತ್ತವನ್ನು ಬೆನ್ನಟ್ಟಿದ ಆರ್‌ಸಿಬಿ ಇನ್ನು 12 ಎಸೆತ ಬಾಕಿ ಇರುವಂತೆಯೇ 5 ವಿಕೆಟ್‌ ನಷ್ಟಕ್ಕೆ 161 ರನ್‌ ಹೊಡೆದು ಜಯಗಳಿಸಿತು.

ಆರ್‌ಸಿಬಿಯ ಈ ಐತಿಹಾಸಿಕ ಕಪ್ ಗೆಲುವಿನಲ್ಲಿ ರನ್‌ ಮಷಿನ್ ವಿರಾಟ್ ಕೊಹ್ಲಿ ಮತ್ತೊಮ್ಮೆ ಅತ್ಯಂತ ನಿರ್ಣಾಯಕ ಪಾತ್ರ ವಹಿಸಿದರು. ವಿರಾಟ್ ಕೊಹ್ಲಿ ಆರಂಭಿಕ ಆಟಗಾರನಾಗಿ (Opener) ಕ್ರೀಸ್‌ಗಿಳಿದು ಜಿಟಿ ಬೌಲರ್‌ಗಳ ಮೇಲೆ ಸವಾರಿ ಮಾಡಿದರು. ಪಂದ್ಯದ ಮೊದಲ ಓವರ್‌ನಿಂದಲೇ ಮೈದಾನದ ಮೂಲೆ ಮೂಲೆಗೂ ಬೌಂಡರಿ, ಸಿಕ್ಸರ್‌ಗಳ ಸುರಿಮಳೆಗೈದ ಕೊಹ್ಲಿ ಅಜೇಯ 75 ರನ್‌(42 ಎಸೆತ, 9 ಬೌಂಡರಿ, 3 ಸಿಕ್ಸ್‌) ಹೊಡೆದು ತಂಡಕ್ಕೆ ಜಯವನ್ನು ತಂದುಕೊಟ್ಟರು.


ಗುರಿ ಬೆನ್ನಟ್ಟಿದ ಆರ್‌ಸಿಬಿಗೆ ವೆಂಕಟೇಶ್ ಅಯ್ಯರ್ ಬಿರುಸಿನ ಆರಂಭ ನೀಡಿದರು. ಅಯ್ಯರ್ ಮತ್ತು ಕೊಹ್ಲಿ ಮೊದಲ ವಿಕೆಟಿಗೆ 27 ಎಸೆತಗಳಿಗೆ 62 ರನ್ ಜೊತೆಯಾಟವಾಡಿದರು. ಅಯ್ಯರ್ 32 ರನ್(16 ಎಸೆತ, 4 ಬೌಂಡರಿ, 2 ಸಿಕ್ಸ್ ಚಚ್ಚಿ ಔಟಾದರು.

ನಂತರ ಬಂದ ದೇವದತ್ ಪಡಿಕ್ಕಲ್ ಕೂಡ ಕೇವಲ 1 ರನ್ ಗಳಿಸಿ ನಿರಾಸೆ ಮೂಡಿಸಿದರು. ಉತ್ತಮ ಸ್ಥಿತಿಯಲ್ಲಿದ್ದ ಆರ್‌ಸಿಬಿಗೆ ಗುಜರಾತ್‌ನ ಸ್ಟಾರ್ ಸ್ಪಿನ್ನರ್ರ ಶೀದ್ ಖಾನ್ ಒಂದೇ ಓವರ್‌ನಲ್ಲಿ ಎರಡು ಪ್ರಮುಖ ವಿಕೆಟ್ ಉರುಳಿಸುವ ಮೂಲಕ ಭಾರಿ ಆಘಾತ ನೀಡಿದರು.

ಅಪಾಯಕಾರಿ ರಜತ್ ಪಾಟೀದಾರ್ (15 ರನ್, 13 ಎಸೆತ) ಮತ್ತು ಕೃನಾಲ್ ಪಾಂಡ್ಯ (1 ರನ್, 2 ಎಸೆತ) ಅವರನ್ನು ಒಂದೇ ಓವರ್‌ನಲ್ಲಿ ಪೆವಿಲಿಯನ್‌ಗೆ ಅಟ್ಟಿದರು. ಐದನೇ ವಿಕೆಟಿಗೆ ಟಿಮ್ ಡೇವಿಡ್ ಮತ್ತು ಕೊಹ್ಲಿ 31 ಎಸೆತಗಳಿಗೆ 41 ರನ್ ಜೊತೆಯಾಟವಾಡಿದರು. ಉತ್ತಮವಾಗಿ ಆಡುತ್ತಿದ್ದ ಡೇವಿಡ್ 24 ರನ್(17 ಎಸೆತ, 3 ಬೌಂಡರಿ, 1 ಸಿಕ್ಸ್) ಹೊಡೆದು ಔಟಾದರು.

ಗುಜರಾತ್ ಟೈಟನ್ಸ್ ತಂಡಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ನಾಯಕ ಶುಭ್‌ಮನ್ ಗಿಲ್ 10 ರನ್ ಮತ್ತು ಸ್ಟಾರ್ ಬ್ಯಾಟರ್ ಸಾಯಿ ಸುದರ್ಶನ್ 12 ರನ್ ಹೊಡೆದು ಪೆವಿಲಿಯನ್ ಸೇರಿದರು. ಅನುಭವಿ ಜೋಸ್ ಬಟ್ಲರ್ ಕೂಡ 23 ಎಸೆತಗಳಲ್ಲಿ ಕೇವಲ 19 ರನ್ ಗಳಿಸಿ ಕೃನಾಲ್ ಪಾಂಡ್ಯ ಬೌಲಿಂಗ್‌ನಲ್ಲಿ ಸ್ಟಂಪ್‌ ಔಟಾದರು. ಮಧ್ಯಮ ಕ್ರಮಾಂಕದಲ್ಲಿ ನಿಶಾಂತ್ ಸಿಂಧು 20 ರನ್(18 ಎಸೆತ, 3 ಬೌಂಡರಿ) ಸ್ವಲ್ಪ ಸಮಯ ಕ್ರೀಸ್‌ನಲ್ಲಿ ನಿಂತರೂ ರನ್ ಗತಿ ಹೆಚ್ಚಿಸಲು ಸಾಧ್ಯವಾಗಲಿಲ್ಲ.

ಒಂದೆಡೆ ವಿಕೆಟ್‌ಗಳು ಉರುಳುತ್ತಿದ್ದರೂ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ವಾಷಿಂಗ್ಟನ್ ಸುಂದರ್, ಆಕರ್ಷಕ ಅರ್ಧಶತಕ ಬಾರಿಸಿ ತಂಡ ಗೌರವಯುತ ಮೊತ್ತ ತಲುಪಲು ಕಾರಣರಾದರು. ಸುಂದರ್ 37 ಎಸೆತಗಳಲ್ಲಿ ಅಜೇಯ 50 ರನ್(37 ಎಸೆತ, 5 ಬೌಂಡರಿ) ಗಳಿಸಿ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಕೊನೆಯಲ್ಲಿ ಅರ್ಷದ್ ಖಾನ್ ಬಿರುಸಿನ 15 ರನ್ (6 ಎಸೆತ, 2 ಸಿಕ್ಸ್‌) ರಾಹುಲ್ ತೇವಾಟಿಯಾ, ಜೇಸನ್ ಹೋಲ್ಡರ್, ರಶೀದ್ ಖಾನ್ ತಾಲ 7 ರನ್‌ ಹೊಡೆದರು ಔಟಾದರು. ಕಗಿಸೊ ರಬಾಡ 3 ರನ್ ಗಳಿಸಿ ಅಜೇಯರಾಗಿ ಉಳಿದರು.

ಆರ್‌ಸಿಬಿ ಪರ ಅತ್ಯುತ್ತಮ ಬೌಲಿಂಗ್ ಸಂಘಟಿಸಿದ ಯುವ ವೇಗಿ ರಸಿಖ್ ಸಲಾಮ್ 3 ವಿಕೆಟ್ ಕಿತ್ತು ಗುಜರಾತ್ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದರು. ನಿಶಾಂತ್ ಸಿಂಧು, ರಾಹುಲ್ ತೇವಾಟಿಯಾ ಮತ್ತು ಅಪಾಯಕಾರಿ ರಶೀದ್ ಖಾನ್ ವಿಕೆಟ್ ಪಡೆಯುವಲ್ಲಿ ರಸಿಖ್ ಯಶಸ್ವಿಯಾದರು.

ಅನುಭವಿ ಬೌಲರ್‌ಗಳಾದ ಭುವನೇಶ್ವರ್ ಕುಮಾರ್ ಮತ್ತು ಜೋಶ್ ಹೇಜಲ್‌ವುಡ್ ತಲಾ 2 ವಿಕೆಟ್ ಪಡೆದರೆ ಕೃನಾಲ್ ಪಾಂಡ್ಯ 1 ವಿಕೆಟ್ ಪಡೆದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!