BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸಾಧನೆ

ಹಿರಿಯ ಶಿಕ್ಷಣತಜ್ಞ, ಎಂಐಟಿ ಮಾಹೆ ನಿರ್ದೇಶಕ ಕಮಾಂಡರ್ ಡಾ. ಅನಿಲ್ ರಾಣಾ ಅವರಿಗೆ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿಯ ಗರಿ

ಶಿಕ್ಷಣ, ಸಂಶೋಧನೆ ಹಾಗೂ ಶೈಕ್ಷಣಿಕ ಆಡಳಿತ ಕ್ಷೇತ್ರಗಳಲ್ಲಿ ಮೂರು ದಶಕಗಳಿಗೂ ಅಧಿಕ ಅವಧಿಯ ವಿಶಿಷ್ಟ ಸೇವೆ ಸಲ್ಲಿಸಿರುವ ಹಿರಿಯ ಶಿಕ್ಷಣತಜ್ಞ ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿರ್ದೇಶಕ ಹಾಗೂ ಈ ಹಿಂದೆ ಓರಿಯೆಂಟಲ್ ವಿಶ್ವವಿದ್ಯಾಲಯ, ಇಂದೋರ್‌ನ ಕುಲಪತಿ ಡಾ. ಅನಿಲ್ ರಾಣಾ ಅವರಿಗೆ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಭಾರತೀಯ ನೌಕಾಪಡೆಯ ಎಂಜಿನಿಯರಿಂಗ್ ವಿಭಾಗದಲ್ಲಿ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದ ಡಾ. ರಾಣಾ ಅವರು, ಬಳಿಕ ಶಿಕ್ಷಣ ಕ್ಷೇತ್ರದಲ್ಲಿ ದೇಶ-ವಿದೇಶಗಳ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಐಐಟಿ ಬಾಂಬೆದಿಂದ ರಿಲಯಬಿಲಿಟಿ ಎಂಜಿನಿಯರಿಂಗ್‌ನಲ್ಲಿ ಪಿಎಚ್.ಡಿ. ಹಾಗೂ ಐಐಟಿ ದೆಹಲಿಯಿಂದ ಎಂ.ಟೆಕ್. ಪದವಿ ಪಡೆದಿರುವ ಅವರು ಸಂಶೋಧನೆ, ಬೋಧನೆ ಹಾಗೂ ಶೈಕ್ಷಣಿಕ ಆಡಳಿತ ಕ್ಷೇತ್ರಗಳಲ್ಲಿ ಅಪಾರ ಕೊಡುಗೆ ನೀಡಿದ್ದಾರೆ.

ಅವರ ಸೇವೆ ಹಾಗೂ ಸಾಧನೆಯನ್ನು ಪರಿಗಣಿಸಿ, ಜೂನ್ 21ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆದ ಅಖಿಲ ಕರ್ನಾಟಕ ಶಿಕ್ಷಕರ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ” ದಲ್ಲಿ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮ ಸಂಯೋಜಕ ಡಾ. ಚಂದ್ರಶೇಖರ ಮಾಡಲಗೇರಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಿದ್ದರು.

ಈ ಸಮಾರಂಭವನ್ನು ಆರ್ಯಭಟ ಎಜುಕೇಶನಲ್ ಟ್ರಸ್ಟ್ ಹಾಗೂ ಚೇತನ ಫೌಂಡೇಶನ್ ಕರ್ನಾಟಕ ಸಂಯುಕ್ತವಾಗಿ ಆಯೋಜಿಸಿದ್ದರು, ಶಿಕ್ಷಣ, ಸಾಹಿತ್ಯ, ಕಲೆ, ಸಮಾಜಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!