BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸುದ್ದಿ

ಉಡುಪಿ ಜಿಲ್ಲೆಯ ಕಾರಾಗೃಹ ಜೈಲುವಾಸಿಗಳಿಗೆ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ

ಬ್ರಹ್ಮಾವರ: ಇಂದು ಸ್ವ ಉದ್ಯೋಗದ ಮೂಲಕ ಸ್ವಾವಲಂಬಿ ಬದುಕನ್ನು ರೂಪಿಸಲು ರುಡ್‌ಸೆಟ್ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ. ಹಾಗಾಗಿ ಬದುಕಿನಲ್ಲಿ ನಿಷ್ಠೆ ಇದ್ದಲ್ಲಿ ಯಶಸ್ವಿ ಉದ್ಯಮ ಸಾಧ್ಯ ಎಂದು ಶ್ರೀ.ಅಬೀದ್ ಗದ್ಯಾಳ, ಕೆ.ಎ.ಎಸ್. ಅಪರ ಜಿಲ್ಲಾಧಿಕಾರಿ ಉಡುಪಿ ಅಭಿಪ್ರಾಯಪಟ್ಟರು.

ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ಉಡುಪಿ, ಜಿಲ್ಲಾ ಕಾರಾಗೃಹ, ಹಿರಿಯಡ್ಕ ಮತ್ತು ರುಡ್‌ಸೆಟ್ ಸಂಸ್ಥೆ, ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ ೦೬ ದಿನಗಳ ಕಾಲ ನಡೆಯುವ ಉಡುಪಿ ಜಿಲ್ಲೆಯ ಕಾರಾಗೃಹ ಜೈಲುವಾಸಿಗಳಿಗೆ “ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಜೈಲುವಾಸಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಉದ್ಯಮದಲ್ಲಿ ಉನ್ನತಮಟ್ಟದ ಸಾಧಿಸಲು ಉದ್ಯಮದ ಕುರಿತು ನಿಷ್ಠೆ ಬೆಳೆಸಿಕೊಳ್ಳಬೇಕು ಅಂದಾಗ ಮಾತ್ರ ಅದರಲಿ ಬೆಳವಣಿಗೆ ಹೊಂದಬಹುದು. ಉದ್ಯಮದಲ್ಲಿ ತೊಡಗುವಾಗ ಅದಕ್ಕೆ ತಕ್ಕುದಾದ ರಿಸ್ಕ್ಅನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ಇನ್ನಷ್ಟು ಆತ್ಮವಿಶ್ವಾಸ ಹೆಚ್ಚಾಗುತ್ತದೆ ಜೊತೆಗೆ ಹಂತ ಹಂತವಾಗಿ ಉದ್ಯಮ ಬೆಳೆಯುತ್ತದೆ ಎಂದು ಹೇಳಿ ಶುಭ ಹಾರೈಸಿದರು. 

ನಾನು ಅವನಲ್ಲ ಎಂಬ ಮನೋಭಾವನೆಯಿಂದ ಹೊರಬಂದು ಸಮಾಜದಲ್ಲಿ ಎಲ್ಲರ ಜೊತೆ ಒಳ್ಳೆಯ ಜೀವನ ಮಾಡಬೇಕೆಂದು ಕೆನರಾ ಬ್ಯಾಂಕ್‌ನ ವೃತ್ತÀ ಕಛೇರಿಯ ಮಹಾ ಪ್ರಬಂಧಕರಾದ ಶ್ರೀ.ಗಂಗಾಧರ ಹೆಚ್.ಕೆ. ಅಭಿಪ್ರಾಯಪಟ್ಟರು.  

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಉಡುಪಿ ಜಿಲ್ಲಾ ಕಾರಾಗೃಹ ಅಧೀಕ್ಷಕರಾದ ಶ್ರೀ. ವಿಜಯಕುಮಾರ ಡಿ. ಚವ್ಹಾಣ್ ಮಾತನಾಡಿ ಈ ಮುಂದಿನ ಜೀವನದಲ್ಲಿ ಯಶಸ್ವಿ ಉದ್ಯಮಿಯಾಗಿ, ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಎಂದು ಶುಭ ಹಾರೈಸಿದರು. 

ಕಾರ್ಯಕ್ರಮದಲ್ಲಿ ಇನ್ನೋರ್ವ ಅತಿಥಿಗಳಾದ ಉಡುಪಿ ಜಿಲ್ಲೆಯ ಲೀಡ್ ಡಿಸ್ಟಿçÃಕ್ಟ್ ಮ್ಯಾನೇಜರ್ ಆದ ಶ್ರೀ. ಹರೀಶ ಜಿ. ಮಾತನಾಡಿ ಬ್ಯಾಂಕಿನಿAದ ಸೀಗುವ ಸಾಲ- ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಇನ್ನೋರ್ವ ಅತಿಥಿಗಳಾದ ಉಡುಪಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಶ್ರೀ. ಅರುಣ್ ಬಿ, ಬದುಕಿನಲ್ಲಿ ಛಲವಿದ್ದರೆ ನಾವು ಎಲ್ಲಿ ಬೇಕಾದರೂ ಜೀವನ ಕಟ್ಟಿಕೊಳ್ಳಬಹುದು ಎಂದು ಶುಭ ಹಾರೈಸಿದರು.

ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಡಾ. ಬೊಮ್ಮಯ್ಯ ಎಮ್ ತರಬೇತಿಯಲ್ಲಿ ಪಡೆದ ಕೌಶಲ್ಯವನ್ನು ಜೀವನದಲ್ಲಿ ಅಳವಡಿಸಿಕೊಂಡು ಹೊಸ ಬದುಕನ್ನು ಕಟ್ಟಿಕೊಳ್ಳಿ ಎಂದು ಶುಭ ಹಾರೈಸಿದರು. ಕಛೇರಿ ಸಹಾಯಕ ಶ್ರೀ ಶಾಂತಪ್ಪ ನಿರೂಪಿಸಿ, ಜಿಲ್ಲಾ ಕಾರಾಗೃಹದ ಸಿಬ್ಬಂದಿ ಆದ ಶ್ರೀಮತಿ ರೇಷ್ಮಾ ನಾಯಕ್ ಸ್ವಾಗತಿಸಿ, ಹಿರಿಯ ಕಛೇರಿ ಸಹಾಯಕರಾದ ಶ್ರೀಮತಿ ಶ್ರುತಿ ಪಿ.ಕುಮ್ಟಾಕರ್ ವಂದಿಸಿದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!