ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ಮೇರಾ ಯುವ ಭಾರತ್ ರಾಜ್ಯ ಅತ್ಯುತ್ತಮ ಯುವಮಂಡಲ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಇವರ ಜಂಟಿ ಆಶ್ರಯದಲ್ಲಿ ಇಂದು (21/6/26) ಬೆಳಿಗ್ಗೆ ಸಾಣೂರು ಸುವರ್ಣ ಗ್ರಾಮೋದಯ ಸೌಧ ಸಭಾಂಗಣದಲ್ಲಿ 12 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಕಾರ್ಕಳ ವಲಯ ಅಧ್ಯಕ್ಷರಾದ ಶ್ರೀ ಪ್ರಮೋದ್ ಚಂದ್ರ ಪೈ ಕಾರ್ಯಕ್ರಮವನ್ನು ಉದ್ಘಾಟಿಸಿ ದೈನಂದಿನ ಜೀವನದಲ್ಲಿ ನಿರಂತರ ಯೋಗ ಪ್ರಾಣಾಯಾಮಗಳನ್ನು ಮಾಡಿ ಉತ್ತಮ ಆರೋಗ್ಯದಿಂದ ಇರಲು ಸರಿಯಾದ ಆಹಾರ ಪದ್ಧತಿಯನ್ನು ಅನುಸರಿಸಬೇಕೆಂದು ತಿಳಿಸಿದರು ಮಂಡಲದ ಅಧ್ಯಕ್ಷರಾದ ಗುರುಪ್ರಸಾದ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು ಯೋಗ ಗುರುಗಳಾದ ಶ್ರೀ ಅಶೋಕ್ ಕುಮಾರ್ ಇವರು ಯೋಗದಿಂದಾಗುವ ಪ್ರಯೋಜನಗಳನ್ನು ತಿಳಿಸಿದರು ಯುವಕ ಮಂಡಲದ ಉಪಾಧ್ಯಕ್ಷರಾದ ಮೋಹನ್ ಶೆಟ್ಟಿ, ಕಾರ್ಯದರ್ಶಿ ರಾಜೇಶ್ ಕೋಶಾಧಿಕಾರಿ ಶುಭಕರ್ ಶೆಟ್ಟಿ ಮಾಜಿ ಅಧ್ಯಕ್ಷರಾದ ಜಗದೀಶ್ ಕುಮಾರ್ ಸಾಂಸ್ಕೃತಿಕ ಕಾರ್ಯದರ್ಶಿ ಮುರಳಿ ಸುವರ್ಣ, ದತ್ತಾತ್ರೇಯ,ಸುನಿಲ್ ಕುಲಾಲ್, ರಮೇಶ್ ಪೂಜಾರಿ, ಮಾ| ರಚಿತ್ ಜೀವನ್ ರಾವ್, ರವಿ ಆಚಾರ್ಯ, ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

0 ಕಾಮೆಂಟ್‌ಗಳು