BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಕಲಾಸಂಸ್ಕೃತಿ

ಸುಮನಸಾ ಕೊಡವೂರು : ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆ

ಉಡುಪಿ: ನಿಸ್ವಾರ್ಥ ಸೇವೆ, ಮಾನವೀಯ ಕಳಕಳಿ ಇಟ್ಟುಕೊಂಡು, ಜನರಿಗೆ ಸಹಾಯ ಮಾಡುತ್ತಾ ಸಾಮಾಜಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಬೆಳೆದು ನಿಂತಿರುವ ಸಂಸ್ಥೆ ಸುಮನಸಾ ಕೊಡವೂರು ಎಂದು ಪಡುಬಿದ್ರಿಯ ಯಸ್ಸೆನ್‌ ಸ್ಪೆಶನ್‌ ಎಕಾನೋಮಿಕ್‌ ಜೋನ್‌ ಮುಖ್ಯಸ್ಥ ಅಶೋಕ್‌ ಶೆಟ್ಟಿ ಹೇಳಿದರು.

ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆ ಮತ್ತು ಸುಮನಸಾ ಕೊಡವೂರು ರಜತ ಸಂಭ್ರಮ ಸಮಿತಿಯು ಭಾನುವಾರ ಕುಂಜಿಬೆಟ್ಟು ಐವೈಸಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಜತ ಮಹೋತ್ಸವ ಕಾರ್ಯಕ್ರಮವನ್ನು ಕಪ್ಪೆ ಚಿಪ್ಪಿನೊಳಗಿನಿಂದ ಮುತ್ತು ಹೊರ ಬರುವ ಮಾದರಿಯಲ್ಲಿ ಅದೇ ರೀತಿ ಹೊಳೆಯಬೇಕೆಂಬ ಸಂಕಲ್ಪದೊಂದಿಗೆ ವಿಶಿಷ್ಠವಾಗಿ ಉದ್ಘಾಟಿಸಿ ಅವರು ಮಾತನಾಡಿದರು.

ಸಂಸ್ಥೆಯು ಜನ್ಮ ತಾಳಿದ್ದೇ ನೆರವಿನ ಹಸ್ತ ಚಾಚುವ ಘಟನೆಯ ಮೂಲಕ ಎಂಬುದನ್ನು ನೋಡಿದರೆ ಅಚ್ಚರಿಯಾಗುತ್ತದೆ. ಬಡವರೊಬ್ಬರ ಮನೆ ಬೆಂಕಿಗಾಹುತಿಯಾದಾಗ ಅವರಿಗೆ ಮನೆ ಕಟ್ಟಿಕೊಡುವ ಮೂಲಕ ಈ ಸಂಸ್ಥೆ ಆರಂಭವಾಯಿತು. ಅಂದಿನಿಂದ ಇಂದಿನವರೆಗೆ ಸಂಸ್ಥೆ ತನ್ನ ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಿಂದೆ ನೋಡಿದ್ದೇ ಇಲ್ಲ ಎಂದು ವಿವರಿಸಿದರು.

ಸಂಸ್ಕೃತಿ, ಕಲೆ ಮತ್ತು ಮಾನವೀಯ ದೃಷ್ಟಿ ಇಟ್ಟುಕೊಂಡು ಸಾಂಸ್ಕೃತಿಕ ಸಂಘಟನೆಯಾಗಿ ಇಂದು ಬೆಳೆದಿದೆ. 31 ತುಳು ನಾಟಕ, 32 ಕನ್ನಡ ನಾಟಕ ಪ್ರದರ್ಶಿಸಿದದ್ದಲ್ಲದೇ, ಯಕ್ಷಗಾನವನ್ನೂ ಪ್ರದರ್ಶಿಸುತ್ತಾ, ಪ್ರೋತ್ಸಾಹಿಸುತ್ತಾ ಬಂದಿದೆ ಎಂದು ತಿಳಿಸಿದರು.

ಅನೇಕ ಸಂಘ ಸಂಸ್ಥೆಗಳು ಹುಟ್ಟುತ್ತವೆ. ಆರಂಭದಲ್ಲಿ ಹುಮ್ಮಸ್ಸಿನಿಂದ ಕೆಲಸ ಮಾಡುತ್ತವೆ. ಮೂರ್ನಾಲ್ಕು ವರ್ಷಕ್ಕೆ ಹುಮ್ಮಸ್ಸು ಕಳೆದುಕೊಂಡು ಮುಚ್ಚಿ ಹೋಗುತ್ತವೆ. ಸುಮನಸಾ ಕೊಡವೂರು ಸಂಘಟನೆಯು 25 ವರ್ಷ ಪೂರೈಸಲು ಅದರ ಪದಾಧಿಕಾರಿಗಳ ತ್ಯಾಗ, ನಿಸ್ವಾರ್ಥ ಸೇವೆ, ಪರಿಶ್ರಮ, ಮುತುವರ್ಜಿ ಕಾರಣ ಎಂದು ಹೇಳಿದರು.

ರಜತ ಮಹೋತ್ಸವದ ಕೈಪಿಡಿ ಬಿಡುಗಡೆ ಮಾಡಿದ ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಪೂರ್ಣಿಮಾ ಮಾತನಾಡಿ, ಉಡುಪಿಯಲ್ಲಿ ಬಹಳಷ್ಟು ಸಾಂಸ್ಕೃತಿಕ, ಸಾಹಿತ್ಯಿಕ, ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ. ಅದರಲ್ಲಿ ಸುಮನಸಾ ಕೊಡವೂರು ಪ್ರಮುಖವಾದುದು. ಉಡುಪಿ ನಗರದ ಮಧ್ಯದಲ್ಲಿ ಇರುವ ಅಜ್ಜರಕಾಡು ಭುಜಂಗ ಉದ್ಯಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ರಂಗಹಬ್ಬ ನಡೆಸುತ್ತಿರುವ ಏಕೈಕ ಸಂಸ್ಥೆ ಇದು’ ಎಂದು ಶ್ಲಾಘಿಸಿದರು.

‘ವಿಭಿನ್ನ ತಂತ್ರಜ್ಞಾನಗಳು ಬಂದಿರುವುದರಿಂದ ಮಕ್ಕಳು ಮನಸ್ಸು ಅತ್ತ ಹೋಗಿದೆ. ಮೊಬೈಲ್‌ ಬಂದು ಮಕ್ಕಳು ಹಾಳಾಗಿದ್ದಾರೆ ಎಂದು ಅನೇಕರು ದೂರುತ್ತಾರೆ. ಆದರೆ, ದೂರುವವರ ಕೈಯಲ್ಲಿಯೂ ಮೊಬೈಲ್ ಇರುತ್ತದೆ. ಕ್ರಿಯಾಶೀಲ ಗುಂಪು ಇದ್ದರೆ ಮಕ್ಕಳನ್ನು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೊಡಗುವಂತೆ ಮಾಡಬಹುದು ಎಂಬುದನ್ನು ಸುಮನಸಾ ಕೊಡವೂರು ಮಾಡಿ ತೋರಿಸಿದೆ’ ಎಂದು ತಿಳಿಸಿದರು.

ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಉದ್ಯಾವರ ನಾಗೇಶ್‌ ಕುಮಾರ್‌ ಮಾತನಾಡಿ, ‘ಉಡುಪಿಯಲ್ಲಿ ತುಳುಕೂಟವು ತುಳು ನಾಟಕ ಸ್ಪರ್ಧೆಯನ್ನು ಎರಡೂವರೆ ದಶಕದ ಹಿಂದೆ ಆರಂಭಿಸಿತ್ತು. ಅದರ ಎರಡನೇ ವರ್ಷದ ಸ್ಪರ್ಧೆಯಲ್ಲಿ ಸುಮನಸಾ ಕೊಡವೂರಿನ ಕಲಾವಿದರು ಬಂಗಾರ್ದ ಬಂಡಿ ಎಂಬ ನಾಟಕವನ್ನು ಪ್ರದರ್ಶಿಸುವಚ ಮೂಲಕ ಈ ಸಂಸ್ಥೆಯು ನಾಟಕದ ಯಾತ್ರೆ ಆರಂಭಿಸಿತು. ಈಗ ರಾಜ್ಯದಾದ್ಯಂತ ಹೆಸರು ಪಡೆದಿದೆ’ ಎಂದು ಹೇಳಿದರು.

‘ನಾವೆಲ್ಲ ಜನಪರವಾಗಿ, ಜಾತ್ಯತೀತ, ಸಂವಿಧಾನಬದ್ಧವಾಗಿ ಯೋಚನೆ ಮಾಡುತ್ತೇವೆ ಎಂದರೆ ಅದಕ್ಕೆ ಆಧುನಿಕ ರಂಗಭೂಮಿಯು ಕಾರಣವಾಗಿದೆ’ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಜತ ಸಂಭ್ರಮ ಸಮಿತಿಯ ಅಧ್ಯಕ್ಷ ಹರಿಪ್ರಸಾದ್‌ ರೈ ಮಾತನಾಡಿ, ‘ಸುಮನಸಾ ಕೊಡವೂರು ಸಂಸ್ಥೆ ಆರಂಭವಾಗುವುದಕ್ಕಿಂತ ಮೂರು ವರ್ಷ ಮೊದಲು ಉಡುಪಿ ಜಿಲ್ಲೆಯ ಉದಯವಾಯಿತು. ಅಗಲವಾದ ರಸ್ತೆ, ಕಟ್ಟಡ,  ಮಾಲ್‌ಗಳ ಸಹಿತ ಜಿಲ್ಲೆ ಬೆಳೆದಿದೆ. ಆದರೆ, ಜಿಲ್ಲೆಯ ಅಸ್ಮಿತೆ, ಅಸ್ತಿತ್ವಕ್ಕೆ ಇದಷ್ಟೇ ಸಾಲುವುದಿಲ್ಲ. ಕಲೆ, ಸಾಹಿತ್ಯ, ಸಂಸ್ಕೃತಿ ಎಲ್ಲ ಬೇಕಾಗುತ್ತದೆ. ಇವೆರಡು ಒಟ್ಟಿಗೆ ಸಾಗಿದರೆ ಮಾತ್ರ ಸಹನಾಶೀಲ ಜೀವನ ಇರಲು ಸಾಧ್ಯ’ ಎಂದು ವಿಶ್ಲೇಷಿಸಿದರು.

ಕಾಲೇಜಿನಲ್ಲಿ ವಿದ್ಯೆ ಮಾತ್ರ ದೊರೆಯಬಹುದು. ವೃತ್ತಿ ಜೀವನದಲ್ಲಿ ಸಂಪರ್ಕ ಕೌಶಲ, ನಾಯಕತ್ವ, ನಿರ್ವಹಣಾ ಕೌಶಲ ಬೇಕಾದರೆ ರಂಗಚಟುವಟಿಕೆ ಅಗತ್ಯ ಎಂದು ಪ್ರತಿಪಾದಿಸಿದರು.

ಬೆಳ್ಳಿ ಹಬ್ಬ ಕಾರ್ಯಕ್ರಮವನ್ನು ಒಂದು ವರ್ಷ ಮಾಡುತ್ತೇವೆ. ಅದಕ್ಕೆ ಎಲ್ಲರ ಸಹಕಾರ ಬೇಕು ಎಂದು ಕೋರಿದರು. 

ಬುಡ್ನಾರು ಯಕ್ಷ ಸಂಜೀವ ಟ್ರಸ್ಟ್‌ನ ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣ ಲೋಗೊ ಬಿಡುಗಡೆ ಮಾಡಿದರು. ಸಂಘಟನೆಯ ಅಧ್ಯಕ್ಷ ಪ್ರಕಾಶ್‌ ಜಿ. ಕೊಡವೂರು ಸ್ವಾಗತಿಸಿದರು. ಗೌರವಾಧ್ಯಕ್ಷ ಎಂ.ಎಸ್‌. ಭಟ್‌ ವಂದಿಸಿದರು. ದಯಾನಂದ ಕರ್ಕೇರ ನಿರೂಪಿಸಿದರು.

ರಜತ ಸಂಭ್ರಮ ಸಮಿತಿ ಗೌರವಾಧ್ಯಕ್ಷ ಎಂ.ಎಲ್. ಸಾಮಗ, ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ಸಂಚಾಲಕ ಭಾಸ್ಕರ ಪಾಲನ್‌ ಬಾಚನಬೈಲು ಉಪಸ್ಥಿತರಿದ್ದರು.

ಬಳಿಕ ಅಟ್ಟಮಟ್ಟಾ ಬೇಸಿಗೆ ಶಿಬಿರ ವಿದ್ಯಾರ್ಥಿಗಳಿಂದ ಎರಡು ನಾಟಕ ಪ್ರದರ್ಶನಗೊಂಡಿತು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!