ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ., ಕಿನ್ನಿಮುಲ್ಕಿ, ಸಂಸ್ಥೆಯ ಸಿಬ್ಬಂದಿಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ರಂಜಿತಾ ಪ್ಯಾಲೇಸ್ ಮಣಿಪಾಲ ಇನ್ ಹೊಟೇಲಿನ ಸಭಾಂಗಣದಲ್ಲಿ ಏರ್ಪಡಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಅರುಣ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದು, ಶ್ರೀ ಪ್ರಸಾದ್ ಶೆಟ್ಟಿ ಕುತ್ಯಾರು (ಅಧ್ಯಕ್ಷರು - ಶಿರ್ವ ಸೇವಾ ಸಹಕಾರಿ ಸಂಘ, ಶಿರ್ವ) ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳಿ (ಅಧ್ಯಕ್ಷರು - ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ, ಹಾಗೂ ನಿರ್ದೇಶಕರು - ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು) ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಬಿಂದು ನಾಯರ್ ( ಪ್ರೊ¥s಼ೆಸರ್- ಕರ್ನಾಟಕ ಇನ್ಸಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಮೂಡಬಿದ್ರೆ) ಇವರು ಸಿಬ್ಬಂದಿಗಳಿಗೆ ಬಗ್ಗೆ ತರಬೇತಿ ನೀಡಿದರು. ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಸಹಕಾರ ಯೂನಿಯನ್‌ನ ಕಾರ್ಯದರ್ಶಿ ಶ್ರೀಮತಿ ಅನುಷಾ ಕೋಟ್ಯಾನ್, ಸಿಬ್ಬಂದಿವರ್ಗ ಹಾಗೂ ಸಂಸ್ಥೆಯ ಉಪಾದ್ಯಕ್ಷರಾದ ಶ್ರೀ ಎಂ. ಗಣೇಶ್ ಕಿಣಿ, ಹಿರಿಯ ನಿರ್ದೇಶಕರಾದ ಶ್ರೀ ನಾರಾಯಣ ಬಲ್ಲಾಳ್ ಮತ್ತು ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಂಘದ ಪ್ರಧಾನ ವ್ಯವಸ್ಥಾಪಕರಾದ ಶ್ರೀ ರಾಜೇಶ್ ಹೆಗ್ಡೆ ಸ್ವಾಗತಿಸಿ, ವಂದಿಸಿದರು.

0 ಕಾಮೆಂಟ್‌ಗಳು