ತೆಕ್ಕಟ್ಟೆ : ಭೀಕರ ರಸ್ತೆ ಅಪಘಾತ; ಬೈಕ್ ಸವಾರ ದಾರುಣ ಸಾವು!

ರಾಷ್ಟ್ರೀಯ ಹೆದ್ದಾರಿ 66 ರ ತೆಕ್ಕಟ್ಟೆ ಪ್ರಮುಖ ಸರ್ಕಲ್‌ನಲ್ಲಿ ಜೂನ್ 2ರ ಮಂಗಳವಾರ ರಾತ್ರಿ ಜೀಪ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಮೃತ ದುರ್ದೈವಿಯನ್ನು ಮಣೂರು ಜಟ್ಟಿಗೇಶ್ವರ ದೈವಸ್ಥಾನದ ಸಮೀಪದ ನಿವಾಸಿ, ಕೋಟಿ ಪೂಜಾರಿ ಅವರ ಮನೆಯ ಗಣೇಶ್ ಎಂದು ಗುರುತಿಸಲಾಗಿದೆ.

ಮಂಗಳವಾರ ರಾತ್ರಿ ಸರಿ ಸುಮಾರು 9:47 ರ ವೇಳೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ರಾಷ್ಟ್ರೀಯ ಹೆ. 66ರ ಪ್ರಮುಖ ಭಾಗದಲ್ಲಿ ಅಳವಡಿಸಿದ ಸಿಸಿ ಕೆಮರಾದಲ್ಲಿ ಸಂಪೂರ್ಣ ಅಪಘಾತದ ದೃಶ್ಯಾವಳಿಗಳು ಸೆರೆಯಾಗಿದೆ.

ಕೋಟ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು