BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸುದ್ದಿ

ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರಚಿಕಿತ್ಸೆ ನಡೆಸಿದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ತಜ್ಞ ವೈದ್ಯರ ತಂಡ

ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರಚಿಕಿತ್ಸೆ ನಡೆಸಿದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ತಜ್ಞ ವೈದ್ಯರ ತಂಡವು 8 ಕೆ.ಜಿ ಗ್ರಾತದ ಗರ್ಭಕೋಶದ ಗಡ್ಡೆಯನ್ನು ತೆಗೆದಿದ್ದಾರೆ. ರೋಗಿಯು ಇದೀಗ ಚೇತರಿಸಿಕೊಳ್ಳುತ್ತಿದ್ದು ಚಿಕಿತ್ಸೆ ಮುಂದುವರಿಸಲಾಗಿದೆ. 

ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸ್ತ್ರೀ ರೋಗ ತಜ್ಞರಾದ ಡಾ.ಶಶಾಂಕ್ ಕಿಣಿ, ಡಾ. ಜಾಸ್ಮಿನ್, ಡಾ.ಕವಿತಾ, ಡಾ.ಅಮೃತಾಂಶ್ ಇವರ ತಂಡ ಮತ್ತು ಅರವಳಿಕೆ ತಜ್ಞರಾದ ಡಾ. ಸೂರ್ಯನಾರಾಯಣ, ಡಾ.ರಾಜ್ ಗೋಪಾಲ್ ಭಂಡಾರಿ ಹಾಗೂ ಇವರ ಸಹಾಯದಲ್ಲಿ ಶುಶ್ರೂಷಕಧಿಕಾರಿ ರಕ್ಷಿತಾ, ಓ.ಟಿ ಸಹಾಯಕಿ ಸಂಗೀತ ಇವರ ನೇತೃತ್ವದಲ್ಲಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

44 ವರ್ಷದ ಈ ಮಹಿಳೆ ಕಳೆದ 1 ವರ್ಷದಿಂದ ಹೊಟ್ಟೆಯಲ್ಲಿ ನೋವು ಕಾಣಿಸಿಕೊಂಡು ಖಾಸಗಿ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯುತ್ತಿದ್ದರು.

ಗುಣಮುಖರಾಗದ ಕಾರಣ ಈ ಮಹಿಳೆಯು ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಬಂದಿದ್ದು ಆಗ ತಜ್ಞ ವೈದ್ಯರು ಆ ಮಹಿಳೆಯನ್ನು ತಪಾಸಣೆ ಮಾಡಿದಾಗ ರೋಗಿಯ ಹೊಟ್ಟೆಯು (ಒಂದು ಮಕ್ಕಳ ಗಾತ್ರದ )ಗರ್ಭಿಣಿಯ ಹೊಟ್ಟೆಯ ರೀತಿಯಲ್ಲಿದ್ದು ನೀರು ತುಂಬಿದ ಗೆಡ್ಡೆಯ ಸ್ಥಿತಿಯಲ್ಲಿ ಕಂಡುಬoತು, ನಂತರ ಹೊಟ್ಟೆಯ ಅಲ್ಟ್ರಾಸೌಂಡ್ ಮತ್ತು ಸಿಟಿ ಸ್ಕ್ಯಾನ್ ಪರೀಕ್ಷೆಗೆ ಒಳಪಡಿಸಿದಾಗ ಗರ್ಭಕೋಶದಲ್ಲಿ ಗಡ್ಡೆ ಇರುವುದು ಪತ್ತೆಯಾಗಿತ್ತು.

ಈ ಶಸ್ತ್ರಚಿಕಿತ್ಸೆಯನ್ನು ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆಸಬೇಕೆಂದು ನಿರ್ಧರಿಸಿದ ತಜ್ಞ ವೈದ್ಯರ ತಂಡ ಜಿಲ್ಲಾ ಆಸ್ಪತ್ರೆ ಮತ್ತು ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಹೆಚ್. ಅಶೋಕ್ ಅವರ ಸಲಹೆಯಂತೆ ಮೇ 25 ರಂದು ಮಹಿಳೆಗೆ ಶಸ್ತ್ರಚಿಕಿತ್ಸೆಗೆ ಒಳಪಡಿಸಿ ಯಶ್ವಸಿಯಾಗಿ 8 ಕೆ.ಜಿ ಗಡ್ಡೆಯನ್ನು ಹೊರತೆಗೆದಿದ್ದಾರೆ.

ಶಸ್ತ್ರಚಿಕಿತ್ಸೆಯ ನಂತರ ಚೇತರಿಸಿಕೊಂಡು ಮಾತಾನಾಡಿದ ಮಹಿಳೆ, ಆಸ್ಪತ್ರೆಯ ಎಲ್ಲಾ ವೈದ್ಯರಿಗೆ ಹಾಗೂ ಆಸ್ಪತ್ರೆಯ ಮುಖ್ಯಸ್ಥರಾದ ಜಿಲ್ಲಾ ಸರ್ಜನ್ ಇವರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಮಹಿಳೆಯು ಯಾವುದೇ ತೊಂದರೆ ಇಲ್ಲದೆ ವೈದ್ಯರ ತಂಡ ನಮಗೆ ಚಿಕಿತ್ಸೆ ನೀಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು. ನಮ್ಮಂತಹ ಬಡವರಿಗೆ ಇನ್ನೂ ಹೆಚ್ಚಿನ ಚಿಕಿತ್ಸೆ ಲಭ್ಯವಾಗಲಿ ಎಂದು ಮೆಚ್ಚಿಗೆ ವ್ಯಕ್ತಪಡಿಸಿದರು.

ಇಷ್ಟೊಂದು ಗಾತ್ರದ ಗರ್ಭಕೋಶದ ಗೆಡ್ಡೆಯನ್ನು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆದ ಇಡೀ ತಜ್ಞ ವೈದ್ಯರ ತಂಡ ಹಾಗೂ ಸಿಬ್ಬಂದಿಯವರ ಕಾರ್ಯವೈಖರಿಗೆ ಜಿಲ್ಲಾಸರ್ಜನ್ ಪ್ರಶಂಸೆ ವ್ಯಕ್ತಪಡಿಸಿದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!