ಯುವ ಕಲಾವಿದರಿಗೆ ಮಾರ್ಗದರ್ಶಿ ಶಿಬಿರ

 

ವೃತ್ತಿ ಮೇಳದಲ್ಲಿರುವ ಯುವ ಕಲಾವಿದರಿಗೆ ನಾಲ್ಕು ದಿನಗಳ ಮಾರ್ಗದರ್ಶಿ ಶಿಬಿರವನ್ನು ಉಡುಪಿಯ ಯಕ್ಷಗಾನ ಕಲಾರಂಗವು ಆಯೋಜಿಸಿದೆ. ಈ ಸನಿವಾಸ ಶಿಬಿರ ಜೂನ್ ೨ ರಿಂದ ೫ ರವರೆಗೆ ಸಂಸ್ಥೆಯ ಐವೈಸಿ ಕಟ್ಟಡದಲ್ಲಿ ಜರುಗಲಿದೆ. ಯಕ್ಷಗಾನದ ಹಿರಿಯ ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿಯವರು ಜೂನ್ ೨, ಮಂಗಳವಾರ ಪೂರ್ವಹ್ನ ೧೦.೩೦ಕ್ಕೆ ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಸಂಸ್ಥೆಯ ಅಧ್ಯಕ್ಷರೂ ಶಿಬಿರದ ಪ್ರಾಯೋಜಕರೂ ಆದ ಎಂ. ಗಂಗಾಧರ ರಾವ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಮಾರಂಭದಲ್ಲಿ ಯಕ್ಷಗಾನ ವಿದ್ವಾಂಸ ದಿವಾಕರ ಹೆಗಡೆ, ಕೆರೆಹೊಂಡ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ. ಪ್ರಸಂಗಕರ್ತ ಪವನ್ ಕಿರಣ್ಕೆರೆ ಸಂಯೋಜನೆಯಲ್ಲಿ ನಡೆಯುವ ಶಿಬಿರದಲ್ಲಿ ವಿವಿಧ ಮೇಳಗಳ ೩೫ ಯುವ ಕಲಾವಿದರು ಪ್ರಯೋಜನ ಪಡೆಯಲಿದ್ದು ೨೫ಕ್ಕೂ ಹೆಚ್ಚು ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಲಿದ್ದಾರೆ ಎಂದು ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು