BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ
[ಹೋಮ್] ತಿಂಗಳ ಪಾಪ್ಯುಲರ್ ಸುದ್ದಿಗಳು

Krishna Mata Astami 2026

Krishna Mata Astami 2026
ಕರಾವಳಿ

ಮಣಿಪಾಲದಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ: ಎಫ್‌ಐಆರ್‌ಗೆ ಆಗ್ರಹಿಸಿ ಉಡುಪಿ ಎಸ್‌ಪಿಗೆ ಯುವಮೋರ್ಚಾ ಮನವಿ

ವಿದ್ಯಾರ್ಥಿಗಳ ಮುಖವಾಡ ಧರಿಸಿ ಪ್ರತಿಭಟನೆಯ ನಾಟಕವಾಡಿ ಯುವಜನತೆಯ ಮನಸ್ಥಿತಿಯಲ್ಲಿ ಗೊಂದಲ ಸೃಷ್ಟಿಸಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾದ ಕ್ಯಾಕ್ರೋಜ್ ಜನತಾ ಪಾರ್ಟಿ ಮತ್ತು ಕಾಂಗ್ರೆಸ್ ಪಾರ್ಟಿ ದಿನಾಂಕ 24 ಜೂನ್ 2026 ರಂದು ಮಣಿಪಾಲದಲ್ಲಿ ನಡೆಸಿರುವ ಪ್ರತಿಭಟನೆಯಲ್ಲಿ ಭಾರತದ ರಾಷ್ಟ್ರಧ್ವಜಕ್ಕೆ ಅವಮಾನ, ಸರ್ಕಾರಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಹಾಗೂ ಸಾರ್ವಜನಿಕರ ಮುಂದೆ ಅಶಾಂತಿ ಉಂಟುಮಾಡುವ ಕೃತ್ಯ, ಭಾರತದ ಮಾನ್ಯ ಪ್ರಧಾನಮಂತ್ರಿಯವರ ವಿರುದ್ಧ ಅವಾಚ್ಯ ಹಾಗೂ ಅವಹೇಳನಕಾರಿ ಪದಗಳನ್ನು ಬಳಸಿರುವ ವಿರುದ್ಧ ಉಡುಪಿ ನಗರ ಯುವಮೋರ್ಚಾ ಅಧ್ಯಕ್ಷರಾದ ಶ್ರೀವತ್ಸ ಅವರ ನೇತೃತ್ವದಲ್ಲಿ ಇಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಹರಿರಾಮ್ ಶಂಕರ್ ಅವರನ್ನು ಭೇಟಿ ಮಾಡಿ ಸಂಬಂಧಿತ ಅಪರಾಧಗಳ ಕುರಿತು ಪ್ರಥಮ ಮಾಹಿತಿ ವರದಿ (FIR) ದಾಖಲಿಸುವಂತೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರು ಮಣಿಪಾಲದಲ್ಲಿ ನಡೆದ ಪ್ರತಿಭಟನೆಯ ವೇಳೆ ನಡೆದ ಎಲ್ಲಾ ಘಟನೆಗಳನ್ನು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ವಿವರವಾಗಿ ಪ್ರಸ್ತಾಪಿಸಿ, ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಒಂದು ವೇಳೆ ಶೀಘ್ರದಲ್ಲೇ ಕ್ರಮ ಕೈಗೊಳ್ಳದಿದ್ದಲ್ಲಿ ಮಣಿಪಾಲ ಪೊಲೀಸ್ ಠಾಣೆಯ ಎದುರು ಬಿಜೆಪಿ ಯುವಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಅಭಿರಾಜ್ ಸುವರ್ಣ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಗಣೇಶ್, ನಗರ ಯುವಮೋರ್ಚಾ ಉಪಾಧ್ಯಕ್ಷರಾದ ನಿಖಿಲ್ ಮಡಿವಾಳ, ಭೂಷಣ್ ಕುಮಾರ್, ಶ್ರೀಕಾಂತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಿತಿನ್ ಪೈ, ಮಣಿಪಾಲದ ಪ್ರಸಾದ್ ಗ್ಯಾಂಸ್ಕರ್, ಕಾರ್ಯದರ್ಶಿ ಹರ್ಷರಾಜ್, ಧನುಷ್ ಕಡಿಯಾಳಿ, ದೀಕ್ಷಿತ್ ಶೆಟ್ಟಿ ಉಪಸ್ಥಿತರಿದ್ದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!