BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸುದ್ದಿ

ಉಡುಪಿ: ಎಸ್‌ಬಿಐ ಪ್ರಾದೇಶಿಕ ಕಚೇರಿಯಿಂದ ಮಣಿಪಾಲ ಶಾಖೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಉಡುಪಿ ಪ್ರಾದೇಶಿಕ ಕಚೇರಿಯ ವತಿಯಿಂದ ಮಣಿಪಾಲ ಶಾಖೆಯ ಆವರಣದಲ್ಲಿ ಮಾಹೆ ವಿದ್ಯಾರ್ಥಿಗಳು ಮತ್ತು ಮಣಿಪಾಲ ಶಾಖೆಯ ಗ್ರಾಹಕರಿಗೆ ನಗರ ಪ್ರಥಮ ಆರೋಗ್ಯ ಕೇಂದ್ರ ಮತ್ತು ಮಣಿಪಾಲ ಕೆ ಎಂ ಸಿ ಡೆಂಟಲ್ ವಿಭಾಗದ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಇಂದು ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಎಸ್‌ಬಿ ಉಡುಪಿ ಪ್ರಾದೇಶಿಕ ವ್ಯವಸ್ಥಾಪಕರಾದ ಶ್ರೀ ಪ್ರಕಾಶ್ ಅಡಿಗ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬ್ಯಾಂಕಿಂಗ್ ಸೇವೆಯ ಜೊತೆಗೆ ಗ್ರಾಹಕರು ಮತ್ತು ಸಮಾಜದ ಆರೋಗ್ಯದ ಬಗ್ಗೆಯೂ ಎಸ್‌ಬಿಐ ಬದ್ಧವಾಗಿದೆ ಎಂದು ತಿಳಿಸಿದರು. ಮಾಹೆ ವಿದ್ಯಾರ್ಥಿಗಳು ಮತ್ತು ಗ್ರಾಹಕರ ಸಕ್ರಿಯ ಭಾಗವಹಿಸುವಿಕೆಯನ್ನು ಅವರು ಶ್ಲಾಘಿಸಿದರು.

ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ, ರಕ್ತದೊತ್ತಡ, ಸಕ್ಕರೆ ಪರೀಕ್ಷೆ, ದಂತ ತಪಾಸಣೆ,ಬಿಎಂಐ ಮತ್ತು ವೈದ್ಯರ ಸಲಹೆ ನೀಡಲಾಯಿತು. ವಿದ್ಯಾರ್ಥಿಗಳು ಮತ್ತು ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರಯೋಜನ ಪಡೆದುಕೊಂಡರು.

ಕಾರ್ಯಕ್ರಮದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ದ ವೈದ್ಯೆ ಡಾ. ಶಾಮಿನಿ, ಎನ್‌ಆರ್‌ಐ ಗ್ರಾಹಕರಾದ ಶ್ರೀ ಸುಧೀರ್, ಮುಖ್ಯ ವ್ಯವಸ್ಥಾಪಕ ಶ್ರೀಕೃಷ್ಣರಾಜ್ ಕೆ. ಭಟ್, ಶ್ರೀ ಅಕ್ಷಯ್ ಭಾಗವತ್, ಮಣಿಪಾಲ ಶಾಖೆಯ ಉಪ ವ್ಯವಸ್ಥಾಪಕ ಶಿವಾ ರಾಜೀವ್ ಮತ್ತು ಇತರ ಗ್ರಾಹಕರು ಉಪಸ್ಥಿತರಿದ್ದರು.

ಶಿಬಿರದ ಯಶಸ್ಸಿಗೆ ಸಹಕರಿಸಿದ ವೈದ್ಯಕೀಯ ತಂಡ, ಅಧಿಕಾರಿಗಳು ಮತ್ತು ಎಲ್ಲಾ ಭಾಗವಹಿಸಿದವರಿಗೆ ಮುಖ್ಯ ವ್ಯವಸ್ಥಾಪಕ ಶ್ರೀಕೃಷ್ಣರಾಜ್ ಕೆ. ಭಟ್ ಧನ್ಯವಾದ ಅರ್ಪಿಸಿದರು. ಇಂತಹ ಸಮುದಾಯಪರ ಕಾರ್ಯಕ್ರಮಗಳನ್ನು ಮುಂದೆಯೂ ಮುಂದುವರಿಸುವುದಾಗಿ ಅವರು ಹೇಳಿದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!