ಶಾರದಾ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿ ಚಿ, ಯಶಸ್ ಸಾಗಿಲಿಯವರ ಯಶಸ್ಸಿನ ಯಶೋಗಾಥೆ

ಉಡುಪಿ : ಶಾರದಾ ಪದವಿ ಪೂರ್ವ ಕಾಲೇಜಿನ ಹೆಮ್ಮೆಯ ಹಳೆ ವಿದ್ಯಾರ್ಥಿ ಚಿ. ಯಶಸ್ ಸಾಗಿಲಿ, ಶ್ರೀ ಸನ್ನಗುರಯ್ಯ ಎಸ್.ಎಂ. ಅವರ ಪುತ್ರ, ಇತ್ತೀಚೆಗೆ ಕಾಲೇಜಿಗೆ ಭೇಟಿ ನೀಡಿ ತಮ್ಮ ಯಶೋಗಾಥೆಯನ್ನು ಹಂಚಿಕೊಂಡರು. 

ತಮ್ಮ ಇಂದಿನ ಸಾಧನೆಗೆ ಭದ್ರ ಅಡಿಪಾಯ ಹಾಕಿದ ಶಾರದಾ ಪದವಿ ಪೂರ್ವ ಕಾಲೇಜಿನ ನಿರ್ದೇಶಕರು, ಪ್ರಾಂಶುಪಾಲರು ಹಾಗೂ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಅವರು ಹೃತ್ತೂರ್ವಕ ಕೃತಜ್ಞತೆ ಸಲ್ಲಿಸಿದರು. ಕಾಲೇಜಿನಲ್ಲಿ ಪಡೆದ ಗುಣಮಟ್ಟದ ಶಿಕ್ಷಣ, ಮೌಲ್ಯಾಧಾರಿತ ಮಾರ್ಗದರ್ಶನ, ವ್ಯಕ್ತಿತ್ವ ವಿಕಸನಕ್ಕೆ ದೊರೆತ ಅವಕಾಶಗಳು ಹಾಗೂ ನಿರಂತರ ಪ್ರೋತ್ಸಾಹವೇ ತಮ್ಮ ಯಶಸ್ಸಿನ ಮೂಲ ಕಾರಣಗಳಾಗಿವೆ ಎಂದು ಅವರು ಸಂತಸದಿಂದ ಸ್ಮರಿಸಿದರು.

ಯಶಸ್ ಅವರು ಎಂಐಟಿ ಮಣಿಪಾಲದಲ್ಲಿ ಕಂಪ್ಯೂಟರ್ ಸೈನ್ಸ್ (Artificial Intelligence Machine Learning - (ML) ವಿಭಾಗದಲ್ಲಿ ಬಿ.ಟೆಕ್ ಪದವಿ ಪೂರ್ಣಗೊಳಿಸಿದ್ದು, ಇದೀಗ ಫೈಟ್‌ಮೇಟ್ ಎಐ (Freightmate AI), ಬೆಂಗಳೂರು ಸಂಸ್ಥೆಯಲ್ಲಿ ವಾರ್ಷಿಕ 724 ಲಕ್ಷ (LPA) ವೇತನದೊಂದಿಗೆ ಉದ್ಯೋಗ ಪಡೆದಿದ್ದಾರೆ. ಕಾಲೇಜಿನಲ್ಲಿದ್ದ ಅವಧಿಯಲ್ಲಿ ಉತ್ತಮ ಗುಣಮಟ್ಟದ ಬೋಧನೆ ನೀಡಿದ ಎಲ್ಲಾ ಉಪನ್ಯಾಸಕರಿಗೆ ಅವರು ಕೃತಜ್ಞತೆ ಸಲ್ಲಿಸಿದರು. ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಹಾಗೂ ಇತರ ಸಹಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸಲು ನೀಡಿದ ಪ್ರೋತ್ಸಾಹವನ್ನು ಸ್ಮರಿಸಿದರು. ಪ್ರಾಂಶುಪಾಲರು ತಮ್ಮಲ್ಲಿ ಸಂವಹನ ಕೌಶಲ್ಯ, ನಾಯಕತ್ವ ಗುಣ, ವ್ಯಕ್ತಿತ್ವ ವಿಕಸನ ಹಾಗೂ ಜೀವನ ಕೌಶಲ್ಯಗಳನ್ನು ಬೆಳೆಸುವಲ್ಲಿ ಪಮುಖ ಪಾತ್ರ ವಹಿಸಿದ್ದು, ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಸರಿಯಾದ ಮಾರ್ಗದರ್ಶನ ನೀಡಿದರು ಎಂದು ಹೇಳಿದರು.

ಅಲ್ಲದೆ, ಡಾ. ಟಿ.ಎಂ.ಎ. ಪೈ ಶಿಕ್ಷಣ ಸಂಸ್ಥೆಗಳ SAGES ಕೋಟಾ ಮೂಲಕ ಎಂಐಟಿ ಮಣಿಪಾಲದಲ್ಲಿ ಪ್ರವೇಶ ದೊರೆತು ಶೇ.75ರಷ್ಟು ಶುಲ್ಕ ವಿನಾಯಿತಿ ಲಭಿಸಿದ್ದರಿಂದ ಗುಣಮಟ್ಟದ ಶಿಕ್ಷಣ ಪಡೆಯಲು ಸಾಧ್ಯವಾಯಿತು. ಈ ಆರ್ಥಿಕ ನೆರವೇ ತಮ್ಮ ಇಂದಿನ ಯಶಸ್ಸಿಗೆ ಪ್ರಮುಖ ಕಾರಣವಾಗಿದ್ದು, ಜೀವನದ ಗುರಿ ಸಾಧಿಸುವಲ್ಲಿ ಮಹತ್ತರ ಸಹಕಾರಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಶಾರದಾ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ವ್ಯಕ್ತಿತ್ವ ವಿಕಸನ, ನಾಯಕತ್ವ ಹಾಗೂ ವೃತ್ತಿ ಮಾರ್ಗದರ್ಶನ ನೀಡುವುದರೊಂದಿಗೆ, ಅರ್ಹ ವಿದ್ಯಾರ್ಥಿಗಳಿಗೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ಅಡಿಯಲ್ಲಿ ಕಾರ್ಯನಿರ್ವಹಿಸುವ ಎಂಐಟಿ ಮಣಿಪಾಲ, ಕಸ್ತೂರ್ಬಾ ಮೆಡಿಕಲ್ ಕಾಲೇಜು (KMC) ಸೇರಿದಂತೆ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ SAGES ಕೋಟಾ ಮೂಲಕ ಪ್ರವೇಶ ಹಾಗೂ ಅನ್ವಯವಾಗುವ ಶುಲ್ಕ ರಿಯಾಯಿತಿಗಳ ಕುರಿತು ಮಾರ್ಗದರ್ಶನ ನೀಡುತ್ತಿದೆ.

ಈ ಸಂದರ್ಭದಲ್ಲಿ ಶಾರದಾ ಪದವಿ ಪೂರ್ವ ಕಾಲೇಜಿನ ನಿರ್ದೇಶಕರಾದ ಶ್ರೀ ವಿದ್ಯಾವಂತ ಆಚಾರ್ಯಯು, ಪ್ರಾಂಶುಪಾಲರಾದ ಶ್ರೀ ವಿಕ್ರಮ್ ದೇವ್ ಪ್ರಭು, ಹಾಗೂ ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಯಶಸ್ ಸಾಗಿಲಿ ಅವರ ಈ ಅಪೂರ್ವ ಸಾಧನೆಗೆ ಹತ್ತೂರ್ವಕ ಅಭಿನಂದನೆ ಸಲ್ಲಿಸಿ, ಅವರ ಮುಂದಿನ ಜೀವನ ಹಾಗೂ ವೃತ್ತಿ ಜೀವನದಲ್ಲಿ ಇನ್ನಷ್ಟು ಯಶಸ್ಸು ಮತ್ತು ಉನ್ನತ ಸಾಧನೆಗಳು ದೊರೆಯಲಿ ಎಂದು ಶುಭ ಹಾರೈಸಿದರು. ಅವರ ಸಾಧನೆ ಶಾರದಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕ ಮಾದರಿಯಾಗಿದ್ದು, ಉನ್ನತ ಗುರಿಗಳನ್ನು ಸಾಧಿಸಲು ಪ್ರೇರಣೆಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು