ಕೇಂದ್ರ ಸರ್ಕಾರದ ಕುಸುಮ್ ಸೋಲಾರ್ ಯೋಜನೆಗೆ ಸ್ಥಳ ಮಂಜೂರಾತಿ ವಿಳಂಬ; ಸಂಸದ -ಶಾಸಕರಿಂದ ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನಿಶ್ ಭೇಟಿ

ಉಡುಪಿ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಕೇಂದ್ರ ಸರ್ಕಾರದ ಕುಸುಮ್ ಸೋಲಾರ್ ಯೋಜನೆ ಅನುಷ್ಠಾನ ಮಾಡಲು ಸರ್ಕಾರಿ ಸ್ಥಳವನ್ನು ಜಿಲ್ಲಾಧಿಕಾರಿಗಳು ಮಂಜೂರು ಮಾಡಿದ್ದರೂ ಅರಣ್ಯ ಇಲಾಖೆ ತಡೆ ಹಿಡಿದ ಕಾರಣಕ್ಕೆ ಕೇಂದ್ರ ಸರ್ಕಾರ ಮಂಜೂರು ಮಾಡಿದ 20 ಕೋಟಿ ರೂಪಾಯಿ ಮರಳಿ ಹೋಗುವ ಸಾಧ್ಯತೆ ಇದ್ದು, ರಾಜ್ಯದ ಮುಖ್ಯ ಕಾರ್ಯದರ್ಶಿಗಳು ಮಧ್ಯಪ್ರವೇಶಿಸಿ ಅರಣ್ಯ ಇಲಾಖೆಗೆ ನಿರ್ದೇಶನ ನೀಡಿ ಮಂಜೂರಾದ ಸ್ಥಳದಲ್ಲಿದ್ದ ಅಕೇಶಿ ಗಿಡಗಳನ್ನು ತೆರವುಗೊಳಿಸಿ, ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಅವಕಾಶ ಒದಗಿಸಬೇಕೆಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕುಂದಾಪುರ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿಯವರು ರಾಜ್ಯದ ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲಿನಿ‌ ರಜನೀಶ್ ರವರನ್ನು ಭೇಟಿ ಮಾಡಿ ಚರ್ಚಿಸಿದರು.

ಉಡುಪಿ ಜಿಲ್ಲೆಯ, ಕುಂದಾಪುರ ವಿಧಾನಸಭಾ ಕ್ಷೇತ್ರದ ವಡ್ಡರ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾವಡಿ, ಬೈಂದೂರಿನ ಕಿರಿಮಂಜೇಶ್ವರ, ಕಾಪುವಿನ ಬೆಳ್ಳೆ, ಉಡುಪಿಯ ಅಂಜಾರು ಮತ್ತು ಬಡಗುಬೆಟ್ಟು ಪಂಚಾಯಿತಿಗಳಲ್ಲಿ ಜಾಗ ನಿಗದಿಕರಿಸಿದ್ದು, ಕಾಮಗಾರಿ ವಿಳಂಬವಾಗುತ್ತಿರುವುದನ್ನು ಸಂಸದ ಮತ್ತು ಶಾಸಕರ ಮೂಲಕ ತಿಳಿದುಕೊಂಡ ಶಾಲಿನಿ ರಜನಿಶ್ ರವರು ಕೂಡಲೇ ಕೇಂದ್ರ ಸರ್ಕಾರದ ಯೋಜನೆ ಅನುಷ್ಠಾನ ಮಾಡಲು ಆದೇಶ ನೀಡುವುದಾಗಿ ತಿಳಿಸಿದ್ದಾರೆ ಎಂದು ಸಂಸದ ಕೋಟ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು