ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಮಾಸಿಕ ಸಭೆ

ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಶ್ರೀಮತಿ ಜ್ಯೋತಿ ಹೆಬ್ಬಾರ್ ಅವರ ಅಧ್ಯಕ್ಷತೆಯಲ್ಲಿ ತಾ. 18.7.2026ರಂದು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಮಾಸಿಕ ಸಭೆ ನಡೆಯಿತು.

ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿಯ‌ ನೂತನ ಮಹಿಳಾ ಜಿಲ್ಲಾಧ್ಯಕ್ಷೆಯಾಗಿ ಆಯ್ಕೆಯಾಗಿರುವ ನಿರೀಕ್ಷಾ ಮೆಂಡನ್ ಅವರಿಗೆ ಶಾಲು ಹೊದಿಸಿ, ಗೌರವಿಸಿ ಉತ್ತಮ ರೀತಿಯಲ್ಲಿ ಪಕ್ಷ ಸಂಘಟನೆಯನ್ನು ಮಾಡಬೇಕೆಂದು ಶುಭ ಹಾರೈಸಲಾಯಿತು.

ಈ ಸಭೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರು ಉಪಸ್ಥಿತರಿದ್ದು ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಆಯಾ ಬಿ.ಎಲ್..ಓ'ಗಳೊಂದಿಗೆ ಅಲ್ಲಿನ ಸ್ಥಳೀಯ ಬ್ಲಾಕ್ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷರು ಹಾಗೂ ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಪದಾಧಿಕಾರಿಗಳು ಉಪಸ್ಥಿತರಿದ್ದು ಪ್ರತಿಯೊಂದು ಅರ್ಹ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲು ಶ್ರಮಿಸಬೇಕೆಂದು ತಿಳಿಸಿದರು. 

ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಶ್ರೀಮತಿ ಜ್ಯೋತಿ ಹೆಬ್ಬಾರ್ ಅವರು ಮಾತನಾಡಿ ತುಳುನಾಡಿನ ಸಂಸ್ಕೃತಿ ಹಾಗೂ ಸಾಂಪ್ರದಾಯವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ "ಆಟಿಡೊಂಜಿ ದಿನ" ಕಾರ್ಯಕ್ರಮವನ್ನು ಮಾಡುವುದರ ಬಗ್ಗೆ ಈ ಸಭೆಯಲ್ಲಿ ತಿಳಿಸಿದರು. ಗೃಹಜ್ಯೋತಿ ಮರುನೋಂದಣಿಯ ಪ್ರಕ್ರಿಯೆಯಲ್ಲಿ ಆಯಾ ಅರ್ಹ ಫಲಾನುಭವಿಗಳಿಗೆ ಸಹಾಯ ಮಾಡಲು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಪದಾಧಿಕಾರಿಗಳು ಹಾಗೂ ಎಲ್ಲಾ ಬ್ಲಾಕ್ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಹಕರಿಸಬೇಕೆಂದು ತಿಳಿಸಿದರು.

ಈ ಸಭೆಯಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಗೀತಾ ವಾಗ್ಳೆ, ಹಿರಿಯ ಮಹಿಳಾ ಕಾಂಗ್ರೆಸ್‌ನ ನಾಯಕಿಯರಾದ ಸರಸು ಬಂಗೇರ, ಮಾಲಿನಿ ರೈ, ಬ್ಲಾಕ್ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷರಾದ ದೇವಕಿ ಸಣ್ಣಯ್ಯ, ಸುಮ ಅಡ್ಯಂತಾಯ, ಅನಿತಾ ಬಾಬು ಪೂಜಾರಿ, ಶಾಂತಾ ರೈ, ರೇಖಾ ಸುವರ್ಣ, ಮಹಿಳಾ ಕಾಂಗ್ರೆಸ್‌ನ ನಾಯಕಿಯರಾದ ಮೀನಾಕ್ಷಿ ಮಾಧವ ಬನ್ನಂಜೆ, ಗೋಪಿ ನಾಯ್ಕ್, ದೇವಕಿ ಕೋಟ್ಯಾನ್, ಸರಸ್ವತಿ, ಜ್ಯೋತಿ ಪುತ್ರನ್, ಮಮತಾ ಕಿಶೋರ್ ಶೆಟ್ಟಿ, ರೋಶ್ನಿ ಶೆಟ್ಟಿ, ಜಾನಕಿ ನಾಯ್ಕ್, ವಾಣಿ ಶೆಟ್ಟಿ, ಶೋಭಾ ನಾಯ್ಕ್, ಸುಧಾ ಪೂಜಾರಿ, ಲೀಲಾವತಿ, ಸುಮನಾ ಹಾಗೂ ಮಹಿಳಾ ಕಾಂಗ್ರೆಸ್‌ನ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಪುಷ್ಪ ಅಂಚನ್ ಸ್ವಾಗತಿಸಿದರು, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಸಂಧ್ಯಾ ತಿಲಕ್‌ರಾಜ್ ಅವರು ವರದಿ ವಾಚಿಸಿದರು. ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಮಮತಾ ಶೆಟ್ಟಿ ಧನ್ಯವಾದ ನೀಡಿದರು...

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು