BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ರಾಜ್ಯ

ಕರ್ನಾಟಕದಲ್ಲಿ ಪಾನ್ ಮಸಾಲಾ, ತಂಬಾಕು ಪದಾರ್ಥಗಳ ಮಾರಾಟ ಒಂದು ವರ್ಷ ಸಂಪೂರ್ಣ ಬಂದ್!


ಸಾರ್ವಜನಿಕ ಆರೋಗ್ಯ ಮತ್ತು ಆಹಾರ ಸುರಕ್ಷತೆಯ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ರಾಜ್ಯಾದ್ಯಂತ ಮಹತ್ವದ ಆದೇಶ ಹೊರಡಿಸಿದ್ದು, ತಂಬಾಕು ಹಾಗೂ ನಿಕೋಟಿನ್ ಹೊಂದಿರುವ ಗುಟ್ಕಾ ಮತ್ತು ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಒಂದು ವರ್ಷದ ಅವಧಿಗೆ ಸಂಪೂರ್ಣ ನಿಷೇಧ ಹೇರಿದೆ.

ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ಆಯುಕ್ತರಾದ ಕೆ. ಶ್ರೀನಿವಾಸ್ ಅವರು ಈ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಈ ಆದೇಶದ ಪ್ರಕಾರ, ರಾಜ್ಯದಲ್ಲಿ ತಂಬಾಕು ಅಥವಾ ನಿಕೋಟಿನ್ ಮಿಶ್ರಿತ ಯಾವುದೇ ರೀತಿಯ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿ, ದಾಸ್ತಾನು (Storage), ವಿತರಣೆ, ಸಾಗಣೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಗ್ರಾಹಕರು ಸುಲಭವಾಗಿ ಬೆರೆಸಿ ಬಳಸುವಂತೆ ಪ್ರತ್ಯೇಕವಾಗಿ ಪ್ಯಾಕ್ ಮಾಡಿ ಮಾರಾಟ ಮಾಡುವ ಪಾನ್ ಮಸಾಲಾ ಮತ್ತು ತಂಬಾಕು ಸ್ಯಾಚೆಟ್‌ಗಳಿಗೂ (Sachets/Pouches) ಈ ನಿಷೇಧ ಅನ್ವಯವಾಗಲಿದೆ. ಸ್ಯಾಚೆಟ್, ಪೌಚ್ ಅಥವಾ ಯಾವುದೇ ಹೆಸರಿನಲ್ಲಿ ಮಾರಾಟ ಮಾಡಿದರೂ ಅಂತಹ ಉತ್ಪನ್ನಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, 2006 ರ ಸೆಕ್ಷನ್ 30(2)(ಎ) ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ (ಮಾರಾಟದ ಮೇಲಿನ ನಿಷೇಧ ಮತ್ತು ನಿರ್ಬಂಧಗಳು) ನಿಯಮಾವಳಿ 2011 ರ ನಿಯಮ 2.3.4 ರ ಅಡಿಯಲ್ಲಿ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ. ನಿಯಮ ಉಲ್ಲಂಘಿಸುವ ತಯಾರಕರು, ವಿತರಕರು ಹಾಗೂ ಚಿಲ್ಲರೆ ವ್ಯಾಪಾರಿಗಳ ವಿರುದ್ಧ ವಿಶೇಷ ತಪಾಸಣೆ ನಡೆಸಿ ಕಠಿಣ ಕಾನೂನು ಕ್ರಮ ಜರುಗಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!