BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಮಂಥನ

ಸ್ವಾತಂತ್ರ್ಯ ದಿನಾಚರಣೆ ಮನೆ ಮನೆಯ ಹಬ್ಬವಾಗಲಿ ~ರಾಘವೇಂದ್ರ ಪ್ರಭು, ಕವಾ೯ಲು

ಸ್ವಾತಂತ್ರ್ಯ ದಿನಾಚರಣೆಯ ಇತಿಹಾಸ ನಮ್ಮೆಲ್ಲರಿಗೂ ಗೊತ್ತಿರುವಂತದ್ದೇ. ಅದೇನು ಮಹಾ, ಬ್ರಿಟಿಷರ ವಿರುದ್ಧ ಹೋರಾಡಿ ನಮ್ಮದೇ ಸರ್ಕಾರ ಸ್ಥಾಪನೆಯಾದ ದಿನ ಎಂದು ಮೂಗು ಮುರಿಯುವವರ ಸಂಖ್ಯೆದಿನ ಕಳೆದಂತೆ ದೊಡ್ಡದಾಗುತ್ತಿದೆ. ಅಂದು ಹೋರಾಡಿ ಸ್ವಾತಂತ್ರ್ಯ ತಂದು ಕೊಟ್ಟರು. ಇಂದು ನಾವೇನು ಮಾಡುವುದು? ಎಂದು ಹಲವರು ಪ್ರಶ್ನೆ ಕೇಳುತ್ತಾರೆ.‌

ಇವರಿಗೆ ಮಾಗ೯ದಶ೯ನ ಮಾಡಿ ನಮ್ಮ ದೇಶದ ಘನತೆ ಶ್ರೇಷ್ಠತೆಯ ಬಗ್ಗೆ ಪರಿಚಯ ಮಾಡ ಬೇಕಾದ ಸ್ಥಿತಿ ಇದೆ.


ಶೋಕಿಯ ಆಚರಣೆ ಸಲ್ಲದು;-

ಸ್ವಾತಂತ್ರ್ಯ ದಿನಾಚರಣೆಗೆ ಸಿದ್ಧ ಮಾದರಿಯ ಒಂದು ಸಂದೇಶ ಭಾಷಣ, ರಾಷ್ಟ್ರಧ್ವಜ, ಭೂಪಟ, ಮಹಾತ್ಮ ಗಾಂಧಿ ಚಿತ್ರ ಇರುವ ಚಿತ್ರ ಸಂದೇಶವನ್ನು ವಾಟ್ಸ್‌ಆ್ಯಪ್‌ನಲ್ಲಿ ತೇಲಿ ಬಿಡುತ್ತಾರೆ. ‘ಹ್ಯಾಪಿ ಇಂಡಿಪೆಂಡೆನ್ಸ್ ಡೇ’ ಎಂದು ಹೇಳಿ ತಾವು ಸ್ವಾತಂತ್ರ್ಯ ದಿನಾಚರಣೆ ಆಚರಿಸಿದೆವು ಎಂದು ಸಂಭ್ರಮಿಸುತ್ತಾರೆ. ಈ ಸಂದೇಶಗಳನ್ನು ಎಲ್ಲರಿಗೂ ಕಳುಹಿಸುತ್ತಾರೆ. ಈ ಮೂಲಕ ಸ್ವಾತಂತ್ರ್ಯವನ್ನು ಆಚರಿಸುವವರು ನಮ್ಮಲ್ಲಿ ಇದ್ದಾರೆ.ಕೇವಲ ಶೋಕಿಗಾಗಿ ಆಚರಿಸಿ ನಾವೇ ದೊಡ್ದ ಸಾಧನೆ ಮಾಡಿದ್ದೇವೆ ಎಂದು ಹೇಳುವವರಲ್ಲಿ ನಮ್ಮ ಹೋರಾಟಗಾರ ಶ್ರಮ ತ್ಯಾಗ ದ ಬಗ್ಗೆ ಹೇಳಬೇಕಾಗಿದೆ.

ಮತ್ತೆ ಹಲವರು ಇಂತಹ ಸಂದೇಶಗಳನ್ನು ತೆರೆದೇ ನೋಡುವುದಿಲ್ಲ. ರಜಾ ಸಿಕ್ಕಿತೆಂದು ಪ್ರವಾಸಕ್ಕೆ ಹೊರಡುತ್ತಾರೆ. ಮನೆಯಲ್ಲಿ ಕುಳಿತು ಟಿ.ವಿಯಲ್ಲಿ ಹಾಕುವ ಸಿನಿಮಾಗಳನ್ನು ವೀಕ್ಷಿಸುತ್ತಾರೆ. ಇಲ್ಲವೇ ಮನೆಯಲ್ಲಿನಿದ್ದೆಗೆ ಜಾರುತ್ತಾರೆ.

ಅತ್ತ ಜಿಲ್ಲಾಡಳಿತ ಆಚರಿಸುವ ಸ್ವಾತಂತ್ರ್ಯ ದಿನಾಚರಣೆ ಜನರಿಲ್ಲದೇ ಬಣಗುಡುವಂತಾಗುತ್ತಿದೆ. ಅಧಿಕಾರಿಗಳು ಕಡ್ಡಾಯವಾಗಿ ಬರಲೇಬೇಕು ಎಂದು ಆದೇಶ ಹೊರಡಿಸುವ ಮಟ್ಟಕ್ಕೆ ಅಧಿಕಾರಿಗಳ ಬದ್ಧತೆ ಇಳಿದಿದೆ. ಮನಸೊಳಗೆ ಬೈಯ್ದುಕೊಳ್ಳುತ್ತ ಬರುವವರು ಅನೇಕರು. ಧ್ವಜಾರೋಹಣದಂದು ಸೇರುವ ಬಹುತೇಕ ಮಂದಿ ಶಾಲಾ ಮಕ್ಕಳ ಪೋಷಕರು. ಅದೂ ಅವರು ತಮ್ಮ ಮಕ್ಕಳು ಹೇಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸುತ್ತಾರೆ, ಎನ್‌ಸಿಸಿಯಲ್ಲಿ ಹೇಗೆ ಕವಾಯತು ಮಾಡುತ್ತಾರೆ ಎಂದು ವೀಕ್ಷಿಸುವುದಕ್ಕೆ ಬಂದಿರುತ್ತಾರೆ.‌ ಕೇವಲ ಕಾಟಾಚಾರ ಆಚರಣೆ ಮಾಡದೆ, ಸಾಥ೯ಕತೆಯಿಂದ ಈ ಉತ್ಸವ ಆಚರಿಸಬೇಕು.


ಸ್ವಾತಂತ್ರ್ಯ ದಿನಾಚರಣೆ ಎಂಬುದು ಬಲು ದೊಡ್ಡ ಹಬ್ಬ, ಉತ್ಸವ.-

 ಅಂದು ದಸರೆಯ ಪಂಜಿನ ಕವಾಯತಿಗೆ ಸೇರುವಷ್ಟು ಜನ ಸೇರಬೇಕು. ರಾಷ್ಟ್ರಗೀತೆಯನ್ನು ಒಕ್ಕೊರಲಿನಿಂದ ಹೇಳಬೇಕು. ರಾಷ್ಟ್ರಧ್ವಜಕ್ಕೆ ವಂದಿಸಬೇಕು.

ಮನೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಇತಿಹಾಸದ ಪುಸ್ತಕಗಳನ್ನು ತೆರೆಯಬೇಕು. ಮಕ್ಕಳಿಗೆ ಸ್ವಾತಂತ್ರ್ಯ ಹೋರಾಟದ ವಿವಿಧ ಮಗ್ಗುಲುಗಳನ್ನು ಪರಿಚಯ ಮಾಡಿಕೊಡಬೇಕು. ಇಡೀ ದಿನ ದೇಶದ ಸ್ವಾತಂತ್ರ್ಯದ ಮಹತ್ವವನ್ನು ಅರಿಯುವ ಕೆಲಸ ಮಾಡಬೇಕು. ಸ್ವಾತಂತ್ರ್ಯ ದಿನಾಚರಣೆಗೆ ಉಂಟಾಗಿರುವ ಬೆದರಿಕೆಗಳನ್ನು ಕುರಿತು ಚಿಂತಿಸಬೇಕು. ಮುಖ್ಯವಾಗಿ ಯುವ ತಲೆಮಾರಿಗೆ ಅವುಗಳ ಪರಿಚಯ ಮಾಡಿಕೊಡಬೇಕು

ಪ್ಲಾಸ್ಟಿಕ್ ಬಾವುಟ ಹಿಡಿದೊ, ರಾಷ್ಟ್ರಧ್ವಜದ ಚಿತ್ರವನ್ನು ಎಲ್ಲೆಂದರಲ್ಲಿ ಬರೆದೊ, ರಾಷ್ಟ್ರಲಾಂಛನವನ್ನು ಬೇಕಾಬಿಟ್ಟಿ ಇಟ್ಟು ಸ್ವಾತಂತ್ರ್ಯ ದಿನಾಚರಣೆ ಆಚರಿಸಿದೆವು ಎಂದುಕೊಂಡರೆ ಅದು ದೊಡ್ಡ ತಪ್ಪು. ನಿಜಕ್ಕೂ ಈ ರೀತಿ ಮಾಡಿದರೆ ರಾಷ್ಟ್ರಕ್ಕೆ ಅವಮಾನ ಮಾಡಿದಂತೆ. ರಾಷ್ಟ್ರಧ್ವಜಾರೋಹಣಕ್ಕೆ ಗೊತ್ತುಪಡಿಸಿದ ಜಾಗದಲ್ಲಿಯೇ ಮಾಡಬೇಕು. ಜಿಲ್ಲಾಡಳಿತ ಸಕಾ೯ರ ಅಥವಾ ಶಾಲಾ ಕಾಲೇಜುಗಳಲ್ಲಿ ಮಾಡುವ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಭಾಗಿಯಾಗಬೇಕು.ಈ ಮೂಲಕ ವಷ೯ದಲ್ಲಿ ಒಮ್ಮೆಯಾದರೂ ದೇಶ ಸೇವಕರ ನೆನಪು ಮಾಡುವ ಕೆಲಸ ಮಾಡಬೇಕಾಗಿದೆ.


ನಮ್ಮ ಸ್ವಾತಂತ್ರದಲ್ಲಿ ರಾಜಕೀಯ ಬೇಡ:

 ದೇಶ ಇಂದು ಸ್ವಾತಂತ್ರ್ಯದ ಅಮೃತ ಮಹೋತ್ಸವ ದಾಟಿ 80ವಷ೯ದ ಸ್ವಾತಂತ್ರ್ಯೋತ್ಸವ ಆಚರಿಸುತ್ತಿದೆ. 

ಸಕಾ೯ರ ಪ್ರತಿ ಮನೆಯಲ್ಲಿ ರಾಷ್ಟ್ರಧ್ವಜ ಹಾರಾಡಬೇಕು ಎಂಬ ಸಂಕಲ್ಪದಿಂದ ಹರ್ ಘರ್ ತಿರಂಗ ಅಭಿಯಾನ ಪ್ರಾರಂಭಿಸಿದೆ.   

ಈ ನಿಟ್ಟಿನಲ್ಲಿಯೂ ರಾಜಕೀಯ, ಮಾತುಗಳು ಕೇಳಿ ಬರುತ್ತಿವೆ.ಇದು ಸಲ್ಲದು ದೇಶಭಕ್ತಿಯ ವಿಷಯದಲ್ಲಿ ರಾಜಕೀಯ ಬರಬಾರದು.

ದೇಶದ ಅಖಂಡತೆ, ದೇಶ ಭಕ್ತಿ ಯ ಕುರಿತು ಚಿಂತನ ಮಂತನ ನಡೆಯಬೇಕು ಈ ಮೂಲಕ ಸ್ವಾತಂತ್ರ್ಯದ ಕಹಳೆ ಎಲ್ಲೆಡೆ ಮೊಳಗಲಿ 

ಭಾರತ ಮಾತೆಗೆ ನಮನವಿರಲಿ ಸದಾ

ದೇಶ ಮೊದಲು ಎನ್ನುವ ಉಸಿರಿರಲಿ ಸದಾ.


~ರಾಘವೇಂದ್ರ ಪ್ರಭು, ಕವಾ೯ಲು


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!