ಕುಂಜಾರುಗಿರಿ ಶ್ರೀದುರ್ಗಾದೇವಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶ್ರೀ ಅದಮಾರು ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಧ್ವಜಾರೋಹಣ ಮಾಡಿ ಸ್ವಾತಂತ್ರ್ಯವನ್ನು ಉಳಿಸಿ ಬಲಿಷ್ಠ ಭಾರತವನ್ನು ಕಟ್ಟುವಲ್ಲಿ ಎಲ್ಲರೂ ದೇಶಾಭಿಮಾನವಿರುವ ರಾಷ್ಟ್ರಭಕ್ತರಾಗಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ದೇವಳದ ತಂತ್ರಿಗಳಾದ ಪುತ್ತೂರು ಶ್ರೀನಿವಾಸ ತಂತ್ರಿ, ಖ್ಯಾತ ವಕೀಲರಾದ ರಾಮಚಂದ್ರ ಅಡಿಗ, ಅರ್ಚಕರಾದ ಗೋಪಾಲಕೃಷ್ಣ ಭಟ್, ದೇವಸ್ಥಾನದ ಅಧಿಕಾರಿಗಳಾದ ನಾಗರಾಜ ರಾವ್, ಮಾಜಿ ಪಂಚಾಯತ್ ಸದಸ್ಯರಾದ ಸುದರ್ಶನ್ ರಾವ್ ಮೊದಲಾದವರು ಉಪಸ್ಥಿತರಿದ್ದರು.
