ಮಲ್ಪೆ: ಮಲ್ಪೆ ಬಂದರಿನಲ್ಲಿ ಮೀನುಗಾರನೊಬ್ಬನನ್ನು ಬೋಟ್‌ನಲ್ಲೇ ಕೊಲೆ ಮಾಡಿರುವ ಭೀಕರ ಘಟನೆ ನಡೆದಿದೆ. ಅಭಿಷೇಕ್ (24) ಹತ್ಯೆಯಾದ ದುರದೃಷ್ಟಕರಮೀನುಗಾರ.
ಇಂದು ಬೆಳಿಗ್ಗೆ ಸುಮಾರು 5.30 ರ ವೇಳೆಗೆ ಬೋಟ್‌ನಲ್ಲಿ ಜೊತೆಗಿದ್ದ ಸಹಕಾರ್ಮಿಕನೇ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಸ್ಥಳಕ್ಕೆ ಮಲ್ಪೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
