ಉಡುಪಿ : ಉಡುಪಿಯ ಮಾರ್ಪಳ್ಳಿ ನಿವಾಸಿ ರಜನಿಕಾಂತ್ ತಂತ್ರಿ(45) ಅವರು ಅಸೌಖ್ಯದಿಂದ 30.08.2026 ರಂದು ರಾತ್ರಿ ಮೃತಪಟ್ಟಿದ್ದಾರೆ.
ಕುಕ್ಕಿಕಟ್ಟೆ ಶಾಲೆಯ ನಿವೃತ್ತ ಶಿಕ್ಷಕರಾದ ದಿ. ಶ್ರೀಪತಿ ತಂತ್ರಿಯವರ ಪುತ್ರರಾಗಿರುವ ರಜನಿಕಾಂತ್ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಕಳೆದ ರಾತ್ರಿ ಮನೆಯಲ್ಲಿ ತೀವ್ರ ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.
ಮೃತರು ಪತ್ನಿ, ತಾಯಿ ಸುಬೋಧಿನಿ ಶಾಲೆಯ ನಿವೃತ್ತ ಶಿಕ್ಷಕಿ ಪ್ರಫುಲ್ಲ, ಸಹೋದರ ಶಶಿಕಾಂತ್ ತಂತ್ರಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ವೃತ್ತಿಯಲ್ಲಿ ಮೆಡಿಕಲ್ ರೆಪ್ ಆಗಿದ್ದರು. ಸಾಹಿತ್ಯಾಸಕ್ತಿ ಹೊಂದಿದ್ದ ರಜನಿಕಾಂತ್ ಅವರ ಹಲವಾರು ಕವನಗಳು ಜನಮನ ಸೆಳೆದಿದ್ದವು.
