BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸುದ್ದಿ

ಉಡುಪಿ: ಪೊಲೀಸ್ ಪೇದೆಯ ಕುಟುಂಬಕ್ಕೆ 1.45 ಕೋಟಿ ವಿಮಾ ಚೆಕ್ ಹಸ್ತಾಂತರ

ಕರ್ತವ್ಯದಲ್ಲಿದ್ದಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟ ದಿವಂಗತ ಪೊಲೀಸ್ ಕಾನ್ಸ್ಟೇಬಲ್ ಶ್ರೀ ಅರ್ಜುನ ಶಂಕರ ನೆಲ್ಲೂರ ರವರ ಅವಲಂಬಿತರಿಗೆ ಎಸ್.ಬಿ.ಐ. ಪೊಲೀಸ್ ಸ್ಯಾಲರಿ ಪ್ಯಾಕೇಜ್ ಯೋಜನೆಯಡಿ ₹1,45,00,000/- ಮೊತ್ತದ ವಿಮಾ ಚೆಕ್ ಅನ್ನು ಮಂಗಳವಾರ ಹಸ್ತಾಂತರಿಸಲಾಯಿತು.

2023-24ನೇ ಸಾಲಿನಲ್ಲಿ ಸಿ.ಎಸ್.ಪಿ. ಜಿಲ್ಲಾ ನಿಯಂತ್ರಣ ಕೊಠಡಿ, ಉಡುಪಿ ಘಟಕದಲ್ಲಿ ಕರ್ತವ್ಯ ನಿರ್ವಹಿಸಿದ್ದ ಅರ್ಜುನ ನೆಲ್ಲೂರ ರವರು, ಹಾವೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದರು.

ದಿನಾಂಕ 04-08-2026 ರಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಎಸ್ ಬಿ ಐ ನ ಪ್ರಾದೇಶಿಕ ವ್ಯವಹಾರ ಕಚೇರಿಯ ರೀಜನಲ್ ಮ್ಯಾನೇಜರ್ ಬಿ ಪ್ರಕಾಶ್ ಅಡಿಗ ಅವರು ಮಾನ್ಯ ಪೊಲೀಸ್ ಅಧೀಕ್ಷಕರು ಶ್ರೀ ಹರಿರಾಂ ಶಂಕರ್, ಐ.ಪಿ.ಎಸ್.ಅವರ ಸಮ್ಮುಖದಲ್ಲಿ ದಿವಂಗತ ಸಿಬ್ಬಂದಿಯವರ ಅವಲಂಬಿತರಿಗೆ ಈ ವೈಯಕ್ತಿಕ ಅಪಘಾತ ವಿಮೆಯ ಚೆಕ್ಕನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಎಸ್.ಬಿ.ಐ.. ನ ಮುಖ್ಯ ವ್ಯವಸ್ಥಾಪಕ ಕೀಳಂಜೆ ಶ್ರೀಕೃಷ್ಣರಾಜ ಭಟ್, ಮಲ್ಪೆ ಶಾಖೆಯ ಮೆನೇಜರ್ ರಾಜೇಶ್ ಗಂಗೊಳ್ಳಿ,ಇತರ ಅಧಿಕಾರಿಗಳಾದ ಶ್ರೀನಿವಾಸ್, ಪ್ರಣವ್ ಪೈ, ತನ್ಮಯ್, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಮೃತ ಪೇದೆಯವರ ಕುಟುಂಬಸ್ಥರು ಉಪಸ್ಥಿತರಿದ್ದರು.

ಪೊಲೀಸ್ ಇಲಾಖೆ ಮತ್ತು ಎಸ್.ಬಿ.ಐ. ನಡುವಿನ ಒಪ್ಪಂದದಂತೆ ಕರ್ತವ್ಯದ ವೇಳೆ ಮೃತಪಟ್ಟ ಸಿಬ್ಬಂದಿಯವರ ಕುಟುಂಬಕ್ಕೆ ಈ ವಿಮಾ ಸೌಲಭ್ಯ ದೊರಕಿದೆ. ಇಂಥ ವಿಮಾ ಯೋಜನೆಗಳು ಎಲ್ಲಾ ಎಸ್‌ಬಿಐ ಶಾಖೆಗಳಲ್ಲಿ ಲಭ್ಯವಿದ್ದು ಇದರ ಸದುಪಯೋಗವನ್ನು ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಪಡೆದುಕೊಳ್ಳಬೇಕು ಎಂದು ಪ್ರಕಾಶ ಅಡಿಗ ಅವರು ವಿನಂತಿಸಿದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!