ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ 90.4 ಮೆಗಾಹರ್ಟ್ಝ್ ಸಮುದಾಯ ಬಾನುಲಿ ಕೇಂದ್ರವು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ಅರ್ಪಿಸುತ್ತಿರುವ ಕಥೆ ಕೇಳೋಣ ಸರಣಿ ಕಾರ್ಯಕ್ರಮದ 225ನೇ ಸಂಚಿಕೆ ಆಗಸ್ಟ್ ತಿಂಗಳ ದಿನಾಂಕ 22 ರಂದು ಶನಿವಾರ ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಈ ಸಂಚಿಕೆಯಲ್ಲಿ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆಯ ಸಹಾಯಕ ನಿರ್ದೇಶಕರಾಗಿರುವ ಪೂರ್ಣಿಮಾ ಅವರಿಂದ ಸ್ವರಚಿತ ಕಥೆಯನ್ನು ಕೇಳುವಿರಿ.
ಈ ವಿಶೇಷ ಸಂಚಿಕೆಯಲ್ಲಿ ಮಂಗಳೂರು ಆಕಾಶವಾಣಿಯ ಮೊದಲ ಉದ್ಘೋಷಕ ಹಾಗೂ ವಾರ್ತಾವಾಚಕರಾಗಿದ್ದ ಕೆ.ಟಿ ಕೃಷ್ಞಕಾಂತ್ ಮತ್ತು ಕನ್ನಡ ಪುಸ್ತಕ ಪ್ರಾಧಿಕಾರ- ಬೆಂಗಳೂರು ಇದರ ಅಧ್ಯಕ್ಷರಾದ ಡಾ.ಮಾನಸ ಅವರ ಶುಭನುಡಿಗಳನ್ನೂ ಆಲಿಸಲಿದ್ದೀರಿ. ಆಗಸ್ಟ್ 23 ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು. ರೇಡಿಯೊದಲ್ಲಿ ಮಾತ್ರವಲ್ಲದೆ
ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ
https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿಕೊಂಡು ಈ ಕಾರ್ಯಕ್ರಮವನ್ನು ಕೇಳಬಹುದಾಗಿದೆ ಎಂದು ರೇಡಿಯೊ ಮಣಿಪಾಲ್ ನ ಪ್ರಕಟಣೆ ತಿಳಿಸಿದೆ.
