BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಅಪರಾಧ

ಡೇವಿಡ್ ಕೊಲೆ ಪ್ರಕರಣ : ನಟೋರಿಯಸ್ ಗ್ಯಾಂಗ್ ಸ್ಟರ್ ಅನುಜ್ ಬಂಧನ!

ದಿನಾಂಕ 07/08/2026 ರಂದು ಮಧ್ಯಾಹ್ನ 3:45 ಗಂಟೆಗೆ ಕಾಪು ತಾಲೂಕು ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್‌ ಕಾಂಪ್ಲೆಕ್ಸ್‌ ನಲ್ಲಿ ಪ್ರಿನ್ಸ್ ಎಂಟರ್ಪ್ರೈಸಸ್ ನ ಮಾಲಕ ಡೇವಿಡ್ ಡಿಸೋಜಾ ಎಂಬವರನ್ನು ಮೋಟಾರು ಸೈಕಲಿನಲ್ಲಿ ಬಂದ ಆರೋಪಿತರ ಪೈಕಿ ಸಹಸವಾರನು ಪಿಸ್ತೂಲ್ ನಿಂದ ಡೇವಿಡ್ ಡಿಸೋಜಾರವರ ತಲೆಗೆ ಗುಂಡು ಹಾರಿಸಿ ಕೊಲೆ ಮಾಡಿದ ಬಗ್ಗೆ ಶಿರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ. 

ಈ ಪ್ರಕರಣದ ತನಿಖೆ ಸಂಬಂಧ ನಂಜ ನಾಯಕ್ ಪೊಲೀಸ್ ಉಪನಿರೀಕ್ಷಕರು, ಕುಂದಾಪುರ ಠಾಣೆ ಮತ್ತು ವಿನಯ್, ಪೊಲೀಸ್ ಉಪನಿರೀಕ್ಷಕರು ಕೊಲ್ಲೂರು ಠಾಣೆ ಮತ್ತು ತಂಡ ಈ ದಿನ ಬೆಳಿಗ್ಗೆ 6-6.30 ಸಮಯದಲ್ಲಿ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡೇವಿಡ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟ ಮೂವರು ಶೂಟರ್ ಗಳನ್ನು ಕಳುಹಿಸಿದ ಆರೋಪಿ ಮುಂಬೈನ ನಟೋರಿಯಸ್ ಗ್ಯಾಂಗ್ ಸ್ಟರ್ ಅನುಜ್ ಪಾಟೀಲ್(35) ತಂದೆ: ಕಮಲೇಶ್ವರ ಪಾಟೀಲ್, ಸಾರ್ಮರ್, ನಳಂದ, ಬಿಹಾರ ಈತನನ್ನು ದಸ್ತಗಿರಿ ಮಾಡಲಾಗಿರುತ್ತದೆ. ಆರೋಪಿಯನ್ನು ದಸ್ತಗಿರಿ ಮಾಡಿ ಕರೆದುಕೊಂಡು ಬರುವ ಸಮಯದಲ್ಲಿ ಪೊಲೀಸ್ ಸಿಬ್ಬಂದಿಯವರ ಮೇಲೆ ಹಲ್ಲೆ ನಡೆಸಿ, ಕೊಲ್ಲೂರು ಠಾಣೆ ಪಿಎಸ್ಐ ವಿನಯ್ ರವರ ಆಯುಧವನ್ನು ಕಸಿದು, ಫೈಯರ್ ಮಾಡಿದ್ದು, ಈ ಸಮಯದಲ್ಲಿ ಕುಂದಾಪುರ ಪೊಲೀಸ್ ಉಪನಿರೀಕ್ಷಕರಾದ ನಂಜ ನಾಯಕರವರು ಆತ್ಮ ರಕ್ಷಣೆಗಾಗಿ ಆರೋಪಿಯ ಕಾಲಿಗೆ ಫೈಯರ್ ಮಾಡಿರುತ್ತಾರೆ. ಆರೋಪಿಯನ್ನು ಚಿಕಿತ್ಸೆಗಾಗಿ ಉಡುಪಿಯ ಅಜ್ಜರ ಕಾಡು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಆರೋಪಿಯು ಮುಂಬೈ ನಲ್ಲಿ ಕಾರ್ಯಾಚರಿಸುತ್ತಿದ್ದು 2017 ರಿಂದ ತಲೆಮರಿಸಿಕೊಂಡಿರುತ್ತಾನೆ. ಈತನ ವಿರುದ್ಧ ಮಹಾರಾಷ್ಟ್ರದಲ್ಲಿ MCOCA ಕಾಯ್ದೆ ದಾಖಲಿಸಲಾಗಿರುತ್ತದೆ. ಇತನ ವಿರುದ್ಧ ಒಟ್ಟು 11 ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 10 ಪ್ರಕರಣಗಳಲ್ಲಿ 10 ಪ್ರಕರಣಗಳು Arms act ಪ್ರಕರಣಗಳಾಗಿರುತ್ತದೆ. ಮಹಾರಾಷ್ಟ್ರದಲ್ಲಿ ನಾಲ್ಕು, ಗುಜರಾತ್ ನಲ್ಲಿ ಐದು, Daman And Diuನಲ್ಲಿ ಒಂದು, ಕರ್ನಾಟಕದಲ್ಲಿ ಒಂದು ಪ್ರಕರಣ ದಾಖಲಾಗಿರುತ್ತದೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!