BREAKING
ಸುದ್ದಿ

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಉಡುಪಿ ಮೂಲದ ಪೈಲೆಟ್ ಮೃತ್ಯು!

ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ತರಬೇತಿ ಪೈಲೆಟ್ ಅಭಿಷೇಕ್ ಪೂಜಾರಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ಆ.27ರಂದು ಕಾನ್ಪುರದಲ್ಲಿ ತರಬೇತಿ ವಿಮಾನ ಪತನಗೊಂಡಿರುವ ಘಟನೆ ನಡೆದಿದ್ದು, ಘಟನೆಯಲ್ಲಿ ಅಭಿಷೇಕ್ ಪೂಜಾರಿ ಮೃತಪಟ್ಟಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹರಿದಾಡಿತ್ತು. ಈ ಹಿನ್ನೆಲೆಯಲ್ಲಿ ಅವರ ಕುಟುಂಬದ ಹಿನ್ನೆಲೆ ಹಾಗೂ ಘಟನೆ ಕುರಿತು ಮಾಹಿತಿ ಲಭ್ಯವಾಗಿದೆ.

ಅಭಿಷೇಕ್ ಪೂಜಾರಿ ಅವರು ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಣಜಾರು ಗ್ರಾಮದ ಕಡೇಬೆರ್ಕೆ ಮೂಲದವರು. ಕಳೆದ ಸುಮಾರು ಎರಡೂವರೆ ವರ್ಷಗಳಿಂದ ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ಪೈಲೆಟ್ ಆಗಿ ತರಬೇತಿ ಪಡೆಯುತ್ತಿದ್ದರು ಎನ್ನಲಾಗಿದೆ.

ಅವರ ತಂದೆ ಪ್ರಭಾಕರ ಪೂಜಾರಿ ಹಾಗೂ ತಾಯಿ ಶಶಿಕಲಾ ಪೂಜಾರಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿ ವಾಸವಾಗಿದ್ದಾರೆ. ಅಭಿಷೇಕ್ ಅವರು ಆಗಾಗ್ಗೆ ಕುಟುಂಬದೊಂದಿಗೆ ಹಿರಿಯಡ್ಕ ಠಾಣಾ ವ್ಯಾಪ್ತಿಯ ಕಣಜಾರು ಗ್ರಾಮದ ಕಡೇಬೆರ್ಕೆಯಲ್ಲಿರುವ ತಾಯಿಯ ಸಹೋದರ ಜೀವನ್ ಕುಮಾರ್ ಅವರ ಮನೆಗೆ ಬಂದು ಹೋಗುತ್ತಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಘಟನೆ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಕುಟುಂಬದವರು ಮುಂದಿನ ಪ್ರಕ್ರಿಯೆಗಾಗಿ ಕಾನ್ಪುರಕ್ಕೆ ತೆರಳಿದ್ದಾರೆ. ಘಟನೆಗೆ ಸಂಬಂಧಿಸಿದ ಕಾನೂನು ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ತಿಳಿದು ಬಂದಿದೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!