BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ರಾಷ್ಟ್ರೀಯ

ಹೆತ್ತ ತಂದೆಯ ಸಾವಿಗೂ ಕರಗದ ಪುತ್ರಿಯರು! ವಿಡಿಯೋ ಕಾಲ್‌ನಲ್ಲೇ ಅಂತಿಮ ವಿದಾಯ!

ತನ್ನ ಮೂವರು ಹೆಣ್ಣುಮಕ್ಕಳ ಭವಿಷ್ಯಕ್ಕಾಗಿ ಶಿಕ್ಷಣ ನೀಡಲು ಜೀವನವನ್ನೇ ಮುಡಿಪಾಗಿಟ್ಟಿದ್ದ ವೃದ್ಧ ತಂದೆಯೊಬ್ಬರು ಹರ್ಯಾಣದ ಸೋನಿಪತ್‌ನ ವೃದ್ಧಾಶ್ರಮವೊಂದರಲ್ಲಿ ಮೃತಪಟ್ಟಿದ್ದು ಅಂತಿಮ ದರ್ಶನಕ್ಕೂ ಬರಲಾಗದ ಮೂವರು ಪುತ್ರಿಯರು ನೇಪಾಳ, ಉತ್ತರ ಪ್ರದೇಶ ಮತ್ತು ಮುಂಬೈನಿಂದ ವಿಡಿಯೋ ಕಾಲ್ ಮೂಲಕ ತಮ್ಮ ತಂದೆಯ ಅಂತ್ಯಸಂಸ್ಕಾರ ವೀಕ್ಷಿಸಿದ ಅಮಾನವೀಯ ಘಟನೆ ನಡೆದಿದೆ.



ಮೂಲತಃ ಮುಂಬೈನ ಮಾಜಿ ಜವಳಿ ಉದ್ಯಮಿ ಶಿವಚರಣ್ ರಾಮ್ ರತನ್ ಗುಪ್ತಾ ಅವರು ಸೋನಿಪತ್‌ನ ಪಶ್ಚಿಮ ರಾಮ್ ನಗರದಲ್ಲಿ ಸಮಾಜ ಕಲ್ಯಾಣ ಶಿಕ್ಷಾ ಸಮಿತಿ ನಡೆಸುತ್ತಿರುವ ಈ ವೃದ್ಧಾಶ್ರಮದಲ್ಲಿ ಕಳೆದ ಎರಡು ವರ್ಷಗಳಿಂದ ನೆಲೆಸಿದ್ದರು. ಹಿಂದೆ ಅವರ ಪತ್ನಿ ಮೀನಾ ಕೂಡ ಇಲ್ಲೇ ಮೃತಪಟ್ಟಿದ್ದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಗುಪ್ತಾ ಅವರು ಆ. 5 ರಂದು ಮಂಗಳವಾರ ಮುಂಜಾನೆ 3:30 ರ ಸುಮಾರಿಗೆ ಸಾವನ್ನಪ್ಪಿದ್ದರೆ.

ಗುಪ್ತಾ ಅವರ ಮರಣದ ನಂತರ, ವೃದ್ಧಾಶ್ರಮದ ಆಡಳಿತ ಮಂಡಳಿಯು ಅವರ ಮೂವರು ಹೆಣ್ಣುಮಕ್ಕಳನ್ನು ಸಂಪರ್ಕಿಸಿತು.

ಆದರೆ ತಮಗೆ ಬರಲು ಸಮಯವಿಲ್ಲ ಎಂದು ಪುತ್ರಿಯರು ತಿಳಿಸಿದ ಕಾರಣ, ವೃದ್ಧಾಶ್ರಮದ ಆಡಳಿತ ಮಂಡಳಿ ಹಾಗೂ ಸ್ಥಳೀಯ ಸಮುದಾಯ ನಿವಾಸಿಗಳ ಸಹಾಯದಿಂದ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಪುತ್ರಿಯರು ವಿಡಿಯೋ ಕಾಲ್ ಮೂಲಕವೇ ಕಾರ್ಯವನ್ನು ವೀಕ್ಷಿಸಿದರು. ನೇಪಾಳದಲ್ಲಿರುವ ಮಗಳು ಅನಿತಾ ಆನ್‌ಲೈನ್ ಮೂಲಕ 5,100 ರೂಪಾಯಿ ಕಳುಹಿಸಿ ತಂದೆಯ ಅಂತ್ಯಸಂಸ್ಕಾರವನ್ನು ಸರಿಯಾಗಿ ನೆರವೇರಿಸುವಂತೆ ಕೋರಿದ್ದರು.

ವೃದ್ಧಾಶ್ರಮದ ಆಡಳಿತಾಧಿಕಾರಿ ಆನಂದ್ ಕುಮಾರ್ ಪ್ರತಿಕ್ರಿಯಿಸಿ ಗುಪ್ತಾ ಅವರು ತಮ್ಮ ಹೆಣ್ಣುಮಕ್ಕಳೊಂದಿಗೆ ಆಗಾಗ್ಗೆ ದೂರವಾಣಿ ಮೂಲಕ ಮಾತನಾಡುತ್ತಿದ್ದರು. ಆದರೆ ಅವರು ಅನಾರೋಗ್ಯಕ್ಕೆ ಒಳಗಾದ ನಂತರ ಅವರ ಫೋನ್ ಕರೆಗಳು ವಿರಳವಾಗಿದ್ದವು.

ಗುಪ್ತಾ ಅವರ ಆರೋಗ್ಯ ಕ್ಷೀಣಿಸುತ್ತಿರುವ ಬಗ್ಗೆ 20 ದಿನಗಳ ಹಿಂದೆಯೇ ಮೂವರು ಪುತ್ರಿಯರಿಗೆ ತಿಳಿಸಲಾಗಿತ್ತು. ಆದರೂ ಅವರು ತಂದೆಯನ್ನು ನೋಡಲು ಬರಲಿಲ್ಲ.

ಗುಪ್ತಾ ಅವರ ಮರಣ ನಂತರ ಆಡಳಿತ ಮಂಡಳಿಯು ಮತ್ತೆ ಹೆಣ್ಣುಮಕ್ಕಳನ್ನು ಸಂಪರ್ಕಿಸಿ, ಸೋನಿಪತ್‌ಗೆ ಬಂದರೆ ವ್ಯವಸ್ಥೆ ಮಾಡಬಹುದು ಎಂದು ಹೇಳಿತು. ಆದಾಗ್ಯೂ, ಪ್ರಯಾಣಿಸಲು ಸಮಯವಿಲ್ಲ ಎಂದು ಅವರು ಹೇಳಿದ್ದಾರೆ ಎಂದು ಕುಮಾರ್ ಹೇಳಿದರು.

ನಂತರ ಹೆಣ್ಣುಮಕ್ಕಳು ವೀಡಿಯೊ ಕರೆಯ ಮೂಲಕ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದರು ಮತ್ತು ತಮ್ಮ ತಂದೆಯ ಅಂತಿಮ ವಿಧಿಗಳನ್ನು ದೂರದಿಂದಲೇ ವೀಕ್ಷಿಸಿದರು.

ಅಂತಿಮ ಸಂಸ್ಕಾರದ ವೇಳೆ ವಿಡಿಯೋ ಕರೆ ಮುಖಾಂತರ ಸಂಪರ್ಕದಲ್ಲಿದ್ದ ಮಗಳೊಬ್ಬಳು ಇನ್ನು ಎಷ್ಟು ಸಮಯ ಬೇಕಾಗುತ್ತದೆ? ನಾವು ಊಟ ಮಾಡಿ ಸ್ನಾನ ಮಾಡಬೇಕು ಎಂದು ಹೇಳಿದ್ದರು ಎಂಬುದಾಗಿ ಬೇಸರ ಹೊರಹಾಕಿದರು.

ಈ ಘಟನೆ ಇಂಟರ್ನೆಟ್‌ನಲ್ಲಿ ಹೊರಬೀಳುತ್ತಿದ್ದಂತೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಹೆತ್ತ ತಂದೆ-ತಾಯಿಯನ್ನು ಕಡೆಗಣಿಸುವ ಇಂತಹ ಮಕ್ಕಳು ಯಾರಿಗೂ ಬೇಡ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!