BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸುದ್ದಿ

ಮಣಿಪಾಲ : ಮರಕ್ಕೆ ಬುಲೆಟ್ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು!

ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟ ಘಟನೆ ಹೆರ್ಗಾ ಗ್ರಾಮದ ಕೆಳಪರ್ಕಳ ಡೌನ್‌ನಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ಆತ್ರಾಡಿ ನಿವಾಸಿ ಸನತ್ (21) ಮೃತಪಟ್ಟವರು. ಅವರು ಮಣಿಪಾಲದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಸನತ್ ಅವರು ಸ್ನೇಹಿತರೊಂದಿಗೆ ಮಣಿಪಾಲಕ್ಕೆ ಬಂದು ಊಟ ಮುಗಿಸಿ, ರಾತ್ರಿ ಸುಮಾರು 1.25ಕ್ಕೆ ಸ್ನೇಹಿತನಿಗೆ ಸೇರಿದ KA-20-EP-5934 ನೋಂದಣಿ ಸಂಖ್ಯೆಯ ಬುಲೆಟ್ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಹೆರ್ಗಾ ಗ್ರಾಮದ ಕೆಳಪರ್ಕಳ ಡೌನ್‌ನ ಗೋಪಾಲಕೃಷ್ಣ ದೇವಸ್ಥಾನದ ಬಳಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಸನತ್ ಬೈಕ್ ಸಮೇತ ರಸ್ತೆ ಬದಿಯ ಚರಂಡಿಗೆ ಎಸೆಯಲ್ಪಟ್ಟಿದ್ದು, ತಲೆ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದವು. ತಕ್ಷಣ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!