BREAKING
ಸುದ್ದಿ

ಕೊರಗ ಸಮುದಾಯದ ಯುವಕರಿಗೆ ಆಟೋ ರಿಕ್ಷಾ ವಿತರಣೆ

ಕರಾವಳಿ ಕರ್ನಾಟಕದ ಮೂಲ ನಿವಾಸಿಗಳು ಎಂದು ಗುರುತಿಸಲ್ಪಡುವ ಕೊರಗ ಸಮುದಾಯವನ್ನು ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿ ಪ್ರೋತ್ಸಾಹಿಸಬೇಕು ಎಂಬ ಆಶಯದೊಂದಿಗೆ ಮಣಿಪಾಲದ TMG ಫೌಂಡೇಶನ್ ಟ್ರಸ್ಟ್ ನ ಸಿ ಎಸ್ ಆರ್ ನಿಧಿ ಯ ಮೂಲಕ ಯುವಕರಿಗೆ ಆಟೋ ರಿಕ್ಷಾ ವಿತರಣೆ ಕಾರ್ಯಕ್ರಮವನ್ನು 20 ಆಗಸ್ಟ್, 2026ರಂದು ಸಂಜೆ 4 ಗಂಟೆಗೆ ಪಡುಬಿದ್ರಿಯ ಶ್ರೀ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ. 

ದಿ ಮಣಿಪಾಲ್ ಗ್ರೂಪ್ ನ ಚೇರ್ಮನ್ ಶ್ರೀ ಟಿ ಗೌತಮ್ ಪೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಫಲಾನುಭವಿಗಳಿಗೆ ಆಟೋರಿಕ್ಷಾ ವಿತರಣೆ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಮಾಜಿಕ ಕಾರ್ಯಕರ್ತರಾದ ಶ್ರೀ ವಾದಿರಾಜ್ ಅವರು ವಹಿಸಿಕೊಳ್ಳಲಿದ್ದು, ಮುಖ್ಯ ಅತಿಥಿಗಳಾಗಿ ಕಾಪುವಿನ ಶಾಸಕರಾದ ಶ್ರೀ ಸುರೇಶ್ ಶೆಟ್ಟಿ ಗುರ್ಮೆ ಅವರು ಭಾಗವಹಿಸಲಿದ್ದಾರೆ. ಕರ್ನಾಟಕ ಕೇರಳ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಸುಶೀಲ ನಾಡ ಮತ್ತು ಸಮಾಜದ ಪ್ರಮುಖರು ಉಪಸ್ಥಿತರಿರುವರು ಎಂದು ಕಾರ್ಯಕ್ರಮವನ್ನು ಆಯೋಜಿಸುತ್ತಿರುವ ಸಮರ್ಪಣಾ ಉಡುಪಿಯ ಸಂಚಾಲಕರು ಮತ್ತು ಪದಾಧಿಕಾರಿಗಳು ತಿಳಿಸಿದ್ದಾರೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!