ಪೂರ್ಣಪ್ರಜ್ಞ ಕಾಲೇಜು (ಸ್ವಾಯತ್ತ), ರಾಷ್ಟ್ರೀಯ ರಸಾಯನಶಾಸ್ತ್ರ ದಿನಾಚರಣೆ ಅಂಗವಾಗಿ ವಿಶೇಷ ಉಪನ್ಯಾಸ

Udupi: ಪೂರ್ಣಪ್ರಜ್ಞ ಕಾಲೇಜು (ಸ್ವಾಯತ್ತ), ಉಡುಪಿ, ರಸಾಯನಶಾಸ್ತ್ರ ವಿಭಾಗವು ಐಕ್ಯೂಎಸಿ (IQAC) ಸಹಯೋಗದಲ್ಲಿ ರಾಷ್ಟ್ರೀಯ ರಸಾಯನಶಾಸ್ತ್ರ ದಿನಾಚರಣೆಯ ಅಂಗವಾಗಿ "ಆಚಾರ್ಯ ಪ್ರಫುಲ್ಲ ಚಂದ್ರ ರೇ: ಆಧುನಿಕ ಭಾರತೀಯ ರಸಾಯನಶಾಸ್ತ್ರದ ಪಿತಾಮಹ" ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಮಂಗಳವಾರ ಕಾಲೇಜಿನ ಎ.ವಿ. ಸಭಾಂಗಣದಲ್ಲಿ ಆಯೋಜಿ ಸಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಗೋವಿಂದ ದಾಸ ಕಾಲೇಜು, ಸುರತ್ಕಲ್‌ನ ಸ್ನಾತಕೋತ್ತರ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಕಾರ್ತಿಕ್ ಜೆ.ಎಸ್. ಅವರು ಭಾಗವಹಿಸಿ, ಆಚಾರ್ಯ ಪ್ರಫುಲ್ಲ ಚಂದ್ರ ರೇ ಅವರ ಜೀವನ, ವೈಜ್ಞಾನಿಕ ಸಾಧನೆಗಳು ಹಾಗೂ ಭಾರತೀಯ ರಸಾಯನಶಾಸ್ತ್ರ ಕ್ಷೇತ್ರಕ್ಕೆ ನೀಡಿದ ಅಮೋಘ ಕೊಡುಗೆಗಳ ಕುರಿತು ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ಉಪನ್ಯಾಸ ನೀಡಿದರು. ವಿಜ್ಞಾನ ಸಂಶೋಧನೆಯಲ್ಲಿ ಯುವಜನರು ಆಸಕ್ತಿ ಬೆಳೆಸಿಕೊಳ್ಳುವ ಅಗತ್ಯ ವನ್ನು ಅವರು ಒತ್ತಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಮಹೇಶ್ ಭಟ್ ವಹಿಸಿದ್ದರು. ರಸಾಯನಶಾಸ್ತ್ರ ವಿಭಾಗದ ಅಧ್ಯಾಪಕರಾದ ಡಾ. ರಂಗಸ್ವಾಮಿ ಜೆ. ಹಾಗೂ ಶ್ರೀಮತಿ ಸುಪರ್ಣಾ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆ ಯನ್ನು ದ್ವಿತೀಯ ಬಿ.ಎಸ್‌ಸಿ. ವಿದ್ಯಾರ್ಥಿ ದರ್ಶನ್ ನೆರವೇರಿಸಿದರು. ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಮಹೇಶ್ ಭಟ್ ಅವರು ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ದ್ವಿತೀಯ ಬಿ.ಎಸ್‌ಸಿ. ವಿದ್ಯಾರ್ಥಿನಿ ನವ್ಯಾ ವಂದ ನಾರ್ಪಣೆ ಸಲ್ಲಿಸಿದರು.


ರಸಾಯನಶಾಸ್ತ್ರ ವಿಭಾಗದ  ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಆಚಾರ್ಯ ಪ್ರಫುಲ್ಲ ಚಂದ್ರ ರೇ ಅವರ ಆದರ್ಶಗಳನ್ನು ಅನುಸರಿಸಿ ವಿಜ್ಞಾನ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಸಾಧನೆ ಮಾಡುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಲಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು