ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಪ್ರಸನ್ನ ಗಣಪತಿಯ ಸನ್ನಿಧಾನದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಅಷ್ಟೋತ್ತರ ಶತ ನಾಳಿಕೇರ ಗಣಪತಿಯಾಗ ವು ವೇದಮೂರ್ತಿ ಕೊರಂಗ್ರಪಾಡಿ ರಾಘವೇಂದ್ರ ಭಟ್ ನೇತ್ರತ್ವದಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀಯುತ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಿತು.
ಮೂಡು ಗಣಪತಿ ಸೇವೆ , ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ಹಾಗೂ ಸಂಜೆ ರಂಗಪೂಜೆ ನೆರವೇರಿತು ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ ತಿಳಿಸಿರುತ್ತಾರೆ.
