BREAKING
ಸುದ್ದಿ

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ನವರಾತ್ರಿ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಅ. 11ರಿಂದ ಅ. 21ರ ತನಕ ನಡೆಯಲಿರುವ ನವರಾತ್ರಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಕ್ಷೇತ್ರದಲ್ಲಿ ಶನಿವಾರ ನಡೆಯಿತು.

ಬಿಡುಗಡೆಗೊಳಿಸಿದ ಕ್ಷೇತ್ರದ ಆಡಳಿತ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾತನಾಡಿ, ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವವು ಭಕ್ತಿ, ಶ್ರದ್ಧೆ ಹಾಗೂ ಧಾರ್ಮಿಕ ಆಚರಣೆಗಳೊಂದಿಗೆ ವೈಭವದಿಂದ ನಡೆಯಲಿದೆ. ನವರಾತ್ರಿಯ ಒಂಬತ್ತು ದಿನ ಮತ್ತು ವಿಜಯದಶಮಿಯಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕ್ಷೇತ್ರದ ವತಿಯಿಂದ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತರ ಸಹಭಾಗಿತ್ವ ಹಾಗೂ ಸೇವಾ ಮನೋಭಾವ ಮಹೋತ್ಸವದ ವಿಶೇಷತೆಯಾಗಿದ್ದು, ಎಲ್ಲರಿಗೂ ಸುಖ, ಶಾಂತಿ, ಸಮೃದ್ಧಿ, ಲೋಕಕಲ್ಯಾಣಕ್ಕಾಗಿ ಪ್ರಾರ್ಥಿಸಲಾಗುವುದು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ತಿಳಿಸಿದರು.

ಕ್ಷೇತ್ರದ ನಿಯೋಜಿತ ತಂತ್ರಿ ವೇ|ಮೂ| ಸರ್ವೇಶ ತಂತ್ರಿ, ವೇ|ಮೂ| ವಿಖ್ಯಾತ್ ಭಟ್, ವೇ|ಮೂ| ಗಣೇಶ ಸರಳಾಯ, ಕರ್ಣಾಟಕ ಬ್ಯಾಂಕಿನ ಕುಂಭಾಶಿ ಶಾಖೆಯ ಪ್ರಬಂಧಕ ಪ್ರತೀಕ್ ಟಿ.ಆರ್., ಅಖಿಲ ಭಾರತ ದೈವರಾಧಕರ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ವಿನೋದ್ ಶೆಟ್ಟಿ, ಕಲಾನಿಧಿ ತಂಡದ ಅಧ್ಯಕ್ಷೆ ಭಾಗ್ಯಲಕ್ಷ್ಮೀ ಉಪ್ಪೂರು, ಕ್ಷೇತ್ರದ ಉಸ್ತುವಾರಿ ಕುಸುಮಾ ನಾಗರಾಜ ಆಚಾರ್ಯ, ಪ್ರಜ್ಞಾ ಆಂ.ಮಾ.ಶಾಲಾ ಮುಖ್ಯಶಿಕ್ಷಕಿ ಉಷಾ ರಮಾನಂದ, ಕ್ಷೇತ್ರದ ಪ್ರಧಾನ ಅರ್ಚಕ ಅನೀಶ್ ಆಚಾರ್ಯ, ಅಲಂಕಾರ ತಜ್ಞ ಆನಂದ ಬಾಯರಿ, ಸ್ವಸ್ತಿಕ್ ಆಚಾರ್ಯ, ನಾಗಶಯನ ಪದಕಣ್ಣಾಯ, ಪ್ರಸನ್ನರಾವ್, ಕಲಾವತಿ ಆಚಾರ್ಯ, ಸ್ವಾತಿ ಆಚಾರ್ಯ, ಮೃಣಾಲ್ ಕೃಷ್ಣ ಉಪಸ್ಥಿತರಿದ್ದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!