BREAKING
ರಾಜಕೀಯ

ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆ

ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ ಸಮಿತಿಯ‌ ಅಧ್ಯಕ್ಷೆ ಶ್ರೀಮತಿ ಜ್ಯೋತಿ ಹೆಬ್ಬಾರ್ ಅವರ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆಯು ತಾ. 26.9.2026ರಂದು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ಅಭಿನಂದಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀಮತಿ ಜ್ಯೋತಿ ಹೆಬ್ಬಾರ್ ಅವರು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿ ಪಕ್ಷದ ಸಾರಥ್ಯ ವಹಿಸಿದ‌ ಶ್ರೀ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರ ಅಧಿಕಾರದ ಅವಧಿಯಲ್ಲಿ ಕಾಂಗ್ರೆಸ್ ಪಕ್ಷದ ಗತವೈಭವ ಮರುಕಳಿಸಲಿ ಹಾಗೂ ಎಲ್ಲಾ ಸ್ಥರಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೆಚ್ಚಿನ ಅಭ್ಯರ್ಥಿಗಳು ಗೆಲ್ಲುವುದರ ಮೂಲಕ ಪಕ್ಷದ ಬಾವುಟ ಬಾನೆತ್ತರಕ್ಕೆ ಹಾರಲಿ ಎಂದು ಆಶಿಸುತ್ತಾ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯು ಪಕ್ಷ ಸಂಘಟನೆ ಹಾಗೂ ಪಕ್ಷ ಬಲವರ್ಧನೆ ವಿಚಾರದಲ್ಲಿ ನಿಮ್ಮೊಂದಿಗೆ ಸಂಪೂರ್ಣವಾಗಿ ತೊಡಗಿಸಿಕೊಳ್ಳಲಿದೆ ಎಂದು ತಿಳಿಸಿದರು.

ಕರ್ನಾಟಕ ಸರ್ಕಾರದ ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿ ಕೆ ಶಿವಕುಮಾರ್ ಅವರ ಆಶಯದಂತೆ ಯುವ ಸಮೂಹವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ 16-35 ವಯೋಮಾನದ ಯುವಕ ಯುವತಿಯರನ್ನು ಒಗ್ಗೂಡಿಸಲು "ಭಾರತ್ ಜೋಡೋ ಯುವ ಸಂಘ" ಸಂಘಟನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ಉಡುಪಿ ಜಿಲ್ಲಾದ್ಯಂತ ಬ್ಲಾಕ್ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷರು ಮತ್ತು ಮಹಿಳಾ ಕಾಂಗ್ರೆಸ್‌ನ ಪದಾಧಿಕಾರಿಗಳು ಶ್ರಮಿಸಬೇಕೆಂದು ಕರೆ ನೀಡಿದರು.

ಅಭಿನಂದನೆ ಸ್ವೀಕರಿಸಿದ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರು ಪಕ್ಷದ ಕಾರ್ಯಕರ್ತರ ಧ್ವನಿಯಾಗಿರುತ್ತೇನೆ ಹಾಗೂ ಪಕ್ಷ ಸಂಘಟಿಸುವಲ್ಲಿ ಎಲ್ಲರ ಸಹಕಾರ ಪಡೆದು ಕಾಂಗ್ರೆಸ್ ಪಕ್ಷದ ಹೆಚ್ಚಿನ ಅಭ್ಯರ್ಥಿಗಳನ್ನು ಗೆಲ್ಲಿಸಲು ಶಕ್ತಿ ಮೀರಿ ಶ್ರಮಿಸುತ್ತೇನೆ. ಜಿಲ್ಲೆಯಲ್ಲಿ ಎಲ್ಲಾ ನಾಯಕರು ಹಾಗೂ ಕಾರ್ಯಕರ್ತರು ಸೇರಿ ಪಕ್ಷವನ್ನು ಸಂಘಟಿಸಿದರೆ ಗೆಲುವು ನಮ್ಮದಾಗಲಿದೆ ಎಂದು ತಿಳಿಸಿ ಸದಾ ಮಹಿಳಾ ಕಾಂಗ್ರೆಸ್‌ನ ಜೊತೆಯಿದ್ದು ಅವರ ಧ್ವನಿಯಾಗಿರುತ್ತೇನೆ ಎಂದು ತಿಳಿಸಿ ತಮ್ಮನ್ನು ಗೌರವಿಸಿದ್ದಕ್ಕಾಗಿ ಧನ್ಯವಾದ ಸಲ್ಲಿಸಿದರು.

ಈ ಸಭೆಯಲ್ಲಿ ಹಿರಿಯ ಮಹಿಳಾ ಕಾಂಗ್ರೆಸ್‌ನ ನಾಯಕಿಯರಾದ ಸರಸು ಬಂಗೇರ, ಗೀತಾ ವಾಗ್ಳೆ, ಮೀನಾಕ್ಷಿ ಮಾಧವ ಬನ್ನಂಜೆ, ಅನಿತಾ ಡಿ'ಸೋಜಾ, ಹಾಗೂ ಬ್ಲಾಕ್ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷರಾದ ಬಾನು ಭಾಸ್ಕರ್, ರೇಖಾ ಸುವರ್ಣ, ಅನಿತಾ ಬಾಬು ಪೂಜಾರಿ, ಮಮತಾ ಶೆಟ್ಟಿ, ಶಾಂತಲತಾ ಶೆಟ್ಟಿ, ಶಾಂತಾ ರೈ, ಸುಮಾ ಅಡ್ಯಂತಾಯ, ಸೂರ್ಯಕಾಂತಿ ಹಾಗೂ ಮಹಿಳಾ ನಾಯಕಿಯರಾದ ಚಂದ್ರಿಕಾ ಶೆಟ್ಟಿ, ಐರಿನ್ ಅಂದ್ರಾದೆ, ಐಡಾ ಗಿಬ್ಬ ಡಿ'ಸೋಜಾ, ಪ್ರಭಾ ಶೆಟ್ಟಿ, ರಮಾ ದೇವಿ, ನಾಗಮ್ಮ, ರೋಶ್ನಿ ಶೆಟ್ಟಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಪುಷ್ಪ ಅಂಚನ್ ಅವರು ಸ್ವಾಗತ ಕೋರಿದರು. ಸಂಧ್ಯಾ ತಿಲಕ್‌ರಾಜ್ ಅವರು ಗತಸಭೆಯ ವರದಿ ವಾಚಿಸಿದರು. ಗೋಪಿ ನಾಯ್ಕ್ ಅವರು ಧನ್ಯವಾದ ಸಲ್ಲಿಸಿದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!